ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈಸೂರು ಜಿಲ್ಲೆಯಲ್ಲಿ 12 ಕಡೆ ಭತ್ತ ಖರೀದಿ ಕೇಂದ್ರ ಆರಂಭ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ನವೆಂಬರ್ 30: ಈ ಸಾಲಿನ ಮುಂಗಾರು ಋತುವಿನಲ್ಲಿ ರೈತರು ಬೆಳೆದ ಭತ್ತವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಜಿಲ್ಲೆಯಲ್ಲಿ 12 ಕಡೆ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಪಿ.ಶಿವಣ್ಣ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಭತ್ತವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಅದರಂತೆ ಮೈಸೂರು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ನೇತೃತ್ವದ ಜಿಲ್ಲಾ ಕಾರ್ಯಪಡೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ಉತ್ತಮ ಗುಣಮಟ್ಟದ ಭತ್ತವನ್ನು ಖರೀದಿಸಲು ಕ್ರಮ ವಹಿಸಲಾಗಿದೆ ಎಂದಿದ್ದಾರೆ.

ಶಾಸಕರ 'ಮಹಾರಾಣಿ' ಹೇಳಿಕೆಗೆ ಡಿಸಿ ರೋಹಿಣಿ ಸಿಂಧೂರಿ ತಿರುಗೇಟುಶಾಸಕರ 'ಮಹಾರಾಣಿ' ಹೇಳಿಕೆಗೆ ಡಿಸಿ ರೋಹಿಣಿ ಸಿಂಧೂರಿ ತಿರುಗೇಟು

ಮೈಸೂರಿನ ಬಂಡೀಪಾಳ್ಯದಲ್ಲಿರುವ ಎಪಿಎಂಸಿ ಆವರಣ, ಬಿಳಿಗೆರೆ ಖರೀದಿ ಕೇಂದ್ರ, ನಂಜನಗೂಡು ಎಪಿಎಂಸಿ ಆವರಣ, ತಿ.ನರಸೀಪುರ, ಬನ್ನೂರು, ಹುಣಸೂರು, ಹುಣಸೂರು ತಾಲೂಕಿನ ರತ್ನಪುರಿ, ಕೆ.ಆರ್.ನಗರ ಎಪಿಎಂಸಿ ಆವರಣಗಳಲ್ಲಿ ಚುಂಚನಕಟ್ಟೆಯ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯ ಉಗ್ರಾಣ, ಸರಗೂರು, ಪಿರಿಯಾಪಟ್ಟಣ ಹಾಗೂ ಬೆಟ್ಟದಪುರ ಎಪಿಎಂಸಿ ಆವರಣಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.

12 Centres Has Been Opened In Mysuru To Buy Paddy From Farmers

ರೈತರು ಭತ್ತವನ್ನು ಕನಿಷ್ಠ ಬೆಂಬಲ ಬೆಲೆ ಖರೀದಿ ಕೇಂದ್ರಗಳ ಮೂಲಕ ಮಾರಾಟ ಮಾಡಬೇಕು. ನ.30ರಿಂದ ಡಿ.30ರವರೆಗೆ ನೋಂದಣಿ ಮಾಡಲಾಗುವುದು. ಡಿ.20ರಿಂದ 2021ಮಾರ್ಚ್ 20ರತನಕ ಭತ್ತ ಖರೀದಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಹೆಸರು ನೋಂದಾಯಿಸಿಕೊಂಡ ರೈತರಿಂದ ಮಾತ್ರ ಗರಿಷ್ಠ 40 ಕ್ವಿಂಟಾಲ್ (ಪ್ರತಿ ಎಕರೆಗೆ 16 ಕ್ವಿಂಟಾಲ್ ನಂತೆ) ಭತ್ತವನ್ನು ಖರೀದಿಸಲಾಗುವುದು. ಭತ್ತ ಖರೀದಿಸಲು ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಸಹಕಾರ ಮಾರುಕಟ್ಟೆ ಮಹಾಮಂಡಳಿಯನ್ನು ಏಜೆನ್ಸಿಯಾಗಿ ನೇಮಿಸಿದ್ದು ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂಟಲ್ ಗೆ ಕನಿಷ್ಠ ಬೆಂಬಲ ಬೆಲೆ 1,868 ಹಾಗೂ ಗ್ರೇಡ್ ಎ ಭತ್ತಕ್ಕೆ 1,888 ನಿಗದಿಪಡಿಸಲಾಗಿದೆ ಎಂದಿದ್ದಾರೆ.

English summary
State government has ordered to buy paddy from farmers with minimum support price scheme. 12 centres has been opened in mysuru to buy paddy from farmers,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X