ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾವೇರಿ ಕೊಳ್ಳ, ಅಚ್ಚುಕಟ್ಟು ಪ್ರದೇಶದ ವಾಸ್ತವ ಸ್ಥಿತಿ ವರದಿ ಸಲ್ಲಿಕೆ ಇಂದು

By ವಿಕಾಸ್ ನಂಜಪ್ಪ
|
Google Oneindia Kannada News

ನವದೆಹಲಿ, ಅಕ್ಟೋಬರ್ 17: ಕಾವೇರಿ ವಿವಾದಕ್ಕೆ ಸಂಬಧಿಸಿದಂತೆ ಕರ್ನಾಟಕ ಹಾಗೂ ತಮಿಳುನಾಡಿನ ವಾಸ್ತವ ಪರಿಸ್ಥಿತಿಯ ವರದಿಯನ್ನು ಉನ್ನತ ಮಟ್ಟದ ತಾಂತ್ರಿಕ ಸಮಿತಿಯು ಸೋಮವಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸುವ ಸಾಧ್ಯತೆ ಇದೆ. ಎರಡೂ ರಾಜ್ಯಗಳ ಕಾವೇರಿ ಕೊಳ್ಳ ಪ್ರದೇಶದ ವಾಸ್ತವ ಸ್ಥಿತಿಯ ಬಗ್ಗೆ ವರದಿ ಮಾಡುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು.

ಅಕ್ಟೋಬರ್ 17ರಂದು ವರದಿ ಸಲ್ಲಿಸಲು ಸಮಿತಿಗೆ ಸುಪ್ರೀಂಕೋರ್ಟ್ ಸೂಚಿಸಿತ್ತು. ಕೇಂದ್ರ ಜಲ ಆಯೋಗದ ಅಧ್ಯಕ್ಷ ಜಿ.ಎಸ್.ಝಾ ಸಮಿತಿಯ ನೇತೃತ್ವ ವಹಿಸಿದ್ದರು. ಕರ್ನಾಟಕ ಹಾಗೂ ತಮಿಳುನಾಡಿನ ಜಲಾಶಯಗಳು ಹಾಗೂ ಅಚ್ಚುಕಟ್ಟು ಪ್ರದೇಶಗಳಿಗೆ ಕಳೆದ ವಾರ ಸಮಿತಿಯು ಭೇಟಿ ನೀಡಿತ್ತು.[ಕೇಂದ್ರ ಜಲ ಆಯೋಗದಿಂದ ವಾಸ್ತವ ವರದಿ: ದೇವೇಗೌಡ ವಿಶ್ವಾಸ]

Technical team

ಕಳೆದ ಬಾರಿ ವಿಚಾರಣೆ ವೇಳೆ, ಸುಪ್ರೀಂ ಕೋರ್ಟ್ ಗೆ ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಸೂಚಿಸಲು ಸಾಧ್ಯವಿಲ್ಲ. ಇದು ಶಾಸಕಾಂಗ ಮಾಡಬಹುದಾದದ್ದೇ ವಿನಾ ನ್ಯಾಯಾಂಗವಲ್ಲ ಎಂದು ಹೇಳಿತ್ತು. ಈ ವಿಚಾರವನ್ನು ಕೋರ್ಟ್ ಪ್ರತ್ಯೇಕವಾಗಿ ವಿಚಾರಣೆಗೆ ತೆಗೆದುಕೊಳ್ಳಲಿದ್ದು, ಅಕ್ಟೋಬರ್ 7ರಿಂದ 18ರವರೆಗೆ ನಿತ್ಯ 2 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕೋರ್ಟ್ ಸೂಚಿಸಿತ್ತು.[ಮೆಟ್ಟೂರು ಅಣೆಕಟ್ಟಿನ ಪರಿಶೀಲನೆ ನಡೆಸಿದ ಝಾ ತಂಡ]

ಕಾವೇರಿ ನೀರು ಹಂಚಿಕೆ ವಿಚಾರಣೆಯನ್ನು ಮಂಗಳವಾರ ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದೆ.

English summary
The high level technical committee is likely to submit its report to the Supreme Court on Monday on the Cauvery Water issue. The committee was directed by the Supreme Court to study the ground level situation in the Cauvery basin in Karnataka and Tamil Nadu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X