ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ ಹೈಕಮಾಂಡ್ ಬೆಂಗ್ಳೂರಿಗೆ ಬಂದದ್ದೇ ಸರಿ

By * ವಸಂತ್ ಶೆಟ್ಟಿ, ಬೆಂಗಳೂರು
|
Google Oneindia Kannada News

BS Yeddyurappa
ಕಳೆದ 60 ವರ್ಷದಿಂದಲೂ ನಾವು ನೋಡಿರುವುದು ಏನೆಂದರೆ ಕರ್ನಾಟಕದ ರಾಜಕೀಯ ನಾಯಕರು ಒಂದು ಸಣ್ಣ ವಿಷಯಕ್ಕೂ ದೆಹಲಿಗೆ ಹೋಗಿ ಅಲ್ಲಿನ ದೊರೆಗಳ ಮುಂದೆ ಕೈ ಕಟ್ಟಿಕೊಂಡು ನಿಂತು, "ಅಪ್ಪಣೆ ಮಹಾಪ್ರಭು" ಅಂತ ನಿಂತುಕೊಳ್ಳೊರು. ಅವರು ಕೊಟ್ಟ ಆಜ್ಞೆನಾ ಪ್ರಸಾದ ಅಂಬಂತೆ ಕಣ್ಣಿಗೊತ್ತಿಕೊಂಡು ವಾಪಸ್ ಬರೋರು.

"ನಮ್ದು ನ್ಯಾಶನಲ್ ಪಾರ್ಟಿ ರೀ, ನಾವು ಶಿಸ್ತಿನ ಸಿಪಾಯಿಗಳು ರೀ,,ಹೈಕಮಾಂಡ್ ಮಾಡಿದ ಆಜ್ಞೆ ನಾವ್ ಮೀರುವುದುಂಟೇನು" ಎಂದು ತಮ್ಮ ಗುಲಾಮಗಿರಿಯನ್ನೇ ಖುಷಿಯಾಗಿ ಸಮರ್ಥಿಸಿಕೊಳ್ಳೊರು.

ಆದರೆ ಮೊಟ್ಟ ಮೊದಲ ಬಾರಿಗೆ ದೆಹಲಿಯ ಮೂರು ಮತ್ತೊಂದು ನಿವೃತ್ತ ನಾಯಕರಿಗೆ ಸೆಡ್ಡು ಹೊಡೆದು ದೆಹಲಿಯೇ ಬೆಂಗಳೂರಿಗೆ ಬರುವಂತೆ ಮಾಡಿದ್ದು, ಎರಡು ದಿನವಾದರೂ ಅವರಿಗೆ ಭಾರಿ ಫೈಟ್ ಕೊಟ್ಟಿದ್ದು, ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯದಿಂದ ಕೇಂದ್ರವಿರಬೇಕು, ಬಾಟಮ್ ಅಪ್ ಅಪ್ರೋಚ್ ಇರಬೇಕು ಅನ್ನುವ ಸಂದೇಶವನ್ನು ಕೊಟ್ಟ ಕಾರಣಕ್ಕೆ ಯಡಿಯೂರಪ್ಪನವರನ್ನು ಮೆಚ್ಚದಿರಲು ಆಗದು.

ಪ್ರಜಾತಂತ್ರದಲ್ಲಿ ಹೈಕಮಾಂಡ್ ಅನ್ನೋದೇ ತಪ್ಪು: ಪ್ರಜಾತಂತ್ರವಿರುವುದು ಜನರಿಂದ ಜನರಿಗಾಗಿ. ಜನರು ಆರಿಸಿ ಕಳಿಸಿದ ನಾಯಕರು ರಾಜ್ಯವಾಳಬೇಕು. ಅವರಲ್ಲಿ ಏನೇ ಭಿನ್ನಾಭಿಪ್ರಾಯವಿದ್ದರೂ ಕೂತು ಮಾತನಾಡಿ ಬಗೆಹರಿಸಿಕೊಳ್ಳಲಿ. ಇದೇನಿದು ಹೈಕಮಾಂಡ್ ಅನ್ನೋದು? ಅಸಲಿಗೆ, ಕಮಾಂಡ್ ಅನ್ನೋದೆ ಪ್ರಜಾತಂತ್ರದಲ್ಲಿ ತಪ್ಪು.

