ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸುಪ್ರೀಂಕೋರ್ಟ್‌ನಲ್ಲಿ ಸ್ಫೋಟ ನಡೆಸುವುದಾಗಿ ಬೆದರಿಕೆ ಪತ್ರ

By ವಿಕಾಸ್ ನಂಜಪ್ಪ
|
Google Oneindia Kannada News

ನವದೆಹಲಿ, ಆಗಸ್ಟ್ 18 : ಸುಪ್ರೀಂಕೋರ್ಟ್ ಆವರಣದಲ್ಲಿ ಸ್ಫೋಟ ನಡೆಸುತ್ತೇವೆ ಎಂಬ ಅನಾಮಿಕ ಪತ್ರವೊಂದು ಬಂದಿದ್ದು, ದೆಹಲಿ ಪೊಲೀಸರು ಕೋರ್ಟ್‌ಗೆ ಭದ್ರತೆ ಹೆಚ್ಚಿಸಿದ್ದಾರೆ. ಕೆಲವು ದಿನಗಳ ಹಿಂದೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಅವರಿಗೆ ಜೀವ ಬೆದರಿಕೆ ಪತ್ರ ಬಂದಿತ್ತು.

ಮಂಗಳವಾರ ಇ ಮೇಲ್ ಮೂಲಕ ಸುಪ್ರೀಂಕೋರ್ಟ್ ಆವರಣದಲ್ಲಿ ಸ್ಫೋಟ ನಡೆಸುವುದಾಗಿ ಬೆದರಿಕೆ ಪತ್ರ ಬಂದಿದೆ. ಅನಾಮಧೇಯ ಇ ಮೇಲ್ ಐಡಿಯಿಂದ ಬಂದ ಪತ್ರದ ಬಗ್ಗೆ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದು ಹುಸಿ ಬಾಂಬ್ ಪತ್ರವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Supreme Court

ಬೆದರಿಕೆ ಪತ್ರದ ಹಿನ್ನಲೆಯಲ್ಲಿ ದೆಹಲಿ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ, ಸುಪ್ರೀಂಕೋರ್ಟ್‌ಗೆ ಭದ್ರತೆಯನ್ನು ಹೆಚ್ಚಿಸಿದ್ದಾರೆ, ಕೋರ್ಟ್ ಪ್ರವೇಶಿಸುವ ದ್ವಾರಗಳಲ್ಲಿ ತಪಾಸಣೆಯನ್ನು ನಡೆಸಲಾಗುತ್ತಿದೆ. ಪತ್ರ ಬಂದಿದ್ದು ಎಲ್ಲಿಂದ ಎಂಬ ಬಗ್ಗೆಯೂ ತನಿಖೆ ಕೈಗೊಂಡಿದ್ದಾರೆ. [ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ]

ನ್ಯಾಯಮೂರ್ತಿಗಳಿಗೆ ಬೆದರಿಕೆ ಬಂದಿತ್ತು : ಆಗಸ್ಟ್ 7ರಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿಗೆ ಜೀವ ಬೆದರಿಕೆ ಪತ್ರ ಬಂದಿತ್ತು. ಮುಂಬೈ ಸರಣಿ ಬಾಂಬ್ ಸ್ಫೋಟದ ಅಪರಾಧಿ ಯಾಕೂಬ್ ಮೆಮನ್ ಗಲ್ಲು ಶಿಕ್ಷೆ ತೀರ್ಪು ನೀಡಿದ್ದ ನ್ಯಾ.ದೀಪಕ್ ಮಿಶ್ರಾ ಅವರಿಗೆ ಬೆದರಿಕೆ ಪತ್ರ ಬಂದ ಹಿನ್ನಲೆಯಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿತ್ತು.

ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎಚ್.ಎಲ್.ದತ್ತು ಅವರು ರಚನೆ ಮಾಡಿದ್ದ ತ್ರಿ ಸದಸ್ಯ ಪೀಠದಲ್ಲಿ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ಪ್ರಫುಲ್ಲಾ ಸಿ ಪಂತ್ ಹಾಗೂ ಅಮಿತಾವ್ ರಾಯ್ ಅವರಿದ್ದರು. ಯಾಕೂಬ್ ಗಲ್ಲು ಶಿಕ್ಷೆಗೆ ತಡೆ ನೀಡುವ ಅರ್ಜಿಯ ವಿಚಾರಣೆಯನ್ನು ತಡರಾತ್ರಿ ಕೋರ್ಟ್‌ನಲ್ಲಿ ನಡೆಸಿ, ಗಲ್ಲು ಶಿಕ್ಷೆಗೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಆದೇಶ ನೀಡಿದ್ದರು.

English summary
The Supreme Court of India today received an anonymous mail threatening the blow up the premises. A mail threatening to blow up the court was received this morning which has led to enhanced security in the Supreme Court of India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X