ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತದಲ್ಲಿ ನಡೆಯುವ ವಿಶ್ವ ಟಿ20ಗೆ ಚೆಂದದ ಲೋಗೋ

By Mahesh

ನವದೆಹಲಿ, ಡಿ.09: ಭಾರತದಲ್ಲಿ ನಡೆಯಲಿರುವ ಐಸಿಸಿ ಟ್ವೆಂಟಿ-20 ವಿಶ್ವಕಪ್‌ ಗೆ ಐಸಿಸಿ ಹೊಸ ಲಾಂಛನವನ್ನು ಅನಾವರಣಗೊಳಿಸಿದೆ.

ಟ್ವೆಂಟಿ-20 ಟೂರ್ನಿ ವಿಶ್ವಕಪ್ 2016ರ ಮಾರ್ಚ್‌ನಲ್ಲಿ ಭಾರತದಲ್ಲಿ ಆರಂಭವಾಗಲಿದೆ ಎಂದು ಐಸಿಸಿ ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಿದೆ.

ಕೋಲ್ಕತಾದ ಈಡನ್‌ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಕೋಲ್ಕತಾ 28 ವರ್ಷಗಳ ನಂತರ ವಿಶ್ವಕಪ್ ಫೈನಲ್ ಪಂದ್ಯದ ಆತಿಥ್ಯವನ್ನು ವಹಿಸಿಕೊಳ್ಳಲಿದೆ.

ICC unveils World Twenty20 India 2016 logo


ಬೆಂಗಳೂರು, ಚೆನ್ನೈ, ಧರ್ಮಶಾಲಾ, ಮೊಹಾಲಿ, ಮುಂಬೈ, ನಾಗ್ಪುರ ಹಾಗೂ ನವದೆಹಲಿಯಲ್ಲಿ ವಿಶ್ವಕಪ್ ಟೂರ್ನಿಯ ಇತರ ಪಂದ್ಯಗಳು ನಡೆಯುತ್ತವೆ. ಚೆನ್ನೈನಲ್ಲಿ ಯಾವುದೇ ಪಂದ್ಯಗಳು ನಡೆಯುವುದಿಲ್ಲ.


ಟೂರ್ನಿಯಲ್ಲಿ 16 ತಂಡಗಳು ಭಾಗವಹಿಸಲಿವೆ. 10 ತಂಡಗಳು ನೇರ ಪ್ರವೇಶ ಪಡೆಯುತ್ತವೆ. ಉಳಿದ ಆರು ಅಸೋಸಿಯೇಟ್ ದೇಶಗಳು ಐರ್ಲೆಂಡ್ ಹಾಗೂ ಸ್ಕಾಟ್ಲಂಡ್‌ನಲ್ಲಿ ನಡೆದ ಐಸಿಸಿ ಟ್ವೆಂಟಿ-20 ವಿಶ್ವಕಪ್ ಅರ್ಹತಾ ಟೂರ್ನಿಗೆ ಆಯ್ಕೆಯಾಗಿವೆ.

ಕಳೆದ ಆವೃತ್ತಿಯ ಟ್ವೆಂಟಿ-20 ವಿಶ್ವಕಪ್ ಬಾಂಗ್ಲಾದೇಶದಲ್ಲಿ ನಡೆದಿತ್ತು. ಆ ಟೂರ್ನಿಯ ಫೈನಲ್‌ನಲ್ಲಿ ಭಾರತವನ್ನು ಮಣಿಸಿದ್ದ ಶ್ರೀಲಂಕಾ ಚಾಂಪಿಯನ್ ಆಗಿತ್ತು.

#WT20 logo ಎಂದು ಐಸಿಸಿ ಟ್ವೀಟ್ ಮಾಡಿದ್ದು ಮಂಗಳವಾರವೇ 3.36 ಮಿಲಿಯನ್ ಹಿಂಬಾಲಕರಿಗೆ ಟ್ವೀಟ್ ಆಗಿತ್ತು. ಲೋಗೊಗೆ ಎಲ್ಲೆಡೆಯಿಂದ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ವಿಶ್ವ ಟಿ20 ಚಾಂಪಿಯನ್ಸ್
* 2007- ದಕ್ಷಿಣ ಆಫ್ರಿಕಾದಲ್ಲಿ ನಡೆದ ಟೂರ್ನಿಯಲ್ಲಿ ಪಾಕಿಸ್ತಾನವನ್ನು 5 ರನ್ ಗಳಿಂದ ಸೋಲಿಸಿ ಭಾರತ ಚಾಂಪಿಯನ್.
* 2009-ಇಂಗ್ಲೆಂಡಿನಲ್ಲಿ ನಡೆದ ಟೂರ್ನಿಯಲ್ಲಿ ಶ್ರೀಲಂಕಾವನ್ನು 8 ವಿಕೆಟ್ ಗಳಿಂದ ಸೋಲಿಸಿದ ಪಾಕಿಸ್ತಾನ ಚಾಂಪಿಯನ್.
* 2010-ವೆಸ್ಟ್ ಇಂಡೀಸ್ ನಲ್ಲಿ ನಡೆದ ಟೂರ್ನಿಯಲ್ಲಿ ಆಸ್ಟ್ರೇಲಿಯಾವನ್ನು 7 ವಿಕೆಟ್ ಗಳಿಂದ ಸೋಲಿಸಿ ಇಂಗ್ಲೆಂಡ್ ಚಾಂಪಿಯನ್.
* 2012- ಶ್ರೀಲಂಕಾದಲ್ಲಿ ನಡೆದ ಟೂರ್ನಿಯಲ್ಲಿ ಶ್ರೀಲಂಕಾವನ್ನು 36 ರನ್ ಗಳಿಂದ ಸೋಲಿಸಿ ವೆಸ್ಟ್ ಇಂಡೀಸ್ ಚಾಂಪಿಯನ್.
* 2014- ಬಾಂಗ್ಲಾದೇಶದಲ್ಲಿ ನಡೆದ ಟೂರ್ನಿಯಲ್ಲಿ ಭಾರತವನ್ನು 6 ವಿಕೆಟ್ ಗಳಿಂದ ಸೋಲಿಸಿ ಶ್ರೀಲಂಕಾ ಚಾಂಪಿಯನ್.
(ಒನ್ ಇಂಡಿಯಾ ಸುದ್ದಿ)

Story first published: Wednesday, January 3, 2018, 10:03 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X