ಸೊರಬ ತಾಲೂಕು ಪಂಚಾಯಿತಿ ಚುನಾವಣೆ, ಜೆಡಿಎಸ್‌ ಜಯಭೇರಿ

Posted By:
Subscribe to Oneindia Kannada

ಶಿವಮೊಗ್ಗ, ಜೂನ್ 28 : ಸೊರಬ ತಾಲೂಕು ಪಂಚಾಯಿತಿ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಜೆಡಿಎಸ್ ಜಯಭೇರಿ ಬಾರಿಸಿದೆ. ಜೂನ್ 26ರಂದು ಸೊರಬ ತಾಲೂಕು ಪಂಚಾಯಿತಿ ಚುನಾವಣೆಗೆ ಮತದಾನ ನಡೆದಿತ್ತು.

ಮಂಗಳವಾರ ಮತ ಎಣಿಕೆ ನಡೆದಿದ್ದು 19 ಕ್ಷೇತ್ರಗಳ ತಾಲೂಕು ಪಂಚಾಯಿತಿಯಲ್ಲಿ ಜೆಡಿಎಸ್‌ 11 ಸ್ಥಾನಗಳಲ್ಲಿ ಜಯಗಳಿಸಿದೆ. ಈ ಮೂಲಕ ಕ್ಷೇತ್ರದ ಜೆಡಿಎಸ್‌ ಶಾಸಕ ಮಧು ಬಂಗಾರಪ್ಪ ಅವರು ಪ್ರಭಾವನ್ನು ಉಳಿಸಿಕೊಂಡಿದ್ದಾರೆ. [ತಾ.ಪಂ ಫಲಿತಾಂಶ : ಯಾವ ಜಿಲ್ಲೆಯಲ್ಲಿ ಯಾರಿಗೆ ಗೆಲುವು?]

madhu bangarappa

ರಾಜ್ಯದ ಎಲ್ಲಾ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳಲ್ಲಿ ಫೆಬ್ರವರಿ 13 ಮತ್ತು 20ರಂದು ಚುನಾವಣೆ ನಡೆದಿತ್ತು. ಅವಧಿ ಮುಕ್ತಾಯಗೊಳ್ಳದಿರುವ ಕಾರಣ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಪಂಚಾಯಿತಿ ಚುನಾವಣೆ ಆಗ ನಡೆದಿರಲಿಲ್ಲ. [30 ಜಿಲ್ಲೆಗಳ ಪಂಚಾಯ್ತಿ ಫಲಿತಾಂಶ ಸಂಪೂರ್ಣ ವಿವರ]

ಜೂನ್ 13ರಂದು ಚುನಾವಣಾ ಆಯೋಗ ಚುನಾವಣೆ ವೇಳಾಪಟ್ಟಿ ಪ್ರಕಟಿಸಿತ್ತು. ಜೂನ್ 26ರಂದು ಮತದಾನ ನಡೆದಿತ್ತು. ಇಂದು ಫಲಿತಾಂಶ ಪ್ರಕಟಗೊಂಡಿದ್ದು 19 ಸ್ಥಾನಗಳ ಪೈಕಿ ಜೆಡಿಎಸ್ 11, ಬಿಜೆಪಿ 5, ಕಾಂಗ್ರೆಸ್ 3 ಸ್ಥಾನಗಳಲ್ಲಿ ಜಯಗಳಿಸಿವೆ. ಕಾಂಗ್ರೆಸ್‌ನ ಕುಮಾರ್ ಬಂಗಾರಪ್ಪ ಮತ್ತು ಬಿಜೆಪಿಯ ಹರತಾಳು ಹಾಲಪ್ಪ ಅವರಿಗೆ ಚುನಾವಣೆಯಲ್ಲಿ ಮುಖಭಂಗವಾಗಿದೆ.

ಫೆಬ್ರವರಿಯಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸೊರಬದ 5 ಕ್ಷೇತ್ರಗಳ ಪೈಕಿ 4ರಲ್ಲಿ ಜೆಡಿಎಸ್ ಜಯಗಳಿಸಿತ್ತು. ಈಗ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿಯೂ ಪಕ್ಷ ಜಯಭೇರಿ ಬಾರಿಸಿದೆ.

English summary
Shivamogga district Soraba taluk panchayat election result announced on June 28, 2016. JDS bagged 11 seats out of 19.
Please Wait while comments are loading...