ಪಾಳೆಗಾರನಂತೆ ಕಮಾಂಡ್ ಮಾಡ್ತಿನಿ ಅನ್ನೋದು ಯಾವ ಸೀಮೆ ಜನತಂತ್ರ? ಬಂದ ಸೋ ಕಾಲ್ಡ್ ವರಿಷ್ಟರು facilitators ಆಗಬೇಕು, messengers ಆಗಬೇಕು. ಅದು ಬಿಟ್ಟು ಇಂತವರೇ ಸಿ.ಎಮ್ ಆಗಬೇಕು ಅಂತ ನಿರ್ಧಾರ ಮಾಡ್ಕೊಂಡು ಬಂದು ಇಲ್ಲಿ ಹೇರಲು ಹೊರಟರೆ ಅದು ಪ್ರಜಾತಂತ್ರವಾಗುತ್ತ? ಅಂತಹ ದೊಣ್ಣೆ ನಾಯಕರಿಗೆ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಸರಿಯಾದ್ದೊಂದು ಮುಟ್ಟಿ ನೋಡಿಕೊಳ್ಳುವಂತ ಫೈಟ್ ಕೊಟ್ಟಿದ್ದಾರೆ.

ಅಂತಲೇ ಅನ್ನಬಹುದು. ಒಂದಿಡಿ ದಿನ ಎಲ್ಲ ನ್ಯಾಶನಲ್ ಮಾಧ್ಯಮದಲ್ಲೂ ಕರ್ನಾಟಕದ ಸುದ್ದಿ ಆವರಿಸಿಕೊಂಡದ್ದು ನೋಡಿದರೆ ಈ ಮಟ್ಟಿಗೆ ಕನ್ನಡಿಗನೊಬ್ಬ ಫೈಟ್ ಕೊಟ್ನಲ್ಲ ಅನ್ನೋದೇ ನನಗೆ ಸಂತಸದ, ಸೋಜಿಗದ ಸಂಗತಿಯಾಗಿ ಕಾಣೋದು.

ನ್ಯಾಶನಲ್ ಲೀಡರ್ಸ್ ಅಂದ್ರೆ ದೇವರಾ?: ನ್ಯಾಶನಲ್ ಲೀಡರ್ಸ್ ಅಂದ ಕೂಡಲೇ "Paragon of Virtue" ಅನ್ನೋ ರೀತಿಯಲ್ಲಿ ನೈತಿಕತೆಯ ಚಾಂಪಿಯನ್ಸ್ ಅನ್ನೋ ರೀತಿಯಲ್ಲಿ ಅವರನ್ನು ಟ್ರೀಟ್ ಮಾಡುವ, ಅವರು ಹೇಳಿದ್ದೆಲ್ಲ ಸರಿ ಅನ್ನುವ ಗುಲಾಮಗಿರಿಯ ಮನಸ್ಥಿತಿ ನಮ್ಮಲ್ಲಿ ಹಲವು ನಾಯಕರಿಗಿದೆ.

ಈಗ ನೈತಿಕತೆಯ ಎಳೆ ಹಿಡಿದು ರಾಜಿನಾಮೆ ಕೇಳಲು ಬಂದಿದ್ದಾರೆಂದು ನನಗಂತೂ ಅನ್ನಿಸಿಲ್ಲ. ಸಂಸತ್ತಿನ ಮಾನ್ಸುನ್ ಅಧಿವೇಶನದಲ್ಲಿ ಕಾಂಗ್ರೆಸ್ ಅನ್ನು ಹಣಿಯಲು ಹೊರಡುವ ಮುನ್ನ ಇವರಿಗೆ ತಾವು ಕೊಂಚ ಕ್ಲೀನ್ ಅನ್ನಿಸಿಕೊಳ್ಳಬೇಕಿತ್ತು.

