• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜೂನ್ ನಲ್ಲಿ ಕೃಷಿ ಬಂಡವಾಳ ಹೂಡಿಕೆದಾರರ ಸಮಾವೇಶ

By * ಡಾ.ಕೆ.ಎನ್.ದೊಡ್ಡಮನಿ, ಬೆಳಗಾವಿ
|

Farm Investors' Meet, Yeddyurappa announces
ಬೆಳಗಾವಿ, ಮಾ. 13 : ರಾಜ್ಯದ ಕೃಷಿ ಕ್ಷೇತ್ರವನ್ನು ಉದ್ಯಮಿಗಳಿಗೆ ಪರಿಚಯಿಸಿ ಬಂಡವಾಳವನ್ನು ಆಕರ್ಷಿಸುವ ಉದ್ದೇಶದಿಂದ ಬರುವ ಜೂನ್ ತಿಂಗಳಿನಲ್ಲಿ ಜಾಗತಿಕ ಕೃಷಿ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಆಯೋಜಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ನಡೆದಿರುವ ವಿಶ್ವಕನ್ನಡ ಸಮ್ಮೇಳನದ ಸಂದರ್ಭದಲ್ಲಿ ಬೆಳಗಾವಿ ಹೊರ ವಲಯದ ಕಣಬರ್ಗಿ ಪ್ರದೇಶದಲ್ಲಿ ಹಮ್ಮಿಕೊಳ್ಳಲಾದ ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಯ ಅವಕಾಶಗಳ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ರಾಜ್ಯದ ನೈಸರ್ಗಿಕ ಮತ್ತು ಮಾನವ ಸಂಪನ್ಮೂಲ, ಉತ್ತಮ ಅವಕಾಶಗಳ ಜೊತೆಗೆ ಬಂಡವಾಳ ಹೂಡಲು ನೆರವಾಗುವ ಸರ್ಕಾರದ ಉದ್ಯಮಸ್ನೇಹಿ ನೀತಿ ಮತ್ತು ಕ್ರೀಯಾಶೀಲ ಆಡಳಿತದ ವಾತಾವರಣ ಕರ್ನಾಟಕಕ್ಕೆ ವರದಾನವಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಉದ್ಯಮಿಗಳಿಗೆ ಸಿದ್ಧವಾದ ಕೈಗಾರಿಕಾ ಭೂಮಿಯನ್ನು ಲ್ಯಾಂಡ್ ಬ್ಯಾಂಕ್‌ಗಳ ಮೂಲಕ ಈಗಾಗಲೇ ಸುಮಾರು 1 ಲಕ್ಷ 15 ಸಾವಿರ ಎಕರೆ ಭೂಮಿಯನ್ನು ಗುರುತಿಸಲಾಗಿದೆ. ಇದರಲ್ಲಿ 82 ಸಾವಿರ ಎಕರೆ ಭೂಮಿಯ ಸ್ವಾಧೀನ ಪ್ರಕ್ರಿಯೆ ಆರಂಭವಾಗಿದೆ ಎಂದು ಅವರು ಹೇಳಿದರು.

ಸಮಗ್ರವಾದ ಕೈಗಾರೀಕರಣಕ್ಕೆ ಅನುಕೂಲವಾಗುವಂತೆ ರಾಜ್ಯದಲ್ಲಿ ಸುವರ್ಣ ಕರ್ನಾಟಕ ಅಭಿವೃದ್ಧಿ ಕಾರಿಡಾರ್ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು. ಜಾಗತೀಕ ಸಮಾವೇಶದ ನಂತರ 457 ಯೋಜನೆಗಳು ಸರ್ಕಾರದಿಂದ ಅನುಮೋದನೆಯಾಗಿದ್ದು, ಸುಮಾರು 1 ಕೋಟಿ 32 ಲಕ್ಷ ರೂಪಾಯಿಗಳ ಬಂಡವಾಳದಲ್ಲಿ ಈ ಯೋಜನೆಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ಯೋಜನೆಗಳ ಬಗ್ಗೆ ವಿವರ ನೀಡಿದರು.

300 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಬೆಳಗಾವಿಯಲ್ಲಿ ನಿರ್ಮಿಸಲಾಗುತ್ತಿರುವ ಸುವರ್ಣ ವಿಧಾನಸೌಧ ಕಟ್ಟದ ಕಾಮಗಾರಿ ಪ್ರಗತಿಯಲ್ಲಿದ್ದು, ಐದಾರು ತಿಂಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆಯಿದೆ. ಬರುವ ಜುಲೈನಲ್ಲಿ ಕಟ್ಟಡದ ಉದ್ಘಾಣೆಯನ್ನು ನೆರವೇರಿಸಿ ಆಯ್ಯವ್ಯಯ ಕುರಿತಾಗಿ ವಿಧಾನ ಮಂಡಲದ ಅಧಿವೇಶನ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ನುಡಿದರು.

ಸಮಾರಂಭದಲ್ಲಿ ಸಚಿವರುಗಳಾದ ಮುರುಗೇಶ್ ನಿರಾನಿ, ವಿ.ಎಸ್. ಆಚಾರ್ಯ, ಉಮೇಶ ಕತ್ತಿ, ಲಕ್ಷ್ಮಣ ಸವದಿ ಸೇರಿದಂತೆ ಅನೇಕ ಜನ ಪ್ರತಿನಿಧಿಗಳು, ಖ್ಯಾತ ಉದ್ಯಮಿದಾರರು ಉಪಸ್ಥಿತರಿದ್ದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Chief Minister of Karnataka plans to organize Global farm investos' meet in Karnataka. Yeddyurappa announced this project for development of agriculture at Vishwa Kannada Sammelana 2011, Belgaum.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more