ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ವಿವಿಗೆ ಪ್ರಪ್ರಥಮ ಮಹಿಳಾ ಉಪಕುಲಪತಿ?

ಮೈಸೂರು ವಿವಿಯಲ್ಲಿ ಕಳೆದೆರಡು ತಿಂಗಳಿನಿಂದ ಖಾಲಿ ಇದ್ದ ಉಪಕುಲಪತಿ ಹುದ್ದೆಯನ್ನು ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಅಲಂಕರಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

By ಯಶಸ್ವಿನಿ ಎಂ.ಕೆ
|
Google Oneindia Kannada News

ಮೈಸೂರು, ಮೇ.24: ಮೈಸೂರು ವಿವಿಯಲ್ಲಿ ಕಳೆದೆರಡು ತಿಂಗಳಿನಿಂದ ಖಾಲಿ ಇದ್ದ ಉಪಕುಲಪತಿ ಹುದ್ದೆಯನ್ನು ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಅಲಂಕರಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಹಿರಿಯ ಮಹಿಳಾ ಕೆ.ಎ.ಎಸ್. ಅಧಿಕಾರಿ ಬಿ. ಭಾರತಿ ಅವರನ್ನು ಮೈಸೂರು ವಿಶ್ವವಿದ್ಯಾನಿಲಯಕ್ಕೆ ಉಪಕುಲಸಚಿವರನ್ನಾಗಿ ನೇಮಕ ಮಾಡುವ ಸಕಲ ಪ್ರಯತ್ನ ನಡೆದಿದೆ. ಪ್ರಸ್ತುತ ಮೈಸೂರು ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾಗಿ ( ಭೂ ನಿರ್ವಹಣೆ ವಿಭಾಗ ) ಭಾರತಿ ಅವರು ಕಾರ್ಯನಿರ್ವಹಿಸುತ್ತಿದ್ದು, ಈ ಹಿಂದೆ ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಪ ವಿಭಾಗಾಧಿಕಾರಿಯಾಗಿ, ಬಳಿಕ ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಭಾರತಿ ಕರ್ತವ್ಯ ನಿರ್ವಹಿಸಿದ್ದರು.[ಮೈಸೂರು ವಿವಿ ಹಂಗಾಮಿ ಕುಲಪತಿಗೆ ಲೇಡಿಸ್ ಹಾಸ್ಟೇಲ್ ನಲ್ಲೇನು ಕೆಲಸ?!]

Will Mysuru University soon get a woman vice chancellor?

ಹಿಂದೆ ಕರ್ನಾಟಕ ರಾಜ್ಯ ಮುಕ್ತ ವಿವಿಗೆ ಭಾರತಿ ಅವರನ್ನೇ ರಿಜಿಸ್ಟ್ರಾರ್ ಆಗಿ ನೇಮಕ ಮಾಡಬೇಕಿತ್ತು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರೇ ಈ ಬಗ್ಗೆ ರಾಜ್ಯಪಾಲರಿಗೆ ಪತ್ರ ಸಹ ಬರೆದಿದ್ದರು. ಆದರೆ ರಾಜ್ಯಪಾಲರು ಸಮ್ಮತಿಸದ ಕಾರಣ ನೇಮಕ ವಿಫಲವಾಗಿತ್ತು.

ಇದೀಗ ಭಾರತಿ ಅವರನ್ನು ಮೈಸೂರು ವಿವಿ ಉಪಕುಲಪತಿಯನ್ನಾಗಿ ನೇಮಕ ಮಾಡುವ ಸಂಬಂಧ ಸರಕಾರದ ಮಟ್ಟದಲ್ಲಿ ಪ್ರಯತ್ನ ನಡೆದಿದೆ. ಇದೀಗ ರಾಜ್ಯ ಸರಕಾರವೇ ಉಪಕುಲಪತಿಯನ್ನು ನೇಮಕ ಮಾಡುವ ಅಧಿಕಾರ ಹೊಂದಿದೆ. ಹಾಗಾಗಿ ಮೈಸೂರು ವಿವಿಗೆ ಕೆ.ಎ.ಎಸ್. ಅಧಿಕಾರಿ ಬಿ.ಭಾರತಿ ಅವರನ್ನು ನೇಮಕ ಮಾಡಲಾಗುತ್ತದೆ ಎಂದು ಬಲ್ಲ ಮೂಲಗಳು ತಿಳಿಸಿವೆ.[ಮೈಸೂರು ವಿವಿ ಗಡಿಯಾರದ ಟಿಕ್ ಟಿಕ್ ಶಬ್ದವೀಗ ಸ್ತಬ್ಧ!]

ಆದರೆ ಮಾಧ್ಯಮಗಳಿಗೆ ಈ ಕುರಿತು ಪ್ರತಿಕ್ರಿಸಿದ ಬಿ.ಭಾರತಿ ಅವರು, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ನಾನು ರಜೆ ಮೇಲೆ ತೆರಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

English summary
Will Mysuru University soon get a woman vice chancellor? Sources said, B.Bharati, senior KAS officer will be the next vice chancellor of Mysuru university.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X