ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾ ಪ್ರಕಟಿಸಿದ ಆಟಗಾರ

ಐಸಿಸಿ ಹಾಗೂ ಬಿಸಿಸಿಐ ನಡುವಿನ ಜಟಾಪಟಿಯಿಂದ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಆಡುವುದೇ ಅನುಮಾ ನ ಎನ್ನುವ ಸಂದರ್ಭದಲ್ಲಿ ಮಾಜಿ ಕ್ರಿಕೆಟರ್ ರೊಬ್ಬರು ಟೀಂ ಇಂಡಿಯಾವನ್ನು ಪ್ರಕಟಿಸಿದ್ದಾರೆ.

By Mahesh

ಬೆಂಗಳೂರು, ಏಪ್ರಿಲ್ 25: ಐಸಿಸಿ ಹಾಗೂ ಬಿಸಿಸಿಐ ನಡುವಿನ ಜಟಾಪಟಿಯಿಂದ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಆಡುವುದೇ ಅನುಮಾನ ಎನ್ನುವ ಸಂದರ್ಭದಲ್ಲಿ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟರ್ ರೊಬ್ಬರು ಟೀಂ ಇಂಡಿಯಾವನ್ನು ಪ್ರಕಟಿಸಿದ್ದಾರೆ.

ಕ್ರಿಕೆಟ್ ದಿಗ್ಗಜ, ಮಾಜಿ ನಾಯಕ ಮೈಕಲ್ ಕ್ಲಾರ್ಕ್ ಅವರು ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 10ರಲ್ಲಿ ಕಾಮೆಂಟೆಟರ್ ಆಗಿದ್ದಾರೆ. ಟೀಂ ಇಂಡಿಯಾ ಚಾಂಪಿಯನ್ ಟ್ರೋಫಿಯಲ್ಲಿ ಗೆಲ್ಲುವ ನೆಚ್ಚಿನ ತಂಡ ಎಂದಿರುವ ಕ್ಲಾರ್ಕ್ ತಮ್ಮ ಆಯ್ಕೆಯ ಟೀಂ ಇಂಡಿಯಾವನ್ನು ಪ್ರಕಟಿಸಿದ್ದಾರೆ.

ಜೂನ್ 1 ರಿಂದ 18ರ ವರೆಗೆ 18 ದಿನಗಳ ಅವಧಿಯಲ್ಲಿ ಇಂಗ್ಲೆಂಡ್ ಮತ್ತು ವೇಲ್ಸ್‌ನ 3 ಕ್ರಿಕೆಟ್ ಮೈದಾನಗಳಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ 2017 ಪಂದ್ಯಗಳು ನಡೆಯಲಿವೆ.

ಭಾರತೀಯ ಕಾಲಮಾನ ಪ್ರಕಾರ ಕ್ರಮವಾಗಿ ಹಗಲು ಪಂದ್ಯ ಮಧ್ಯಾಹ್ನ 3 ಗಂಟೆ ಹಾಗೂ ಹಗಲು /ರಾತ್ರಿ ಪಂದ್ಯ ಸಂಜೆ 6 ಗಂಟೆಗೆ ಆರಂಭವಾಗಲಿದೆ. ಜೂನ್ 04ರಂದು ಭಾರತ ಹಾಗೂ ಪಾಕಿಸ್ತಾನ ಪಂದ್ಯ ನಿಗದಿಯಾಗಿದೆ.

Michael Clarke picks probable India XI for ICC Champions Trophy 2017

ಕೆಎಲ್ ರಾಹುಲ್ ಅನುಪಸ್ಥಿತಿ ಕಾಡಲಿದೆ: ಭುಜದ ನೋವಿಗೆ ತುತ್ತಾಗಿ ಸದ್ಯ ಇಂಗ್ಲೆಂಡಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆಎಲ್ ರಾಹುಲ್ ಅವರ ಅನುಪಸ್ಥಿತಿ, ಭಾರತವನ್ನು ಕಾಡಲಿದೆ. ರಾಹುಲ್ ಅವರು ಪೂರ್ಣ ಪ್ರಮಾಣದಲ್ಲಿ ಫಿಟ್ ಇದ್ರೆ ಮಾತ್ರ ಆಡುವುದು ಒಳ್ಳೆಯದು. ಇಲ್ಲದಿದ್ದರೆ, ರಾಹುಲ್ ಬದಲಿಗೆ ಅಜಿಂಕ್ಯ ರಹಾನೆ ಅಥವಾ ರೋಹಿತ್ ಶರ್ಮರನ್ನು ಕಣಕ್ಕಿಳಿಸುವುದು ಒಳ್ಳೆಯದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಕ್ಲಾರ್ಕ್ ಅವರು ತಮ್ಮ ಆಯ್ಕೆಯ ತಂಡದಲ್ಲಿ ಆರಂಭಿಕ ಆಟಗಾರ ಶಿಖರ್ ಧವನ್, ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಸುರೇಶ್ ರೈನಾ, ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ವೇಗಿ ಆಶೀಶ್ ನೆಹ್ರಾ ಅವರನ್ನು ಪರಿಗಣಿಸಿಲ್ಲ.

ತಂಡ :ರೋಹಿತ್ ಶರ್ಮ, ಅಜಿಂಕ್ಯ ರಹಾನೆ, ವಿರಾಟ್ ಕೊಹ್ಲಿ (ನಾಯಕ), ಯುವರಾಜ್ ಸಿಂಗ್, ಎಂಎಸ್ ಧೋನಿ(ವಿಕೆಟ್ ಕೀಪರ್), ಮನೀಶ್ ಪಾಂಡೆ, ಕೇದಾರ್ ಜಾಧವ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜ, ಉಮೇಶ್ ಯಾದವ್, ಭುವನೇಶ್ವರ್ ಕುಮಾರ್, ಜಸ್ ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ

Story first published: Wednesday, January 3, 2018, 10:04 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X