ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು- ಹುಬ್ಬಳ್ಳಿ ಎಕ್ಸ್ ಪ್ರೆಸ್ ನೂತನ ರೈಲ್ವೆಗೆ ಹಸಿರು ನಿಶಾನೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮೇ 23: ಮೈಸೂರು- ಹುಬ್ಬಳ್ಳಿ ಎಕ್ಸ್ ಪ್ರೆಸ್ ನೂತನ ರೈಲ್ವೆ ಸಂಚಾರಕ್ಕೆ ಮಂಗಳವಾರ ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ದೆಹಲಿಯಿಂದ ವಿಡಿಯೋ ಲಿಂಕ್ ಮುಖಾಂತರ ಚಾಲನೆ ನೀಡಿದರು.

ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ, ಕೇಂದ್ರ ರೈಲ್ವೆ ನಿಲ್ದಾಣದಲ್ಲಿ 17325/ 17326 ರೈಲ್ವೆ ಗಾಡಿ ಸಂಖ್ಯೆಗೆ ಹಸಿರು ನಿಶಾನೆ ತೋರಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು. [ಹುಬ್ಬಳ್ಳಿ- ವಾರಣಾಸಿ ಮಧ್ಯೆ ಮೇ 28ರಿಂದ ರೈಲು ಸಂಚಾರ]

Suresh prabhu flags off Mysuru to Hubballi train through video link from Delhi

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಚಾಮುಂಡಿ ಎಕ್ಸ್ ಪ್ರೆಸ್ ರೈಲಿನಲ್ಲಿ ಸಾಕಷ್ಟು ಪ್ರಯಾಣಿಕರು ಸಂಚಾರ ಮಾಡಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.

ಈ ಸಮಸ್ಯೆಯನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದೆ. ಅಲ್ಲದೇ ಈ ಮಾರ್ಗವಾಗಿ ನೂತನ ರೈಲು ಸಂಚಾರಕ್ಕೆ ಕೇಂದ್ರಕ್ಕೆ ಒತ್ತಡ ಹೇರಿದ್ದೆ.

Suresh prabhu flags off Mysuru to Hubballi train through video link from Delhi

ಮೂರು ವರ್ಷಗಳ ಸತತ ಪ್ರಯತ್ನದಿಂದ ಪ್ರಯಾಣಿಕರ ಕನಸು ನನಸಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ಸಂತಸ ವ್ಯಕ್ತಪಡಿಸಿದರು.

ನೂತನ ರೈಲು ಇನ್ನೂ ಮುಂದೆ ಪ್ರತಿದಿನ ಬೆಳಿಗ್ಗೆ 6.15ಕ್ಕೆ ಮೈಸೂರಿನಿಂದ ಹೊರಟು 9.15 ಕ್ಕೆ ಬೆಂಗಳೂರು ತಲುಪುತ್ತದೆ. ಬಳಿಕ ಅಲ್ಲಿಂದ ನೇರವಾಗಿ ಸಂಜೆ 7.15 ಕ್ಕೆ ಹುಬ್ಬಳ್ಳಿಗೆ ತಲುಪಲಿದೆ.

Suresh prabhu flags off Mysuru to Hubballi train through video link from Delhi

ಈ ಹೊಸ ರೈಲಿಗೆ ವಿಶ್ವ ಮಾನವ ಎಕ್ಸ್ ಪ್ರೆಸ್ ಹೆಸರಿಡುವಂತೆ ಸಚಿವರಿಗೆ ಕೇಳಿದ್ದೇನೆ ಎಂಬುದಾಗಿ ತಿಳಿಸಿದರು.

English summary
Union railway minister Suresh Prabhu flags off Mysuru to Hubballi train through video link from Delhi, on May 23.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X