ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೈಯಕ್ತಿಕ ಮಾಹಿತಿಯ ಖಾಸಗಿತನ ಬೆಂಬಲಿಸಿದ ಕರ್ನಾಟಕ

ನಾಗರಿಕರ ಮಾಹಿತಿಯ ಖಾಸಗಿತನದ ಹಕ್ಕನ್ನು ಬೆಂಬಲಿಸಿದ ಕರ್ನಾಟಕ. ಸುಪ್ರೀಂ ಕೋರ್ಟ್ ನಲ್ಲಿ ತನ್ನ ಅನಿಸಿಕೆಯನ್ನು ಮಂಡಿಸಿದ ಕರ್ನಾಟಕ ಸರ್ಕಾರ.

|
Google Oneindia Kannada News

ಬೆಂಗಳೂರು, ಜುಲೈ 26: ಕರ್ನಾಟಕ ಸೇರಿದಂತೆ 3 ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ಸರ್ಕಾರಗಳು ನಾಗರಿಕರ ಮಾಹಿತಿಯನ್ನು ಖಾಸಗಿ ಹಕ್ಕೆಂದು ಪ್ರತಿಪಾದಿಸುವ ಪ್ರಸ್ತಾವನೆಯನ್ನು ಸುಪ್ರೀಂ ಕೋರ್ಟ್ ನಲ್ಲಿ ಬೆಂಬಲಿಸಿವೆ.

ಕರ್ನಾಟಕ, ಪಂಜಾಬ್, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶ ಹಾಗೂ ಪುದುಚ್ಚೇರಿ (ಕೇಂದ್ರಾಡಳಿತ ಪ್ರದೇಶ) ಸರ್ಕಾರಗಳು ವ್ಯಕ್ತಿಯ ಮಾಹಿತಿಯನ್ನು ಖಾಸಗಿ ಮಾಹಿತಿಯೆಂದು ಪರಿಗಣಿಸಬೇಕು ಹಾಗೂ ಪ್ರತಿಯೊಬ್ಬ ವ್ಯಕ್ತಿಗೆ ತನಗೆ ಸಂಬಂಧಪಟ್ಟ ಮಾಹಿತಿಯ ಖಾಸಗಿತನ ಕಾಪಾಡಿಕೊಳ್ಳುವುದನ್ನು ಸಾಂವಿಧಾನಿಕ ಹಕ್ಕು ಎಂಬ ಸ್ಥಾನಮಾನ ನೀಡಬೇಕು ಎಂಬ ವಾದವನ್ನು ಬೆಂಬಲಿಸಿವೆ.

Karnataka, Punjab, West Bengal, Himachal Pradesh, Puducherry back right to privacy

ಈ ರಾಜ್ಯಗಳ ಪರವಾಗಿ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ವ್ಯಕ್ತಿಗೆ ಸಂಬಂಧಪಟ್ಟ ಮಾಹಿತಿಗಳು ಸೋರಿಕೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಕೆಲವು ಷರತ್ತುಗಳೊಂದಿಗೆ ಅದನ್ನು ಸಂವಿಧಾನಬದ್ಧ ಹಕ್ಕನ್ನಾಗಿಸಬೇಕೆಂದು ನ್ಯಾಯಾಲಯವನ್ನು ಕೋರಿದರು.

ಸರ್ಕಾರದ ಬಹುತೇಕ ಯೋಜನೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯಗೊಳಿಸಲಾಗಿರುವ ಹಿನ್ನೆಲೆಯಲ್ಲಿ ನಾಗರಿಕರ ಮಾಹಿತಿಯು ಸೋರಿಕೆಯಾಗುವ ಆತಂಕ ಸೃಷ್ಟಿಯಾಗಿದೆ.

ಹಾಗಾಗಿ, ಆಧಾರ್ ಮಾಹಿತಿಯನ್ನು ಗೌಪ್ಯವಾಗಿಡಬೇಕೇ , ಬೇಡವೇ ಎಂಬುದನ್ನು ನಿರ್ಧರಿಸಲು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಖೆಹರ್ ನೇತೃತ್ವದಲ್ಲಿ ಜುಲೈ 18ರಂದು ಸಾಂವಿಧಾನಿಕ ಪೀಠವನ್ನು ರಚಿಸಲಾಗಿದೆ. ಈ ಪೀಠವು, ದೇಶದ ಎಲ್ಲಾ ರಾಜ್ಯ ಸರ್ಕಾರಗಳಿಂದ ಈ ಬಗ್ಗೆ ಅಭಿಪ್ರಾಯಗಳನ್ನು ಕಲೆಹಾಕುವ ಕೆಲಸಕ್ಕೆ ಕೈ ಹಾಕಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ತನ್ನ ಅಭಿಪ್ರಾಯವನ್ನು ಸುಪ್ರೀಂ ಕೋರ್ಟ್ ನಲ್ಲಿ ಮಂಡಿಸಿದೆ.

English summary
Four states and one Union territory—Karnataka, Punjab, West Bengal, Himachal Pradesh and Puducherry—on Wednesday backed the constitutionality of the right to privacy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X