ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಡಕೆ ಕಾರ್ಯಪಡೆಗೆ 10 ಕೋಟಿ ಅನುದಾನ ಕೊಟ್ಟ ಸರ್ಕಾರ

|
Google Oneindia Kannada News

ಬೆಂಗಳೂರು, ನವೆಂಬರ್ 30 : ಅಡಕೆ ಕಾರ್ಯಪಡೆಯ ಬೇಡಿಕೆಗಳನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭರವಸೆ ಕೊಟ್ಟಿದ್ದರು. ಕಾರ್ಯಪಡೆಗೆ ಈಗ 10 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.

ಅಡಕೆ ಸಂಬಂಧಿತ ಸಂಶೋಧನೆ ಮತ್ತು ಇನ್ನಿತರ ಚಟುವಟಿಕೆಗಳಿಗೆ ಸಹಾಯಕವಾಗುವಂತೆ 10 ಕೋಟಿ ಅನುದಾನವನ್ನು ನೀಡಲಾಗಿದೆ. ತೀರ್ಥಹಳ್ಳಿಯ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಕಾರ್ಯಪಡೆಯ ಅಧ್ಯಕ್ಷರಾಗಿದ್ದಾರೆ.

ಅಡಿಕೆ ಬೆಳೆಗಾರರಿಗೆ ಅಭಯ ನೀಡಿದ ಸಿಎಂ ಯಡಿಯೂರಪ್ಪಅಡಿಕೆ ಬೆಳೆಗಾರರಿಗೆ ಅಭಯ ನೀಡಿದ ಸಿಎಂ ಯಡಿಯೂರಪ್ಪ

ಕರ್ನಾಟಕ ಸರ್ಕಾರ ಅಡಕೆ ಬೆಳೆಗಾರರ ಹಿತರಕ್ಷಣೆಗಾಗಿ ರಾಜ್ಯಮಟ್ಟದ ಕಾರ್ಯಪಡೆಯನ್ನು ರಚನೆ ಮಾಡಿತ್ತು. ಅಕ್ಟೋಬರ್‌ನಲ್ಲಿ ಆರಗ ಜ್ಞಾನೇಂದ್ರ ನೇತೃತ್ವದ ಕಾರ್ಯಪಡೆ ಹಾಗೂ ಬೆಳೆಗಾರರ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಮಾತುಕತೆ ನಡೆಸಿತ್ತು.

ಅಡಿಕೆ ಬೆಳೆಯಲ್ಲಿ ಹಿಂಗಾರ ಒಣಗುವಿಕೆ; ಹತೋಟಿ ಕ್ರಮಗಳು ಅಡಿಕೆ ಬೆಳೆಯಲ್ಲಿ ಹಿಂಗಾರ ಒಣಗುವಿಕೆ; ಹತೋಟಿ ಕ್ರಮಗಳು

10 Crore Fund For State Level Task Force On Arecanut

ಕಾರ್ಯಪಡೆಗೆ ಅನುದಾನ ಬಿಡುಗಡೆಯಾಗಿದ್ದು, ಮುಂದಿನ ಕಾರ್ಯ ಚಟವಟಿಕೆ ಕುರಿತು ಶೀಘ್ರದಲ್ಲಿಯೇ ಸಭೆ ಕರೆದು ಚರ್ಚೆ ನಡೆಸಲಾಗುತ್ತದೆ. ಅಡಕೆಯಿಂದ ಆರೋಗ್ಯಕ್ಕೆ ಹಾನಿಯಾಗುವುದಿಲ್ಲ ಎಂಬ ಕುರಿತು ಕ್ಲಿನಿಕಲ್ ವರದಿ ತಯಾರು ಮಾಡುವುದು ಕಾರ್ಯಪಡೆಯ ಮೊದಲ ಆದ್ಯತೆ ಆಗಲಿದೆ.

ಕ್ಯಾಂಪ್ಕೋದಿಂದ ಅಮೆಜಾನ್ ಮೂಲಕ ಅಡಿಕೆ, ಕಾಳುಮೆಣಸು ಮಾರಾಟಕ್ಯಾಂಪ್ಕೋದಿಂದ ಅಮೆಜಾನ್ ಮೂಲಕ ಅಡಿಕೆ, ಕಾಳುಮೆಣಸು ಮಾರಾಟ

ಅಡಕೆಯ ಪರ್ಯಾಯ ಉಪಯೋಗದ ಕುರಿತು ಸಂಶೋಧನೆಗಳು ನಡೆಯಬೇಕಿದೆ. ಅಡಕೆ ಬೆಳೆಗಾರರ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಪ್ರಕರಣವೊಂದು ದಾಖಲಾಗಿದೆ. ಅಲ್ಲಿ ವಾದ ಮಂಡನೆ ಮಾಡಲು ಹಿರಿಯ ವಕೀಲರನ್ನು ನೇಮಕ ಮಾಡಬೇಕಿದೆ.

ಕೋವಿಡ್ ಸಂದರ್ಭದಲ್ಲಿ ಗುಟ್ಕಾ, ತಂಬಾಕು ನಿಷೇಧದ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಇದರಿಂದಾಗಿ ಅಡಕೆ ಬೆಳೆಯುವ ಜಿಲ್ಲೆಗಳ ರೈತರು ಆತಂಕಗೊಂಡಿದ್ದಾರೆ. ರೈತರ ಹಿತವನ್ನು ಕಾಪಾಡಬೇಕು ಎಂದು ಕಾರ್ಯಪಡೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿತ್ತು.

English summary
Karnataka government released 10 crore fund for state level task force on arecanut. BJP MLA of Tirthahalli Araga Jnanendra chairmen for task force.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X