ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ: ಪ್ರತಿಭಟನೆಯಲ್ಲಿ ಎಡವಟ್ಟು ಮಾಡಿಕೊಂಡ ಬಿಜೆಪಿ

|
Google Oneindia Kannada News

ಉಡುಪಿ, ಆಗಸ್ಟ್ 18 : ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಪಿಎಫ್ಐ ಸಂಘಟನೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಉಡುಪಿ ಬಿಜೆಪಿ ಘಟಕ ಪ್ರತಿಭಟನೆ ನಡೆಸುವ ಭರದಲ್ಲಿ ಭಾರಿ ಪ್ರಮಾದ ಎಸಗಿದೆ.

ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಸಂದರ್ಭದಲ್ಲಿ ಬಳಸಲಾದ ಬ್ಯಾನರ್ ಮೇಲೆ ಶರತ್ ಮಡಿವಾಳ್ ಹೆಸರನ್ನು ಪ್ರಶಾಂತ್ ಮಡಿವಾಳ್ ಎಂದು ಮುದ್ರಿಸಿ ಭಾರಿ ಮುಜುಗರಕ್ಕೀಡಾಗಿದ್ದಾರೆ,.

Banner blunder by BJP Sharath Madiwala turns'Prashant Madivala' murder

ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದಲ್ಲಿ ಪಿಎಫ್ಐ ಸಂಘಟನೆಯ ಕೃತ್ಯ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಪಿಎಫ್ಐ ಹಾಗೂ ಎಸ್ ಡಿ ಪಿ ಐ ಸಂಘಟನೆಯನ್ನು ಈ ಕೂಡಲೇ ನಿಷೇಧಿಸಬೇಕೆಂದು ಒತ್ತಾಯಿಸಿದರು .

ಈ ಹಿಂದೆ ದುಷ್ಕರ್ಮಿಗಳ ದಾಳಿಯಲ್ಲಿ ಮೃತಪಟ್ಟ ವರ ಪಟ್ಟಿಯಲ್ಲಿ ಬದುಕಿದ್ದ ಅಶೋಕ್ ಪೂಜಾರಿ ಎಂಬವರ ಹೆಸರು ಸೇರಿಸಿ ಬಿಜೆಪಿ ಮುಖಂಡರು ಹಲವರ ಟೀಕಿಗೆ ಗುರಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
The district BJP was left red-faced after a banner used by the party in its protest unwittingly stated that PFI was involved in the murder of 'Prashant Madivala' instead of Sharath Madiwala.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X