ಪಾವಗಡಕ್ಕೆ ಬಂತು ಏಷ್ಯಾದ ದೊಡ್ಡ ಸೋಲಾರ್ ಪಾರ್ಕ್
ತುಮಕೂರು, ಮೇ 30 : ಏಷ್ಯಾದ ಅತಿ ದೊಡ್ಡ ಸೋಲಾರ್ ಪಾರ್ಕ್ ತುಮಕೂರು ಜಿಲ್ಲೆ ಪಾವಗಡದಲ್ಲಿ ನಿರ್ಮಾಣ ವಾಗಲಿದೆ. ಸುಮಾರು 10 ಸಾವಿರ ಎಕರೆ ಜಾಗದಲ್ಲಿ ಈ ಪಾರ್ಕ್ ತಲೆ ಎತ್ತಲಿದ್ದು, 2 ಸಾವಿರ ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆ ಗುರಿ ಹೊಂದಿದೆ.
ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಈ ಕುರಿತು ಮಾಹಿತಿ ನೀಡಿದ್ದಾರೆ. ಕೇಂದ್ರ ಸರ್ಕಾರದ ನೆರವಿನೊಂದಿಗೆ ದೇಶದಾದ್ಯಂತ 25 ಸೋಲಾರ್ ಪಾರ್ಕ್ ನಿರ್ಮಾಣ ಮಾಡಲಾಗುತ್ತಿದೆ. ಈ ಯೋಜನೆಗಾಗಿ ಕರ್ನಾಟಕದಲ್ಲಿ ಅತಿಹೆಚ್ಚು ಉಷ್ಣಾಂಶವಿರುವ ಪಾವಗಡ ತಾಲೂಕನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಸೋಲಾರ್ ಪಾರ್ಕ್ ನಿರ್ಮಾಣಕ್ಕಾಗಿ ಈಗಾಗಲೇ 10 ಸಾವಿರ ಎಕರೆ ಪ್ರದೇಶವನ್ನು ಗುರುತಿಸಲಾಗಿದೆ. ಒಟ್ಟು 2 ಸಾವಿರ ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದಿಸುವ ಗುರಿಯನ್ನು ಹೊಂದಲಾಗಿದೆ. ಏಷ್ಯಾದಲ್ಲೇ ಇದು ದೊಡ್ಡ ಸೌರ ವಿದ್ಯುತ್ ಪಾರ್ಕ್ ಆಗಲಿದೆ ಎಂದು ರವಿ ಕುಮಾರ್ ವಿವರಣೆ ನೀಡಿದರು. [ಸೌರ ವಿದ್ಯುತ್ ತಯಾರಿಸಿ, ಸರ್ಕಾರಕ್ಕೆ ಮಾರಿ]
ಮಧ್ಯಪ್ರದೇಶದಲ್ಲಿ 750 ಮೆ.ವ್ಯಾ, ಆಂಧ್ರಪ್ರದೇಶದಲ್ಲಿ 1 ಸಾವಿರ ಮೆ.ವ್ಯಾ. ಸೋಲಾರ್ ಪಾರ್ಕ್‌ಗಳಿವೆ. ಇವುಗಳನ್ನು ಹೊರತುಪಡಿಸಿದರೆ ಪಾವಗಡದ 2 ಸಾವಿರ ಮೆ.ವ್ಯಾ. ಸಾಮರ್ಥ್ಯದ ಪಾರ್ಕ್ ಏಷ್ಯಾಕ್ಕೇ ಪ್ರಥಮವಾಗಲಿದೆ ಎಂದು ತಿಳಿಸಿದರು.[ಕರ್ನಾಟಕದಲ್ಲಿ ಹರ್ಭಜನ್ 'ಸೌರಘಟಕ' ಸ್ಥಾಪನೆ]
ಸೌರ ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ಪ್ರಸ್ತುತ 4ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಈಗಾಗಲೇ ನೂತನ ಸೋಲಾರ್ ನೀತಿ ಜಾರಿ ಮಾಡಲಾಗಿದ್ದು, 2 ಸಾವಿರ ಸೌರ ವಿದ್ಯುತ್ ಉತ್ಪಾದಿಸುವ ಗುರಿಯನ್ನು ಹೊಂದಲಾಗಿದೆ ಎಂದು ಅವರು ಹೇಳಿದರು.












Click it and Unblock the Notifications