ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ ಕೋರ್ಟ್ ನಿಂದ ವಿಜಯ್ ಮಲ್ಯ ವಿರುದ್ಧ ಜಾಮೀನುರಹಿತ ವಾರಂಟ್

ಲಂಡನ್ ನಲ್ಲಿ ತಲೆ ಮರೆಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯಗೆ ಫೆರಾ ಉಲ್ಲಂಘನೆ ಪ್ರಕರಣದಲ್ಲಿ ದೆಹಲಿ ಹೈ ಕೋರ್ಟ್ ಜಾಮೀನುರಹಿತ ವಾರಂಟ್ ಹೊರಡಿಸಿದೆ. ಈ ಬಗ್ಗೆ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿತ್ತು

|
Google Oneindia Kannada News

ನವದೆಹಲಿ, ಏಪ್ರಿಲ್ 12: ಫೆರಾ (1995) ಉಲ್ಲಂಘನೆ ಪ್ರಕರಣದಲ್ಲಿ ದೆಹಲಿ ಕೋರ್ಟ್ ಉದ್ಯಮಿ ವಿಜಯ್ ಮಲ್ಯ ವಿರುದ್ಧ ಬುಧವಾರ ಜಾಮೀನುರಹಿತ ವಾರಂಟ್ ಹೊರಡಿಸಿದೆ. ಜಾರಿ ನಿರ್ದೇಶನಾಲಯವು ವಿಜಯ್ ಮಲ್ಯ ವಿರುದ್ಧ ವಿದೇಶ ವಿನಿಮಯ ನಿಯಮಗಳ ಕಾಯ್ದೆ ಉಲ್ಲಂಘನೆ ಪ್ರಕರಣವನ್ನು ದಾಖಲಿಸಿತ್ತು.

ಫಾರ್ಮುಲಾ ಒನ್ ವರ್ಲ್ಡ್ ಚಾಂಪಿಯನ್ ಷಿಪ್ ನಡೆಯುತ್ತಿದ್ದ ಲಂಡನ್ ಸೇರಿದಂತೆ ಯುರೋಪ್ ದೇಶಗಳಲ್ಲಿ 1996, 1997 ಹಾಗೂ 1998ರಲ್ಲಿ ಕಿಂಗ್ ಫಿಷರ್ ಚಿಹ್ನೆ ಪ್ರದರ್ಶಿಸಲು ಬ್ರಿಟಿಷ್ ಸಂಸ್ಥೆಯೊಂದಕ್ಕೆ ಎರಡು ಲಕ್ಷ ಅಮೆರಿಕನ್ ಡಾಲರ್ ನೀಡಿದ್ದರು. ರಿಸರ್ವ್ ಬ್ಯಾಂಕ್ ನ ನಿಯಮವನ್ನು ಅನುಸರಿಸದೆ ಹಣವನ್ನು ಪಾವತಿಸಲಾಗಿದೆ. ಇದು ಫೆರಾ ಉಲ್ಲಂಘನೆಯಾಗುತ್ತದೆ ಎಂದು ಜಾರಿ ನಿರ್ದೇಶನಾಲಯ ಹೇಳಿತ್ತು.[ಮಲ್ಯಗೆ ಶುರುವಾಯ್ತು ನಡುಕ, ಗಡಿಪಾರು ಮನವಿಗೆ ಯುಕೆ ಅಂಕಿತ!]

Delhi Court issues an open ended non-bailable warrant against Vijay Mallya

ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿಜಯ್ ಮಲ್ಯ ವಿರುದ್ಧ ಜಾಮೀನುರಹಿತ ವಾರಂಟ್ ಹೊರಡಿಸಲಾಗಿದೆ. ಅಂದಹಾಗೆ ಲಂಡನ್ ನಲ್ಲಿ ತಲೆ ಮರೆಸಿಕೊಂಡಿರುವ ಮದ್ಯದ ಉದ್ಯಮಿ ವಿಜಯ್ ಮಲ್ಯರನ್ನು ಭಾರತಕ್ಕೆ ಕರೆತರಲು ಎಲ್ಲ ಪ್ರಯತ್ನ ಮಾಡಲಾಗುತ್ತಿದೆ. ಬ್ರಿಟಿಷ್ ಸರಕಾರದ ಜತೆಗೆ ಮಾತುಕತೆ ನಡೆಸಲಾಗಿದೆ.

English summary
Delhi Court issues an open ended non-bailable warrant (NBW) against Vijay Mallya in connection with the FERA (1995)violation case
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X