ಅದಕ್ಕೆ ಆರೋಪ ಕೇಳಿದ ತಕ್ಷಣ ಮುಖ್ಯಮಂತ್ರಿಗಳ ರಾಜಿನಾಮೆ ತೆಗೆದುಕೊಳ್ಳುವ ನಾಟಕ. ಅದಿಲ್ಲದಿದ್ದರೆ, ಮುಖ್ಯಮಂತ್ರಿಗಳ ಮೇಲೆ ಲೋಕಾಯುಕ್ತರು ಈ ಮೊದಲು ಆರೋಪ ಮಾಡಿದ್ದರು, ತಮ್ಮ ಮಧ್ಯಂತರ ವರದಿಯ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದೂ ದೂರಿದ್ದರು, ಆಗೆಲ್ಲ ನ್ಯಾಶನಲ್ ಲೀಡರ್ಸ್ ನಿದ್ದೆ ಮಾಡುತ್ತಿದ್ದರೆ?

ನ್ಯಾಶನಲ್ ಲೀಡರ್ಸ್ ಅಂದ್ರೆ ಹೆಚ್ಚು ಜವಾಬ್ದಾರಿ ಇರೋರು, ನೈತಿಕತೆ ಉಳ್ಳವರು ಅನ್ನೋದೆಲ್ಲ ಕಟ್ಟು ಕತೆ. ನೈತಿಕತೆ, ಜವಾಬ್ದಾರಿಯುತ ನಡವಳಿಕೆಯಲ್ಲಿ ಪ್ರಾದೇಶಿಕ ಪಕ್ಷಗಳು ಕೆಳಗೆ, ತಾವು ಮೇಲೆ ಅಂತ ತೋರಿಸಲು ಈ ಪೊಳ್ಳು ವಾದ ಬಳಸೋದೇ ಹೊರತು ಇದಕ್ಕೆ ಹೆಚ್ಚಿನ ಬೆಲೆಯೇನು ಕೊಡಬೇಕಿಲ್ಲ.

ಕೊನೆಹನಿ:
ಯಡಿಯೂರಪ್ಪನವರು ಈಗ ತೋರಿದ ಧೈರ್ಯವನ್ನೇ ಕಾಂಗ್ರೆಸ್ ಹೈಕಮಾಂಡ್ ನ ಭೇಟಿ ಆಗೋಕೆ ಒಂದು ವಾರ ಕಾಯೋ ನಮ್ಮ ಸಿದ್ಧರಾಮಯ್ಯನಂತವರು ತೋರಿದ್ರೆ, ನಿಧಾನಕ್ಕಾದ್ರೂ ಸರಿ ಈ ಹೈಕಮಾಂಡ್ ನ ಕಮಾಂಡ್ ಸಂಸ್ಕೃತಿಯ ಬಿಗಿ ಪಟ್ಟಿನಿಂದ ಕರ್ನಾಟಕದ ರಾಜಕೀಯ ಆಚೆ ಬರುತ್ತೆನೋ.

ಬೆಂಗಳೂರಿಂದ ದೆಹಲಿ ಇರಬೇಕೇ ಹೊರತು ದೆಹಲಿಯಿಂದ ಬೆಂಗಳೂರಲ್ಲ ಅನ್ನೋ ಬದಲಾವಣೆ ಇನ್ನಾದ್ರೂ ಕರ್ನಾಟಕದ ರಾಜಕೀಯದಲ್ಲಿ ಬರಲಿ.

English summary
Whatever may be the reason but former CM Yeddyurappa has shown the strength of region by pulling BJP high command to Karnataka. High command kind of structure is bane to democracy says CJ Vasanth Shetty.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X