ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

ವಿಂಬಲ್ಡನ್ ಕದನಕ್ಕೆ ಸಜ್ಜು, ಜೊಕೊವಿಕ್, ಸೆರೆನಾ ಟಾಪ್ ಸೀಡ್

By Mahesh

ಲಂಡನ್, ಜೂ.25: ಹಾಲಿ ಚಾಂಪಿಯನ್ ನೊವಾಕ್ ಜೊಕೊವಿಕ್ ಹಾಗೂ ಸೆರೆನಾ ವಿಲಿಯಮ್ಸ್ ಈ ಬಾರಿಯ ವಿಂಬಲ್ಡನ್ ಟೆನಿಸ್ ಟೂರ್ನಿಯಲ್ಲಿ ಅಗ್ರ ಶ್ರೇಯಾಂಕಿತ ಆಟಗಾರರಾಗಿ ಕಣಕ್ಕಿಳಿಯುತ್ತಿದ್ದಾರೆ. ಎರಡು ಬಾರಿಯ ಚಾಂಪಿಯನ್ ರಫೆಲ್ ನಡಾಲ್ 10ನೇ ಶ್ರೇಯಾಂಕ ಪಡೆದಿದ್ದಾರೆ.

ಹಾಲಿ ಚಾಂಪಿಯನ್ ಜೊಕೊವಿಕ್ ಹಾಗೂ ಐದು ಬಾರಿಯ ಚಾಂಪಿಯನ್ ಸೆರೆನಾ ಪ್ರಸ್ತುತ ವಿಶ್ವದ ನಂ.1 ಆಟಗಾರರಾಗಿದ್ದು, ಸಹಜವಾಗಿಯೇ ಗ್ರಾನ್‌ಸ್ಲಾಮ್ ಟೂರ್ನಿಯಲ್ಲಿ ಅಗ್ರ ಶ್ರೇಯಾಂಕವನ್ನು ಪಡೆದುಕೊಂಡಿದ್ದಾರೆ. 2008 ಹಾಗೂ 2010ರಲ್ಲಿ ವಿಂಬಲ್ಡನ್ ಚಾಂಪಿಯನ್ ಆಗಿರುವ ನಡಾಲ್ ಇತ್ತೀಚಿನ ವರ್ಷಗಳಲ್ಲಿ ಆಲ್ ಇಂಗ್ಲೆಂಡ್ ಕ್ಲಬ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ್ದಾರೆ.

Djokovic, Serena top seeds at Wimbledon, Rafa Nadal at 10

ಕಳೆದ ಮೂರು ಟೂರ್ನಿಗಳಲ್ಲಿ 2ನೇ, ಮೊದಲನೇ ಹಾಗೂ 4ನೇ ಸುತ್ತಿನಲ್ಲಿ ಸೋತು ಟೂರ್ನಿಯಿಂದ ಹೊರ ನಡೆದಿದ್ದಾರೆ.
ಸೋಮವಾರ(ಜೂ.29)ದಿಂದ ಆರಂಭವಾಗಲಿರುವ ವಿಂಬಲ್ಡನ್ ಟೂರ್ನಿಯಲ್ಲಿ 10ನೇ ಶ್ರೇಯಾಂಕಿತ ನಡಾಲ್ ನಾಲ್ಕನೆ ಸುತ್ತಿಗೇರುವ ಮೊದಲೇ ಜೊಕೊವಿಕ್, ಏಳು ಬಾರಿಯ ಚಾಂಪಿಯನ್ ರೋಜರ್ ಫೆಡರರ್ ಹಾಗೂ 2013ರ ಚಾಂಪಿಯನ್ ಆ್ಯಂಡಿ ಮರ್ರೆ ಅವರನ್ನು ಎದುರಿಸಲಿದ್ದಾರೆ.

ಮಹಿಳಾ ಡಬಲ್ಸ್ ವಿಭಾಗದಲ್ಲಿ ನಿರೀಕ್ಷೆಯಂತೆಯೇ ಭಾರತದ ಸಾನಿಯಾ ಮಿರ್ಜಾ ಮತ್ತು ಸ್ವಿಜರ್ಲೆಂಡ್​ನ ಮಾರ್ಟಿನಾ ಹಿಂಗಿಸ್ ಜೋಡಿ ಅಗ್ರ ಶ್ರೇಯಾಂಕ ಪಡೆದಿದೆ. ಪುರುಷರ ಡಬಲ್ಸ್​ನಲ್ಲಿ ರೋಹನ್ ಬೋಪಣ್ಣ ರೊಮೇನಿಯಾದ ಫ್ಲೋರಿನ್ ಮೆರ್ಜಿಯಾ ಜತೆ 9 ಮತ್ತು ಲಿಯಾಂಡರ್ ಪೇಸ್ ಕೆನಡದ ಡೇನಿಯಲ್ ನೆಸ್ಟರ್ ಜತೆ 11ನೇ ಶ್ರೇಯಾಂಕ ಪಡೆದಿದ್ದಾರೆ.

ಈ ವರ್ಷ ಆಸ್ಟ್ರೇಲಿಯನ್ ಹಾಗೂ ಫ್ರೆಂಚ್ ಓಪನ್ ಪ್ರಶಸ್ತಿಯನ್ನು ಜಯಿಸಿ 3ನೇ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿರುವ ಸೆರೆನಾ ಅಗ್ರ ಶ್ರೇಯಾಂಕವನ್ನು ಪಡೆದುಕೊಂಡಿದ್ದರೆ, ಹಾಲಿ ವಿಂಬಲ್ಡನ್ ಚಾಂಪಿಯನ್ ಪೆಟ್ರಾ ಕ್ವಿಟೋವಾ 2ನೇ ಶ್ರೇಯಾಂಕ ಪಡೆದಿದ್ದಾರೆ. ರೊಮಾನಿಯದ ಸಿಮೊನಾ ಹಾಲೆಪ್ 3ನೆ ಶ್ರೇಯಾಂಕ ಪಡೆದಿದ್ದಾರೆ.(ಪಿಟಿಐ)

Story first published: Wednesday, January 3, 2018, 10:14 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X