3ರೂಗೆ ಒಂದು ಕನ್ನಡ ಮ್ಯಾಗಜೀನ್

ಗಂಭೀರವಾಗಿಯೇ ಹೇಳುತ್ತಿದ್ದೇನೆ, ಪತ್ರಿಕೆಯ ಹೆಸರೇ 'ಸುಮ್ ಸುಮ್ನೆ" ನನಗೆ ನೆನಪಿರುವಂತೆ ಈ ಪತ್ರಿಕೆ ಆರಂಭವಾದದ್ದು ಎಂಟೂ ಹತ್ತೋ ರೂ.ದರದಲ್ಲಿ. ಆಗ ಅದರ ಪುಟ ಸಂಖ್ಯೆ, ಬಹುಷಃ ನೀತಿ ಬೇರೆಯೇ ಇತ್ತು. ಆದರೆ ಮಾರುಕಟ್ಟೆಯಲ್ಲಿ ತನ್ನದೇ ಒಂದು ಅಸ್ತಿತ್ವ ಪ್ರದರ್ಶಿಸಲು ಮೂರು ರೂ.ಗಳ ದರವಿಟ್ಟು ಪತ್ರಿಕೆಯನ್ನು ಪುನರ್ರೂಪಿಸಿದ್ದು ಸುಮಖ ಪ್ರಕಾಶನದ ರೂವಾರಿ ನಾರಾಯಣ ಮಾಳ್ಕೋಡ್.
ಪತ್ರಿಕೋದ್ಯಮದ ಚೂರುಪಾರು ಪರಿಚಯವಿದ್ದವರಿಗೆ ಮಾಳ್ಕೋಡ್‌ರ ಹೆಸರು ಕಿವಿಗೆ ಬಿದ್ದೇಬಿದ್ದಿರುತ್ತದೆ. ಬದುಕಿನ ಮಜಲುಗಳಲ್ಲಿ ವರದಿಗಾರರಾಗಿ, ಉಪಸಂಪಾದಕರಾಗಿ ದುಡಿದು ಈಗ ತಮ್ಮದೇ ಒಂದು ಬೃಹತ್ ಪುಸ್ತಕ ಪ್ರಕಾಶನವನ್ನು ನಡೆಸುತ್ತಿರುವ ಸಾಹಸಿ ಮಾಳ್ಕೋಡ್. ವೈಯುಕ್ತಿಕವಾಗಿ ಯಾವುದೇ ಪರಿಚಯ ನನಗಿಲ್ಲ. ಆದರೆ ಮೂಲತಃ ಹೊನ್ನಾವರದವರು ಎಂಬ ಮಾಹಿತಿ ಕೇಳಿ ಗೊತ್ತು. ಪ್ರತಿ ತಿಂಗಳು ಮುದ್ದಾಂ ಪುಸ್ತಕ ಪ್ರಕಟನೆ ಮಾಡುವುದು, ಸಂಗೀತ ಸಂಜೆ ಕಾರ್ಯಕ್ರಮ ನಡೆಸುವುದು, ಸಾಹಿತ್ಯಿಕ ಗೋಷ್ಠಿ... ನಡೆಸುವ ಸುಮುಖ ಇವತ್ತು ಈ ಹಿಂದಿನ ಸಂಗಮ ಪ್ರಕಾಶನದ ರಾಗಸಂಗಮ, ಚುಟುಕು ಪತ್ರಿಕೆಗಳ ಜವಾಬ್ದಾರಿಯ ಜೊತೆಗೆ ತನ್ನದೇ ನಾಲ್ಕು ಮಾಸಿಕಗಳನ್ನು ಹೊರತರುತ್ತಿದೆ. ಅದರಲ್ಲೊಂದು ಸುಮ್ ಸುಮ್ನೆ.
ನಿಜ, ಸುಮ್ನೆಯದು ಗಟ್ಟಿ ಸಾಹಿತ್ಯಿಕ ಚಿಂತನೆ ಹಚ್ಚುವಂತದಲ್ಲ. ಹಾಗೆಂದು ಅದು ತನ್ನನ್ನು ಕರೆದುಕೊಂಡೂ ಇಲ್ಲ. ಟೈಂಪಾಸ್‌ಗೆ ಹಾಳೂಮೂಳೂ ತಿಂದು ಆರೋಗ್ಯ ಹಾಳುಮಾಡಿಕೊಳ್ಳುವುದಕ್ಕಿಂತ ಅದೇ ದರಕ್ಕೆ ಒಂದು ಸುಮ್ನೆ ಕೊಂಡು ಬಸ್‌ನಲ್ಲಿ ಓದುತ್ತ ಕೂರಬಹುದು. 26 ಪುಟಗಳಲ್ಲಿ ಪುಟ್ಟ ಸಣ್ಣ ಮಾಹಿತಿಗಳ ಸಂಗ್ರಹ. ಚಿತ್ರ ಸಮೇತ. ಇತ್ತೀಚೆಗಂತೂ ನಾಲ್ಕು ಎಂಟು ಪುಟಗಳನ್ನು ಬಹುವರ್ಣಗಳಲ್ಲಿ ಮುದ್ರಿಸುವ ಸಾಹಸವನ್ನು ಮಾಡುತ್ತಿದ್ದಾರೆ. 'ಮಕ್ಕಳ ಜ್ಞಾನ ವಿಕಾಸಕ್ಕಾಗಿ" ಎಂಬ ಉಲ್ಲೇಖ ಪತ್ರಿಕೆಯಲ್ಲಿದ್ದರೂ ಇದು ಎಲ್ಲ ವರ್ಗದ ಓದುಗರಿಗೆ ಸಲ್ಲುತ್ತದೆ. ತುಸು ಖುಷಿ, ಚುಟುಕು ಮಾಹಿತಿಯ ಪತ್ರಿಕೆಯ ತಂತ್ರ ಗಮನ ಸೆಳೆಯುತ್ತದೆ.
ಪತ್ರಿಕೆಗೆ ಇನ್ನೂ ಎರಡು ವರ್ಷಗಳ ಪ್ರಾಯ. ನನ್ನ ಆಪ್ತ ಮಾಹಿತಿದಾರರ ಪ್ರಕಾರ, ಸುಮ್ನೆಯ ಪ್ರಸಾರ ಸಂಖ್ಯೆ ಉತ್ತೇಜನಕಾರಿಯಾಗಿಲ್ಲ. ಬುಕ್‌ಸ್ಟಾಲ್‌ಗಳ ಕೌಂಟರ್ ಸೇಲ್ ಕೂಡ ಚೆನ್ನಾಗಿಲ್ಲ. ಖಂಡಿತವಾಗಿಯೂ ಇದು ಅಸಹನೀಯ ಅಂಶ. ಕೇವಲ ಮೂರು ರೂಪಾಯಿಯ ಈ ಪತ್ರಿಕೆ ಅಷ್ಟು ದುಡ್ಡಿಗೆ ಮೋಸ ಮಾಡುವುದಿಲ್ಲವೆಂದು ನಾನು 'ಯಾವುದೇ ದೇವರ ಮೇಲೆ" ಆಣೆ ಮಾಡಿ ಹೇಳಬಲ್ಲೆ! ಬೇಕೆನ್ನುವವರಿಗೆ ಬುಕ್‌ಸ್ಟಾಲ್‌ಗಳಲ್ಲಿ ಲಭ್ಯ. ಅಥವಾ ವರ್ಷಕ್ಕೆ ಬರೇ 36 ರೂ. ಚಂದಾವನ್ನು ಸುಮುಖ ಡಿಸ್ಟಿಬ್ಯೂಟರ್‍ಸ್, ನಂ.174ಇ/28, 2ನೇ ಮಹಡಿ, ಒಂದನೇ ಮುಖ್ಯರಸ್ತೆ, ವಿದ್ಯಾರಣ್ಯ ನಗರ, ಮಾಗಡಿ ರಸ್ತೆ, ಟೋಲ್‌ಗೇಟ್, ಬೆಂಗಳೂರು -560023ಗೆ ಕಳುಹಿಸಿಕೊಡಬಹುದು. ಫೋನ್ - 080-2314 6060. ಓದಿ ಸುಮ್ನಾಗದಿರಿ, ಪ್ಲೀಸ್!
ಕೊನೆ ಮಾತು : ಕೆಲವು ಮಂದಿ ದಟ್ಸ್ ಕನ್ನಡ ಓದುಗರು ಪದೇ ಪದೆ ವಾಚನಾಲಯವೊಂದರ ಪ್ರಸ್ತಾಪ ನಿಮ್ಮ ಅಂಕಣದಲ್ಲಿ ಕಾಣುತ್ತಿದ್ದೇವೆ. ಅದರ ಬಗ್ಗೆ ಮಾಹಿತಿ ಬೇಕು ಎನ್ನುತ್ತಿದ್ದಾರೆ. ಅಂತವರಲ್ಲಿ ನನ್ನ ವಿನಮ್ರ ವಿನಂತಿ ಇಷ್ಟೇ, ನನ್ನ ಬ್ಲಾಗ್ ಲಿಂಕ್ http://mavemsa.blogspot.com/2009/10/blog-post_21.html ಬಳಸಿ ತಾವು ವಿವರಪೂರ್ಣ ಲೇಖನ ಓದಬಹುದು. ಜೊತೆಜೊತೆಗೆ ನೀವೂ ಈ ಅಕ್ಷರ ಆಂದೋಲನದಲ್ಲಿ ಪಾಲ್ಗೊಂಡರೆ ನಾನು ಕೃತಜ್ಞ. ಇನ್ನೆಂತ ಹೇಳಲಿ?
ಲೇಖಕರ ವಿಳಾಸ : ಮಾ.ವೆಂ.ಸ.ಪ್ರಸಾದ್, ಮಾವಿನಸರ, ಪೋಸ್ಟ್-ಎಡಜಿಗಳೇಮನೆ. ಸಾಗರ ತಾ. ಶಿವಮೊಗ್ಗ ಜಿ. 577401 ಫೋನ್-08183 236068, 98864 07592 ಇ ಮೇಲ್ : [email protected]
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications