Gruhalakshmi Scheme: ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್! ಬಿಗ್ ಅಪ್ಡೇಟ್ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ (Congress Govt) ಪಂಚ ಗ್ಯಾರಂಟಿ ಯೋಜನೆಗಳನ್ನು ಚುನಾವಣಾ ಅಸ್ತ್ರವಾಗಿ ಬಳಸಿತ್ತು. ಅದರಲ್ಲೂ ಗೃಹಲಕ್ಷ್ಮಿ ಯೋಜನೆ ಭಾರೀ ಮಹತ್ವವನ್ನು ಪಡೆದಿದೆ. 2023 ಜೂನ್ 6 ರಂದು ಆರಂಭವಾದ ಈ ಯೋಜನೆ, ಕುಟುಂಬದ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಇದರ ಉದ್ದೇಶ. ಆ ಪ್ರಕಾರ ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಮನೆಯ ಒಬ್ಬರಿಗೆ 2 ಸಾವಿರ ಹಣ ಸಿಗುತ್ತಿದೆ. ಆದರೆ ಕಳೆದ ವರ್ಷದಲ್ಲಿ ಎರಡು ತಿಂಗಳ ಗೃಹಲಕ್ಷ್ಮಿ ಹಣ (Gruha lakshmi Money) ಬಾಕಿಯಾಗಿತ್ತು.

ಗೃಹಲಕ್ಷ್ಮಿ ಹಣ ಬಾಕಿ ಬಗ್ಗೆ ಸದನದಲ್ಲಿ ಭಾರೀ ಚರ್ಚೆಯಾಗಿತ್ತು. ಅಲ್ಲದೇ ಸಿಎಂ ಸಿದ್ದರಾಮಯ್ಯ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡಾ ಈ ಬಗ್ಗೆ ಭರವಸೆ ನೀಡಿದ್ದರು. ಇದೀಗ ಮತ್ತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಹಣ ಬಿಡುಗಡೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟಿದ್ದಾರೆ.
ಯಾವಾಗ ಸಿಗಲಿದೆ ಗೃಹಲಕ್ಷ್ಮಿ ಹಣ!
ಎರಡು ತಿಂಗಳ ಗೃಹಲಕ್ಷ್ಮಿ ಹಣವನ್ನು ಈಗಾಗಲೇ ಸರ್ಕಾರ ಬಿಡುಗಡೆ ಮಾಡಿದೆ. ಆದ್ದರಿಂದ ಸದ್ಯದಲ್ಲೇ ಇದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ಸಚಿವೆ ಹೇಳಿದ್ದೇನು?
ಬೆಳಗಾವಿಯಲ್ಲಿ ಜನವರಿ 19ರಂದು ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಎರಡು ತಿಂಗಳ ಗೃಹಲಕ್ಷ್ಮಿ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದ್ದಾರೆ. ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಮಹಿಳೆಯರ ಸ್ವಾವಲಂಬನೆ, ಆರ್ಥಿಕ ಸಬಲೀಕರಣ ಮತ್ತು ಕುಟುಂಬದ ಖರ್ಚುಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಗುರಿಯನ್ನು ಹೊಂದಿದೆ. ಇದುವರೆಗೆ ಈ ಯೋಜನೆಯಿಂದ ರಾಜ್ಯದಲ್ಲಿ 1.28 ಕೋಟಿ ಮಹಿಳೆಯರು ಫಲಾನುಭಿಗಳಾಗಿದ್ದಾರೆ ಎಂದು ಹೇಳಲಾಗಿದೆ.
ಗೃಹಲಕ್ಷ್ಮಿ ಯೋಜನೆಯ ಅರ್ಹತೆಗಳು:
- ಅರ್ಜಿದಾರ ಮಹಿಳೆಯಾಗಿರಬೇಕು.
- ಕರ್ನಾಟಕದ ನಿವಾಸಿಯಾಗಿರಬೇಕು.
- ಕುಟುಂಬದಲ್ಲಿ ಒಬ್ಬ ಮಹಿಳೆ ಮಾತ್ರ (ರೇಷನ್ ಕಾರ್ಡ್‌ನಲ್ಲಿ ಹೆಸರಿರಬೇಕು)
- ರೇಷನ್ ಕಾರ್ಡ್ ಹೊಂದಿರಬೇಕು.
- ಇತರ ಯೋಜನೆಗಳಲ್ಲಿ ತೆರಿಗೆದಾರರಾಗಿರಬಾರದು ಅಥವಾ ಹೆಚ್ಚು ಆದಾಯ ಇಲ್ಲದವರಾಗಿರಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
- ಆನ್‌ಲೈನ್‌ನಲ್ಲಿ ಸೇವಾ ಸಿಂಧು ಅಥವಾ ಮಾಹಿತಿ ಕಣಜ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
- ಆಫ್‌ಲೈನ್‌ನಲ್ಲಿ ಗ್ರಾಮ ಪಂಚಾಯತ್, ತಹಸೀಲ್ದಾರ್ ಕಚೇರಿ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ.
- ದಾಖಲೆಗಳು: ರೇಷನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಅಕೌಂಟ್ ವಿವರ, ಫೋಟೋ
ತಿಂಗಳಿಗೆ 2 ಸಾವಿರದಂತೆ ಹಣ ಜಮಾ ಆಗುತ್ತಿತ್ತು. ಆದ್ರೆ ಕಳೆದ ವರ್ಷದಲ್ಲಿ ಎರಡು ತಿಂಗಳ ಗೃಹಲಕ್ಷ್ಮಿ ಹಣ ಜಮಾ ಆಗಿರಲಿಲ್ಲ. ಅದಕ್ಕೆ ಕಾರಣ ಕೇಳಿದಾಗ ರೇಷನ್ ಕಾರ್ಡ್ ಪರಿಷ್ಕರಣೆ ಅಂತನೂ ಹೇಳಲಾಗಿತ್ತು. ಅಂದರೆ ಕಳೆದ ವರ್ಷ ಹಲವು ಅಕ್ರಮ ರೇಷನ್ ಕಾರ್ಡ್‌ಗಳನ್ನು ಪರಿಷ್ಕರಣೆ ನಡೆಸಲಾಗಿತ್ತು. ಅಲ್ಲದೇ ಕೆಲವು ರೇಷನ್ ಕಾರ್ಡ್‌ಗಳನ್ನು ಎಪಿಎಲ್‌ನಿಂದ ಬಿಪಿಎಲ್‌ಗೆ ವರ್ಗಾವಣೆಯನ್ನೂ ಮಾಡಲಾಗಿತ್ತು. ಅದೇ ಕಾರಣದಿಂದ ಕೆಲವರಿಗೆ ಹಣ ಜಮಾ ಆಗಲು ವಿಳಂಬವಾಗಿದೆ ಎಂದು ಸಚಿವೆ ತಿಳಿಸಿದ್ದರು.
Credit: Goodreturns
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications