ಕನ್ನಡ ಸಮ್ಮೇಳನದ ಮಾಧ್ಯಮ ಕೇಂದ್ರ ಉದ್ಘಾಟನೆ

77ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಾಧ್ಯಮ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತು ಆರಂಭಿಸಿರುವ ಅಂತರ್ಜಾಲ ತಾಣದಲ್ಲಿ ಹಿಂದಿನ ಸಮ್ಮೇಳನಗಳ ಅಧ್ಯಕ್ಷರ ಹೆಸರು, ಸಮ್ಮೇಳನ ನಡೆದ ವರ್ಷ, ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾರ ಇತ್ಯಾದಿ ಉಪಯುಕ್ತ ಮಾಹಿತಿ ನೀಡುತ್ತಿರುವುದು ನಿಜಕ್ಕೂ ಶ್ಲಾಘನಾರ್ಹ ಎಂದು ಹೇಳಿದರು.
ತಾವು ಪತ್ರಕರ್ತರಾಗಿದ್ದ ಕಾಲದಲ್ಲಿ ಒಂದು ಸುದ್ದಿಯನ್ನು ಕಳುಹಿಸಲು ಪಡುತ್ತಿದ್ದ ಕಷ್ಟವನ್ನು ವಿವರಿಸಿದ ಅವರು, ತಾವು ಬೇರೆ ಊರುಗಳಿಗೆ ಹೋಗಿ ವರದಿ ಮಾಡಿ, ಟೆಲಿಗ್ರಾಂ ಮೂಲಕ ಸುದ್ದಿ ಕಳುಹಿಸಿದರೆ, ಅದು ತಾವು ಬೆಂಗಳೂರಿಗೆ ಬಂದ ಬಳಿಕ ಕಚೇರಿ ತಲುಪುತ್ತಿತ್ತು. ಈ ಆಧುನಿಕ ಆವಿಷ್ಕಾರಗಳ ಲಾಭ ಪಡೆದು ಕನ್ನಡ ಸಾಹಿತ್ಯ ಸಮ್ಮೇಳನದ ಸಮಗ್ರ ಮಾಹಿತಿಯನ್ನು ಸಮಸ್ತ ಕನ್ನಡಿಗರಿಗೆ ತಲುಪಿಸುವಂತೆ ಮಾಧ್ಯಮ ಮಿತ್ರರಿಗೆ ಮನವಿ ಮಾಡಿದರು.
ಬೆಂಗಳೂರು ಕನ್ನಡ ಸಾಹಿತ್ಯ ಸಮ್ಮೇಳನದ ಚಿತ್ರಸಂಪುಟ
ಇಂಟರ್ನೆಟ್ ಸೌಲಭ್ಯ : ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಮಾಧ್ಯಮ ಕೇಂದ್ರದ ಬಗ್ಗೆ ವಿವರ ನೀಡಿ, ಇಲ್ಲಿ 20 ಕಂಪ್ಯೂಟರ್‌ಗಳನ್ನು ಅಳವಡಿಸಲಾಗಿದ್ದು, ಎಲ್ಲ ಕಂಪ್ಯೂಟರ್‌ಗಳಿಗೂ ಇಂಟರ್‌ನೆಟ್ ಸೌಲಭ್ಯ ಕಲ್ಪಿಸಲಾಗಿದೆ. ಸ್ಕ್ಯಾನರ್, ಪ್ರಿಂಟರ್ ವ್ಯವಸ್ಥೆಯ ಜೊತೆಗೆ ಫ್ಯಾಕ್ಸ್ ಕಳುಹಿಸಲು ಅನುಕೂಲವಾಗುವಂತೆ ಫ್ಯಾಕ್ಸ್ ಯಂತ್ರಗಳನ್ನು ಸಹ ಜೋಡಿಸಲಾಗಿದೆ. ದೃಶ್ಯ ಮಾಧ್ಯಮ ಹಾಗೂ ಪತ್ರಿಕಾ ಮಾಧ್ಯಮದ ವರದಿಗಾರರಿಗೆ ತಮ್ಮ ದೃಶ್ಯದ ತುಣುಕು ಹಾಗೂ ಛಾಯಾಚಿತ್ರಗಳನ್ನು ರವಾನೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಎಲ್ಲ ಮಾಧ್ಯಮ ಪ್ರತಿನಿಧಿಗಳಿಗೂ ಕನ್ನಡದಲ್ಲಿ ಸುದ್ದಿಯನ್ನು ಕಂಪ್ಯೂಟರ್‌ನಲ್ಲಿ ಸಿದ್ಧಪಡಿಸಿ ತಮ್ಮ ಪತ್ರಿಕಾ ಕಾರ್ಯಾಲಯಗಳಿಗೆ ರವಾನೆ ಮಾಡಲು ಇ-ಮೇಲ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಯುನಿಕೋಡ್, ಶ್ರೀಲಿಪಿ, ಬರಹ ಮತ್ತು ನುಡಿ ತಂತ್ರಾಂಶಗಳನ್ನು ಎಲ್ಲ ಕಂಪ್ಯೂಟರ್‌ಗಳಲ್ಲಿಯೂ ಅಳವಡಿಸಲಾಗಿದೆ ಎಂದರು.
ಮಾಧ್ಯಮಗೋಷ್ಠಿಗೆ ಪ್ರತ್ಯೇಕ ಕೊಠಡಿ : ಮಾಧ್ಯಮ ಕೇಂದ್ರದಲ್ಲಿಯೇ ಪ್ರತ್ಯೇಕ ಸುದ್ದಿಗೋಷ್ಠಿಯ ಕೊಠಡಿ ತೆರೆಯಲಾಗಿದ್ದು, ಈ ಕೊಠಡಿಯಲ್ಲಿ ಸಮ್ಮೇಳನ ನಡೆಯುವ ಸಂದರ್ಭದಲ್ಲಿ ಅಗತ್ಯ ಬಿದ್ದಲ್ಲಿ ವಿಶೇಷ ಮತ್ತು ತುರ್ತು ಪತ್ರಿಕಾಗೋಷ್ಠಿಗಳನ್ನು ಕೂಡ ಆಯೋಜಿಸಲು ತೀರ್ಮಾನಿಸಲಾಗಿದೆ.
77ನೇ ಕನ್ನಡ ಸಾಹಿತ್ಯ ಸಮ್ಮೇಳನದ ಮಾಧ್ಯಮ ಕೇಂದ್ರದ ಸಮನ್ವಯವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಮಾಧ್ಯಮ ಸಮನ್ವಯಾಧಿಕಾರಿ ನಾಗರಾಜ್ ಜಮಖಂಡಿ ಹಾಗೂ ಟಿ.ಎಂ. ಸತೀಶ್ ಅವರು ನಿರ್ವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಟಿ. ನಾಗರಾಜ್, ಬೆಂಗಳೂರು ದೂರದರ್ಶನ ಕೇಂದ್ರದ ಉಪ ಮಹಾ ನಿರ್ದೇಶಕ ಡಾ. ಮಹೇಶ್ ಜೋಶಿ, ವಿಧಾನ ಪರಿಷತ್ತಿನ ಸದಸ್ಯ ಅಶ್ವತ್ಥನಾರಾಯಣ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಎಸ್. ಸುಧೀಂದ್ರಕುಮಾರ್, ವಾರ್ತಾ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜು ಮತ್ತಿತರರು ಪಾಲ್ಗೊಂಡಿದ್ದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications