ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜನತಾ ಪರಿವಾರ ಉದಯ, ಡಿ.22ಕ್ಕೆ ಮೋದಿ ವಿರುದ್ಧ ಧರಣಿ

By Mahesh
|
Google Oneindia Kannada News

ನವದೆಹಲಿ, ಡಿ.5; ಹಲವು ವರ್ಷಗಳಿಂದ ಹರಿದು ಹಂಚಿ ಹೋಗಿದ್ದ ಜನತಾ ಪರಿವಾರವನ್ನು ಒಗ್ಗೂಡಿಸಿ, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮೋದಿ ಸರ್ಕಾರದ ವಿರುದ್ಧ ಹೋರಾಟ ನಡೆಸುವ ಹೊಣೆಯನ್ನು ಸಮಾಜವಾದಿ ನಾಯಕ ಮುಲಾಯಂ ಸಿಂಗ್ ಅವರಿಗೆ ವಹಿಸಲಾಗಿದೆ.

ಕಳೆದ ಲೋಕಸಭೆ ಚುನಾವಣೆ, ಇತ್ತೀಚಿನ ವಿಧಾನಸಭೆ ಚುನಾವಣೆಗಳಲ್ಲಿ ಜನತಾ ಪರಿವಾರದೊಡನೆ ಗುರುತಿಸಿಕೊಂಡಿರುವ ಪ್ರಾದೇಶಿಕ ಪಕ್ಷಗಳು ಉತ್ತಮ ಸ್ಥಿತಿಯಲ್ಲಿಲ್ಲ. ಹೀಗಾಗಿ ಪ್ರಾದೇಶಿಕ ಪಕ್ಷಗಳನ್ನು ವಿಲೀನಗೊಳಿಸಿ ಮತ್ತೊಮ್ಮೆ ತೃತೀಯರಂಗ ಸ್ಥಾಪನೆ ಮಾಡುವ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ.

ಜೆಡಿ(ಯು) ನಾಯಕ ಮತ್ತು ಬಿಹಾರ ಮಾಜಿ ಮುಖ್ಯಮಂತ್ರಿ ನಿತೀಶ್ ಅಧಿಕೃತವಾಗಿ ಹೇಳಿಕೆ ನೀಡಿ, ಸಭೆಯಲ್ಲಿ ಎಲ್ಲಾ ಪ್ರಾದೇಶಿಕ ಪಕ್ಷಗಳ ನಾಯಕರು ಚರ್ಚೆ ನಡೆಸಿದ್ದು, ಹಲವು ನಿಯಮಗಳ ಮೇರೆಗೆ ತಮ್ಮ ಪಕ್ಷಗಳನ್ನು ಜನತಾ ಪರಿವಾರಕ್ಕೆ ಸೇರ್ಪಡೆಗೊಳಿಸಲು ಎಲ್ಲಾ ಪಕ್ಷದ ನಾಯಕರು ಮನಸ್ಸು ಮಾಡಿದ್ದಾರೆ ಎಂದು ಹೇಳಿದ್ದಾರೆ.

ಕಪ್ಪು ಹಣ, ಅತ್ಯಾಚಾರ, ನಿರುದ್ಯೋಗದಂತಹ ಹತ್ತು ಹಲವು ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಮುಲಾಯಂ ಸಿಂಗ್ ಯಾದವ್ ಅವರಿಗೆ ವಿಲೀನ ಪ್ರಕ್ರಿಯೆ ಜವಾಬ್ದಾರಿ ವಹಿಸಲಾಗಿದೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ರಾಷ್ಟ್ರೀಯ ಜನತಾ ದಳ, ಜನತಾದಳ ಸೆಕ್ಯುಲರ್, ಸಮಾಜವಾದಿ ಜನತಾ ಪಕ್ಷ, ಭಾರತೀಯ ರಾಷ್ಟ್ರೀಯ ಲೋಕದಳ, ಸಮಾಜವಾದಿ ಪಕ್ಷ, ಜನತಾದಳ ಯುನೈಟೆಡ್ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಲಾಲೂ ಪ್ರಸಾದ್ ಯಾದವ್, ನಿತೀಶ್ ಕುಮಾರ್, ಶರದ್ ಯಾದವ್ ಸಭೆಯಲ್ಲಿ ಉಪಸ್ಥಿತರಿದ್ದರು.

'Janata Parivar' merger

ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ರೂಪುರೇಷೆ ಸಿದ್ದಪಡಿಸಲಾಗುತ್ತಿದ್ದು, ಡಿ.22 ರಂದು ದೆಹಲಿಯಲ್ಲಿ ಧರಣಿ ನಡೆಸಲು ಎಲ್ಲಾ ಪಕ್ಷದ ನಾಯಕರು ತೀರ್ಮಾನಿಸಿದ್ದಾರೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

English summary
Samajwadi Party chief Mulayam Singh Yadav was on Thursday authorised to work out modalities for the merger of the "Janata Parivar" (Janata family) parties. The parties have decided to stage a united protest in Delhi on December 22 against government's failure on the issue of black money and promises made to the farmers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X