ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಚಾಂಪಿಯನ್ಸ್ ಟ್ರೋಫಿ: 240 ರನ್ ಗಳಿಂದ ಬಾಂಗ್ಲಾವನ್ನು ಮಣಿಸಿದ ಭಾರತ

ಚಾಂಪಿಯನ್ಸ್ ಟ್ರೋಫಿ 2017 ಅಭ್ಯಾಸ ಪಂದ್ಯ: ಟೀಂ ಇಂಡಿಯಾ ವಿರುದ್ಧ ಟಾಸ್ ಗೆದ್ದ ಬಾಂಗ್ಲಾದೇಶ ನಾಯಕ ಶಕೀಲ್ ಅಲ್ ಹಸನ್ ಅವರು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

By Mahesh

ಲಂಡನ್, ಮೇ 30:ಚಾಂಪಿಯನ್ಸ್ ಟ್ರೋಫಿ 2017 ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ 240 ರನ್ ಗಳಿಂದ ಸುಲಭ ಜಯ ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 50 ಓವರ್ ಗಳಲ್ಲಿ ಏಳು ವಿಕೆಟ್ ಕಳೆದುಕೊಂಡು 324 ರನ್ ಗಳಿಸಿತ್ತು. ಇದನ್ನು ಬೆನ್ನಟ್ಟಿದ ಬಾಂಗ್ಲಾ ಭಾರತದ ಬೌಲಿಂಗ್ ದಾಳಿಗೆ 23.5 ಓವರ್ ಗಳಲ್ಲಿ ಕೇವಲ 84 ರನ್ ಗಳಿಗೆ ಸರ್ವಪತನ ಕಂಡಿದೆ.[ಏಕದಿನ ಶ್ರೇಯಾಂಕ ಪ್ರಕಟ: ಬೌಲರ್, ಬ್ಯಾಟ್ಸ್ ಮನ್, ತಂಡಗಳ ಪಟ್ಟಿ ಇಂತಿದೆ]

Champions Trophy Warm-up Match: India thrash Bangladesh by 240 runs

ಭಾರತ ಪರ ಭುವನೇಶ್ವರ ಕುಮಾರ್, ಉಮೇಶ್ ಯಾದವ್ ತಲಾ ಮೂರು ವಿಕೆಟ್ ಕಬಳಿಸಿ ಬಾಂಗ್ಲಾ ಬ್ಯಾಟ್ಸ್ ಮನ್ ಗಳಿಗೆ ಕಂಟಕವಾದರು.[#CT17 #INDvPAK ಫುಲ್ ವೇಳಾಪಟ್ಟಿ ನೋಟ್ ಮಾಡ್ಕೊಳಿ!]

ಚಾಂಪಿಯನ್ಸ್ ಟ್ರೋಫಿ 2017 ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಟಾಸ್ ಗೆದ್ದ ಬಾಂಗ್ಲಾದೇಶ ನಾಯಕ ಶಕೀಲ್ ಅಲ್ ಹಸನ್ ಅವರು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಟೀಂ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮ ಅವರು ಅಲ್ಪಮೊತ್ತಕ್ಕೆ ಔಟಾಗಿ ನಿರಾಶೆ ಮೂಡಿಸಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಮೊದಲ ಅಭ್ಯಾಸ ಪಂದ್ಯವನ್ನು ಸುಲಭವಾಗಿ ಗೆದ್ದುಕೊಂಡ ವಿರಾಟ್ ಕೊಹ್ಲಿ ಪಡೆ ಇಂದು ಬಾಂಗ್ಲಾದೇಶ ವಿರುದ್ಧ ಸೆಣೆಸುತ್ತಿದೆ. ಜೂನ್ 4ರಂದು ಪಾಕಿಸ್ತಾನ ವಿರುದ್ಧ ಆಡಲಿದೆ.

Champions Trophy Warm-up Match: Bangladesh win toss, invite India to bat first

ಪಾಕಿಸ್ತಾನ ವಿರುದ್ಧ 341ರನ್ ಗಳಿಸಿ ಕೂಡಾ ಸೋಲು ಕಂಡಿದ್ದ ಶಕೀಲ್ ಅಲ್ ಹಸನ್ ಪಡೆ ಉತ್ತಮ ಪ್ರದರ್ಶನ ನೀಡುವ ಉತ್ಸಾಹದಲ್ಲಿದೆ. ನ್ಯೂಜಿಲೆಂಡ್ ವಿರುದ್ಧ ಪಂದ್ಯಕ್ಕೆ ಅಲಭ್ಯರಾಗಿದ್ದ ಯುವರಾಜ್ ಸಿಂಗ್ ಅವರು ಈ ಪಂದ್ಯವಾಡುತ್ತಿದ್ದಾರೆ.

Story first published: Wednesday, January 3, 2018, 10:05 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X