ಸಿಎಂ ಸಿದ್ದರಾಮಯ್ಯ ತವರಲ್ಲಿ ನಿಂತಿಲ್ಲ ರೈತರ ಆತ್ಮಹತ್ಯೆ
ಮೈಸೂರು, ಅಕ್ಟೋಬರ್ 23: ರಾಜ್ಯದ ಹಲವು ಕಡೆ ಕೇಳಿ ಬರುತ್ತಿದ್ದ ರೈತರ ಆತ್ಮಹತ್ಯೆ ಸುದ್ದಿಗಳಿಗೆ ವಿರಾಮ ಬಿದ್ದಿದ್ದರೂ ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರು ತಾಲೂಕಿನಲ್ಲಿ ಮಾತ್ರ ನಿಲ್ಲುವ ಲಕ್ಷಣಗಳೇ ಕಾಣದಿರುವುದು ಬೇಸರದ ಸಂಗತಿಯಾಗಿದೆ.
ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವುದು ಭಯ ಹುಟ್ಟಿಸುವಂತಿದೆ. ಮೇಲಿಂದ ಮೇಲೆ ಹಲವು ಕಾರಣಗಳಿಗೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಸಾಲಭಾದೆಗೆ ಹೆದರಿ ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆ ಹೋಬಳಿಯ ಅಂಕನಹಳ್ಳಿಕೊಪ್ಪಲು ಗ್ರಾಮದ ರಾಮೇಗೌಡ(53) ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು 30 ಗುಂಟೆ ಜಮೀನು ಹೊಂದಿದ್ದು, ಕೃಷಿ ಚಟುವಟಿಕೆಗೆ ಇಲ್ಲಿನ ಪಿಎಲ್ ಡಿ ಬ್ಯಾಂಕ್ ನಿಂದ 50 ಸಾವಿರ ಸಾಲ ಮತ್ತು 2 ಲಕ್ಷ ರೂ. ಕೈ ಸಾಲ ಮಾಡಿಕೊಂಡಿದ್ದು, ಅದನ್ನು ತೀರಿಸಲು ಸಾಧ್ಯವಾಗದ ಕಾರಣದಿಂದ ಭಾನುವಾರ ಬೆಳಿಗ್ಗೆ ತನ್ನ ಜಮೀನಿನಲ್ಲಿ ವಿಷದ ಮಾತ್ರೆ ಸೇವಿಸಿದ್ದಾರೆ.
ಈ ಸಂಬಂಧ ಕೆ.ಆರ್.ನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕೆ.ಆರ್.ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ನೀಡಲಾಯಿತು.
ಈ ಬಾರಿ ಉತ್ತಮ ಮಳೆಯಾಗಿದ್ದು, ಕೃಷಿ ಮಾಡಲು ಸರ್ಕಾರ ಪ್ರೋತ್ಸಾಹ ನೀಡಬೇಕಾಗಿದೆಯಲ್ಲದೆ, ರೈತರಲ್ಲಿ ಮನೋಸ್ಥೈರ್ಯ ತುಂಬುವ ಕೆಲಸವನ್ನು ಮಾಡಬೇಕಾಗಿದೆ.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್












Click it and Unblock the Notifications