ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬರದ ನಾಡಿಗೆ ಹರಿಯಲಿದ್ದಾಳೆ ಭದ್ರೆ

By Staff
|
Google Oneindia Kannada News

ಚಿತ್ರದುರ್ಗ, ಫೆ. 5 : ಚಿತ್ರದುರ್ಗ ಜಿಲ್ಲೆಯ ಜನರ ಅನೇಕ ವರ್ಷಗಳ ಕೂಗಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿಸ್ಪಂದಿಸಿದ್ದಾರೆ. ನಾಲ್ಕು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಭದ್ರಾ ಮೇಲ್ದಂಡೆ ಯೋಜನೆಗೆ ಫೆ 9 ರಂದು ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಹೇಳಿದ್ದಾರೆ. ಜೊತೆಗೆ ಕೆಪಿಎಸ್ ಸಿ ಯಲ್ಲಿ ಬಂಜಾರ ಸಮುದಾಯದವರಿಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು ಎಂದು ಚಿತ್ರದುರ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಅವರು ತಿಳಿಸಿದರು.

ಅವ್ಯವಸ್ಥೆ ಆಗರ

ನಗರದ ಓಬವ್ವನ ಕ್ರೀಡಾಂಗಣದಲ್ಲಿ ಅಖಿಲ ಕರ್ನಾಟಕ ಸಾಹಿತ್ಯ ಸಮ್ಮೇಳನದ ಎರಡನೇ ದಿನದಲ್ಲಿ ಅನೇಕ ವಿಚಾರಗೋಷ್ಠಿ ನಡೆದಿರುವ ಅವ್ಯವಸ್ಥೆಯ ಕೂಗು ಕೇಳಿಬರತೊಡಗಿದೆ. ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ಎಲ್ಲ ನೋಂದಾಯಿತ ಸದಸ್ಯರಿಗೆ ಊಟ, ವಸತಿ ನೀಡುವುದು ಸಾಹಿತ್ಯ ಸಮ್ಮೇಳನದ ಆಯೋಜಕರ ಕರ್ತವ್ಯ, ಆದರೆ, ದುರ್ಗದ ಸಮ್ಮೇಳನದಲ್ಲಿ ಸಾಹಿತ್ಯಾಸಕ್ತರಿಗೆ ಸರಿಯಾಗಿ ಊಟದ ವ್ಯವಸ್ಥೆ ಮಾಡದ ಹಿನ್ನೆಲೆಯಲ್ಲಿ ಜನರು ಪ್ರತಿಭಟನೆಗೆ ಇಳಿದ ಘಟನೆ ನಡೆದಿದೆ.

ವಿಶೇಷವಾಗಿ ಉತ್ತರ ಕರ್ನಾಟಕದ ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಹುಬ್ಬಳ್ಳಿ, ಹಾವೇರಿ ಜಿಲ್ಲೆಗಳಿಂದ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿರುವ ಸಾಹಿತ್ಯಾಸಕ್ತರಿಗೆ ಸರಿಯಾದ ವಸತಿ ಹಾಗೂ ಊಟ ವ್ಯವಸ್ಥೆ ದೊರೆತಿಲ್ಲ. ಇದರಿಂದ ಆಕ್ರೋಶಭರಿತರಾದ ಜನರು ಪ್ರತಿಭಟನೆ ಇಳಿದರು. ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಘಟಕ ಹಾಗೂ ಚಿತ್ರದುರ್ಗ ಘಟಕಗಳು ಸಮ್ಮೇಳನವನ್ನು ವ್ಯವಸ್ಥಿತವಾಗಿ ಮಾಡುವಲ್ಲಿ ವಿಫಲವಾಗಿವೆ ಎಂದು ಘೋಷಣೆ ಕೂಗಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕಸಾಪ ಅಧ್ಯಕ್ಷ ಡಾ ನಲ್ಲೂರು ಪ್ರಸಾದ್, ಅವ್ಯವಸ್ಥೆಯನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗಿದೆ. ಸಮ್ಮೇಳನಕ್ಕೆ ಆಗಮಿಸಿರುವ ಎಲ್ಲರಿಗೂ ಸೂಕ್ತ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ಪೂರಕ ಓದಿಗೆ:
ನಲ್ಲೂರು ಪ್ರಸಾದರ ಹತ್ತು ಬೇಡಿಕೆಗಳು
ಸಮ್ಮೇಳನಾಧ್ಯಕ್ಷರ ಭಾಷಣದ ಪೂರ್ಣಪಾಠ
ಪೂರಕ ನೋಟಕ್ಕೆ:ದುರ್ಗದ ಚಿತ್ರಗಳನ್ನು ಕಣ್ತುಂಬಿಕೊಳ್ಳಿ

ಯಡಿಯೂರಪ್ಪನವರ ಶಿಲಾನ್ಯಾಸಗಳ ಹಾಸ್ಯ ಪ್ರಸಂಗ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X