ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಾಸ್ಕರ್ ಶೆಟ್ಟಿ ಕೊಲೆ ಕೇಸ್; ಜಾಮೀನಿಗಾಗಿ ಸುಪ್ರೀಂ ಮೊರೆ ಹೋದ ಪತ್ನಿ

ಕಳೆದ ಆಗಸ್ಟ್ ನಲ್ಲಿ ಭಾಸ್ಕರ್ ಶೆಟ್ಟಿಯ ಕೊಲೆಯಾಗಿದ್ದು ಇದರಲ್ಲಿ ಪತ್ನಿ ರಾಜೇಶ್ವರಿ ಪ್ರಮುಖ ಆರೋಪಿಯಾಗಿ ಬಂಧಿತರಾಗಿದ್ದರು. ಇವರ ಪುತ್ರ ನವನೀತ್ ಶೆಟ್ಟಿ ಮತ್ತು ಜ್ಯೋತಿಷಿ ನಿರಂಜನ್ ಸಹ ಆರೋಪಿಯಾಗಿದ್ದರು.

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಮೇ 10: ಉಡುಪಿ ಮೂಲದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಬಂಧನದಲ್ಲಿರುವ ಪತ್ನಿ ರಾಜೇಶ್ವರಿ ಶೆಟ್ಟಿ ಜಾಮೀನು ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಕಳೆದ ಆಗಸ್ಟ್ ನಲ್ಲಿ ಭಾಸ್ಕರ್ ಶೆಟ್ಟಿಯ ಕೊಲೆಯಾಗಿದ್ದು ಇದರಲ್ಲಿ ಪತ್ನಿ ರಾಜೇಶ್ವರಿ ಪ್ರಮುಖ ಆರೋಪಿಯಾಗಿ ಬಂಧಿತರಾಗಿದ್ದರು. ಇವರ ಪುತ್ರ ನವನೀತ್ ಶೆಟ್ಟಿ ಮತ್ತು ಜ್ಯೋತಿಷಿ ನಿರಂಜನ್ ಸಹ ಆರೋಪಿಯಾಗಿದ್ದರು. ಇವರೆಲ್ಲರೂ ಈಗ ಪೊಲೀಸ್ ವಶದಲ್ಲಿದ್ದಾರೆ.

Udupi Bhaskar Shetty murder case: A1 & Wife Rajeshwari files bail plea to bail in SC

ಕಳೆದ ಒಂಭತ್ತು ತಿಂಗಳುಗಳಿಂದ ಆರೋಪಿಗಳು ಜಾಮೀನು ಕೋರಿ ನ್ಯಾಯಾಲಯಗಳಲ್ಲಿ ಹೋರಾಟ ನಡೆಸುತ್ತಲೇ ಇದ್ದಾರೆ. ಇತ್ತೀಚೆಗೆ ಹೈಕೋರ್ಟ್ ಪೀಠ ಕೂಡಾ ಜಾಮೀನು ನಿರಾಕರಿಸಿತ್ತು.

ಇದನ್ನು ಪ್ರಶ್ನಿಸಿ ರಾಜೇಶ್ವರಿ ಶೆಟ್ಟಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಜಾಮೀನು ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಒಪ್ಪಿಕೊಂಡಿದ್ದಾರೆ. ಈ ಕುರಿತು ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಲಾಗಿದೆ.

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ನಡೆಸಿರುವ ಸಿಐಡಿ ಈಗಾಗಲೇ 1300 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

English summary
In Udupi Bhaskar Shetty murder case, the prime accused Wife Rajeshwari Shetty applies for bail at supreme court. From past 9 months they have been struggling for bail, but the court has rejected the bail all the time. But now she has applied for bail to the supreme court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X