ತುಂಗಾ ನಾಲೆಗೆ ನೀರು : ಸಾರ್ವಜನಿಕರಿಗೆ ಎಚ್ಚರಿಕೆ
ಶಿವಮೊಗ್ಗ, ಸೆ.11 : ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ನಾಲೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರಾಯೋಗಿಕವಾಗಿ ನೀರು ಹರಿಸಲು ತೀರ್ಮಾನಿಸಲಾಗಿದ್ದು, ಯಾವುದೇ ಜನ-ಜಾನುವಾರುಗಳು ನಾಲೆಗೆ ಇಳಿಯದಂತೆ ನೋಡಿಕೊಳ್ಳಲು ಹಾಗೂ ನಾಲೆಯಲ್ಲಿ ನೀರು ಹರಿಯಬಿಡುವಾಗ ಸಾರ್ವಜನಿಕರು ಜಾಗರೂಕತೆಯಿಂದ ಇರಬೇಕೆಂದು ತುಂಗಾ ಮೇಲ್ದಂಡೆ ಯೋಜನೆ ವಲಯದ ಮುಖ್ಯ ಇಂಜಿನಿಯರ್ ಆರ್.ರುದ್ರಯ್ಯ ತಿಳಿಸಿದ್ದಾರೆ.
ಶುಕ್ರವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಲೆಯ ಕಾಮಗಾರಿಯು 272 ಕಿ.ಮೀಟರ್‌ನಷ್ಟಿದ್ದು, ಈಗ ಅದರಲ್ಲಿ 156 ಕಿ.ಮೀ.ನಷ್ಟು ನಾಲೆ ಕಾಮಗಾರಿಯು ಮುಗಿದಿದೆ. ಹೀಗಾಗಿ ಇಂದಿನಿಂದ 156 ಕಿ.ಮೀ.ನಷ್ಟು ನಾಲೆಯಲ್ಲಿ ನೀರು ಹರಿಸಲಾಗುವುದೆಂದರು.
ಈ ಯೋಜನೆಯಡಿ ಶಿವಮೊಗ್ಗ, ದಾವಣಗೆರೆ ಹಾಗೂ ಹಾವೇರಿ ಜಿಲ್ಲೆಗಳ ಅಡಿಯಲ್ಲಿ ಬರುವ 80,434 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಯೋಜನೆಯನ್ನು ರೂಪಿಸಲಾಗಿದೆ. ಈ ಯೋಜನೆಯನ್ನು 1991ರಲ್ಲಿ ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ಪಡೆದು ಪ್ರಾರಂಭಿಸಲಾಯಿತು. ಈ ಯೋಜನೆಯ ಅಂದಾಜು ವೆಚ್ಚ 1,052.33 ಕೋಟಿ ಮೊತ್ತದ ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡಿದ್ದು, ಇಲ್ಲಿಯವರೆಗೆ ಒಟ್ಟು 987ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ತಿಳಿಸಿದರು.
ಸುಮಾರು 22 ಸಾವಿರ ಹೆಕ್ಟೇರ್‌ನಷ್ಟು ನೀರಾವರಿ ಸಾಮರ್ಥ್ಯದ ಗುರಿಯನ್ನು ಹೊಂದಲಾಗಿದೆ. ಇದರಲ್ಲಿ ಶಿವಮೊಗ್ಗ ತಾಲ್ಲೂಕಿನಲ್ಲಿ 686 ಹೆಕ್ಟೇರ್, ಹೊನ್ನಾಳಿ ತಾಲ್ಲೂಕಿನ 5976 ಹೆಕ್ಟೇರ್, ಹರಿಹರ ತಾಲ್ಲೂಕಿನಲ್ಲಿ 593 ಹೆಕ್ಟೇರ್, ಹಿರೇಕೆರೂರು ತಾಲ್ಲೂಕಿನಲ್ಲಿ 8391 ಹೆಕ್ಟೇರ್ ಹಾಗೂ ರಾಣೆಬೆನ್ನೂರು ತಾಲ್ಲೂಕಿನ 6404 ಹೆಕ್ಟೇರ್ ಗಳಷ್ಟು ಕೃಷಿ ಭೂಮಿಗೆ ನೀರನ್ನು ಒದಗಿಸುವ ಉದ್ದೇಶ ಹೊಂದಲಾಗಿದೆ ಎಂದರು.
ಜೊತೆಗೆ ನಾಲೆ ನಿರ್ಮಿಸುವ ಸಲುವಾಗಿ ಭೂಮಿ ಕಳೆದುಕೊಂಡ ಫಲಾನುಭವಿಗಳಿಗೆ 13.32 ಕೋಟಿ ರೂ. ಪರಿಹಾರ ಕೊಡಬೇಕಾಗಿದ್ದು, ಇಲ್ಲಿಯವರೆಗೆ ಸುಮಾರು 9.19 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. ಹಾಗೆಯೇ, 146 ಫಲಾನುಭವಿಗಳಿಗೆ 158 ನಿವೇಶನಗಳನ್ನು ಮಂಜೂರು ಮಾಡಲಾಗಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.
ಮುಖ್ಯ ನಾಲೆಯಡಿಯಲ್ಲಿ ಬರುವ ಕೆಲವು ಕಾಮಗಾರಿ ಪೂರ್ಣಗೊಳ್ಳದೆ ಇರುವುದರಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಇಂಧನ ಸಚಿವರ ಆದೇಶದಂತೆ ಕಾಮಗಾರಿಗಳನ್ನು ಸಮಾರೋಪಾದಿಯಲ್ಲಿ ಕೈಗೊಂಡು ಪ್ರಾಯೋಗಿಕವಾಗಿ ಇಂದಿನಿಂದ ನೀರು ಹರಿಸಲಾಗುತ್ತದೆ. ಹೀಗಾಗಿ ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಉಂಟಾಗಬಾರದು. ಹೀಗಾಗಿ ಜಾಗರೂಕತೆಯಿಂದ ಇರಲು ಮನವಿ ಮಾಡಿದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications