ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಂಜಾಬ್‌ನಲ್ಲಿ ರೈತರ ಪ್ರತಿಭಟನೆ: 28 ರೈಲುಗಳ ಸಂಚಾರ ಸ್ಥಗಿತ

|
Google Oneindia Kannada News

ಅಮೃತಸರ, ಸೆಪ್ಟೆಂಬರ್ 26: ಕೇಂದ್ರದ ಹೊಸ ಕೃಷಿ ಮಸೂದೆ ವಿರೋಧಿಸಿ ರೈತರು ಹಮ್ಮಿಕೊಂಡಿದ್ದ ರೈಲ್ ರೋಖೋ ಚಳವಳಿಯನ್ನು ಪಂಜಾಬಿನಲ್ಲಿ ಮೂರು ದಿನಗಳ ಕಾಲ ವಿಸ್ತರಿಸಲಾಗಿದೆ.

ಒಟ್ಟು 28 ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ. ರೈಲ್ ರೋಖೋ ಚಳವಳಿಯನ್ನು ಸೆಪ್ಟಂಬರ್ 26 ರಿಂದ ಸೆಪ್ಟಂಬರ್ 29ರವರೆಗೆ ವಿಸ್ತರಿಸಲಾಗಿದೆ ಎಂದು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ರಾಜ್ಯ ಕಾರ್ಯದರ್ಶಿ ಸರ್ವಾನ್ ಸಿಂಗ್ ಪಂದೇರ್ ತಿಳಿಸಿದ್ದಾರೆ.

ರೈತರ ಬೃಹತ್ ಪ್ರತಿಭಟನೆ; ಬಾರುಕೋಲು ಬೀಸಿ ಆಕ್ರೋಶ ರೈತರ ಬೃಹತ್ ಪ್ರತಿಭಟನೆ; ಬಾರುಕೋಲು ಬೀಸಿ ಆಕ್ರೋಶ

ಪ್ರತಿಭಟನೆಯಲ್ಲಿ ಯಾವುದೇ ರಾಜಕೀಯ ಪಕ್ಷಗಳು ಮತ್ತು ಯಾವುದೇ ರಾಜಕಾರಣಿಗಳು ಬಂದು ರೈತರನ್ನು ಉದ್ದೇಶಿಸಿ ಮಾತನಾಡಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

28 Trains Suspended In Punjab Amid Farmers Protest

ರೈತರ ಪ್ರತಿಭನೆ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಸೆಪ್ಟಂಬರ್ 24 ರಿಂದ 26 ರವರೆಗೆ ಫಿರೋಜ್ ಪುರ ವಿಭಾಗದ ಎಲ್ಲಾ ರೈಲು ಸಂಚಾರವನ್ನು ರದ್ದುಗೊಳಿಸಿತ್ತು. ಪ್ರಯಾಣಿಕರ ಸುರಕ್ಷತೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು.

Recommended Video

China - Pakistan ಒಟ್ಟಿಗೆ ಬಂದ್ರು ನಾವ್ Ready to Fight | Oneindia Kannada

265ಕ್ಕೂ ಹೆಚ್ಚು ರೈತ ಸಂಘಟನೆಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿವೆ. ಸೆಪ್ಟೆಂಬರ್ 27 ರಂದು ವಿವಿಧ ಮಹಿಳಾ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಲಿವೆ. ಸೆಪ್ಟಂಬರ್ 28 ರಂದು ಭಗತ್ ಸಿಂಗ್ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಯುವಕರು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

English summary
After a call to intensify protests against the three new controversial farm bills, farmers in Punjab - who have also extended their "Rail Rokho" agitation till September 29 - said they are "not being misled by the opposition" and that they have read the fine print.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X