ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅರಣ್ಯ ಭೂಮಿ ಒತ್ತುವರಿ ಪ್ರಕರಣ, ಬಿಎಸ್‌ವೈಗೆ ಸಮನ್ಸ್

|
Google Oneindia Kannada News

ಶಿವಮೊಗ್ಗ, ಏಪ್ರಿಲ್ 13 : ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ನೇಮಕವಾಗಿರುವ ಬಿ.ಎಸ್.ಯಡಿಯೂರಪ್ಪ ಅವರಿಗೆ ಲೋಕಾಯುಕ್ತ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಅರಣ್ಯ ಭೂಮಿ ಒತ್ತುವರಿ ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಂಡಿರುವ ಕೋರ್ಟ್ ಸಮನ್ಸ್ ನೀಡಿದೆ.

ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ.ರಾಘವೇಂದ್ರ ಅವರು ಭದ್ರಾವತಿ ತಾಲೂಕಿನ ಹುಣಸೆಕಟ್ಟೆ ಬಳಿ ಅಕ್ರಮವಾಗಿ 66 ಎಕರೆ ಅರಣ್ಯ ಭೂಮಿಯನ್ನು ತಮ್ಮ ಹೆಸರಿಗೆ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ವಕೀಲ ವಿನೋದ್ ದೂರು ನೀಡಿದ್ದರು.[ಯಡಿಯೂರಪ್ಪ ವಿರುದ್ಧದ ತನಿಖೆಗೆ ಕೋರ್ಟ್ ತಡೆ]

yeddyurappa

ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಕೋರ್ಟ್, ಮಂಗಳವಾರ ಬಿ.ಎಸ್.ಯಡಿಯೂರಪ್ಪ ಮತ್ತು ಶಿಕಾರಿಪುರ ಶಾಸಕ ಬಿ.ವೈ.ರಾಘವೇಂದ್ರ ಅವರಿಗೆ ನೋಟಿಸ್ ಜಾರಿಗೊಳಿಸಿದೆ. [FIR ರದ್ದಾದರೂ ಕಾನೂನು ಹೋರಾಟ ಮುಗಿದಿಲ್ಲ]

ಪ್ರಕರಣದ ವಿವರ : ವಕೀಲ ವಿನೋದ್ ಅವರು ಮೊದಲು ಶಿವಮೊಗ್ಗದ ಲೋಕಾಯುಕ್ತ ಕೋರ್ಟ್‌ನಲ್ಲಿ ಅರಣ್ಯ ಭೂಮಿ ಅಕ್ರಮ ಒತ್ತುವರಿ ಕುರಿತು ದೂರು ಕೊಟ್ಟಿದ್ದರು. ಆದರೆ, ಸಕ್ಷಮ ಪ್ರಾಧಿಕಾರದಿಂದ ಪ್ರಾಸಿಕ್ಯೂಷನ್‌ಗೆ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಲೋಕಾಯುಕ್ತ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. [ಯಡಿಯೂರಪ್ಪಗೆ ಹೈಕಮಾಂಡ್ ನಾಯಕರು ಕೊಟ್ಟ ಸಂದೇಶ ಏನು?]

ನಂತರ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಲೋಕಾಯುಕ್ತ ಕೋರ್ಟ್ ನೀಡಿದ್ದ ಆದೇಶವನ್ನು ಕೋರ್ಟ್ ಎತ್ತಿ ಹಿಡಿದಿತ್ತು. ನಂತರ ವಿನೋದ್ ಅವರು ಹೊಸದಾಗಿ ದೂರು ದಾಖಲಿಸಿದ್ದರು. ಈಗ ಕೋರ್ಟ್ ವಿಚಾರಣೆ ಕೈಗೆತ್ತಿಕೊಂಡಿದೆ.

ತಡೆಯಾಜ್ಞೆ ಸಿಕ್ಕಿದೆ : ಮತ್ತೊಂದು ಕಡೆ ಗೃಹ ಮಂಡಳಿ ನಿವೇಶನ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರ ವಿರುದ್ಧ ನಡೆಯುತ್ತಿದ್ದ ಲೋಕಾಯುಕ್ತ ತನಿಖೆಗೆ ಕರ್ನಾಟಕ ಹೈಕೋರ್ಟ್ ಕೆಲವು ದಿನಗಳ ಹಿಂದೆ ತಡೆಯಾಜ್ಞೆ ನೀಡಿದೆ.

2012ರಲ್ಲಿ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ವಕೀಲ ವಿನೋದ್ ಅವರು ಶಿವಮೊಗ್ಗದ ಲೋಕಾಯುಕ್ತ ನ್ಯಾಯಾಲಯದಲ್ಲಿ ಯಡಿಯೂರಪ್ಪ ಮತ್ತು ಇತರ 6 ಜನರ ವಿರುದ್ಧ ನಿವೇಶನ ಪಡೆದ ಕುರಿತು ದೂರು ದಾಖಲಿಸಿದ್ದರು. ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ ಸಮನ್ಸ್ ನೀಡಲಾಗಿತ್ತು. ಅದನ್ನು ಹೈಕೋರ್ಟ್‌ನಲ್ಲಿ ಯಡಿಯೂರಪ್ಪ ಪ್ರಶ್ನಿಸಿದ್ದರು. ಕೋರ್ಟ್ ತಡೆಯಾಜ್ಞೆ ಕೊಟ್ಟಿದೆ.

English summary
Shivamogga lokayukta court issued summons to Karnataka BJP president B.S.Yeddyurappa and his son B.Y.Raghavendra and five others in connection with encroachment of forest land at Hunasekatte village of Bhadravathi taluk.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X