ಅ.24 ರಿಂದ ಜಿಕೆವಿಕೆಯಲ್ಲಿ ಕೃಷಿ ಮೇಳ: ಈ ಬಾರಿ ಹಲವು ಹೊಸತು
ಬೆಂಗಳೂರು, ಅಕ್ಟೋಬರ್ 23: ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ) ಯಲ್ಲಿ ನಾಳೆ (ಗುರುವಾರ) ದಿಂದ ಕೃಷಿ ಮೇಳ ಆರಂಭವಾಗಲಿದೆ.
'ನಿಖರ ಕೃಷಿ-ಸುಸ್ಥಿರ ಅಭಿವೃದ್ಧಿ' ಧ್ಯೇಯ ಈ ಬಾರಿಯ ಕೃಷಿ ಮೇಳ ನಡೆಯಲಿದ್ದು, ಅಕ್ಟೋಬರ್ 24 ರಿಂದ 27 ರವರೆಗೆ ನಡೆಯಲಿದೆ. ಕೃಷಿ ಮೇಳವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ.
ಈ ಬಾರಿಯ ಕೃಷಿ ಮೇಳದಲ್ಲಿ ಹಲವು ಹೊಸತು ಇರಲಿವೆ ಎಂದು ಜಿಕೆವಿಕೆ ವಿವಿ ಕುಲಪತಿ ಎಸ್.ರಾಜೇಂದ್ರ ಪ್ರಸಾದ್ ಹೇಳಿದ್ದು, 'ಮೇಳದಲ್ಲಿ ಪ್ರಾತ್ಯಕ್ಷಿಕೆಗಳ ಮೂಲಕವೇ ಕೃಷಿಯ ನೂತನ ವಿಧಾನಗಳು ಹಾಗೂ ತಂತ್ರಜ್ಞಾನಗಳ ಬಗ್ಗೆ ನಿಖರ ಮಾಹಿತಿ ನೀಡಲಿದ್ದೇವೆ' ಎಂದರು.

ಮೇಳದಲ್ಲಿ ಕೃಷಿ ವಸ್ತು ಪ್ರದರ್ಶನಕ್ಕಾಗಿ 700ಕ್ಕೂ ಅಧಿಕ ಮಳಿಗೆಗಳುಇರಲಿವೆ. ಕೃಷಿ ವಿಶ್ವವಿದ್ಯಾನಿಲಯಗಳು, ಕೃಷಿ, ಜಲಾನಯನ ಅಭಿವೃದ್ಧಿ, ರೇಷ್ಮೆ, ಅರಣ್ಯ, ಪಶುಸಂಗೋಪನೆ, ತೋಟಗಾರಿಕೆ, ಕೃಷಿ ಮಾರುಕಟ್ಟೆ, ಮೀನುಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ಹಾಲು ಮಹಾಮಂಡಳಿ, ಸ್ವ-ಸಹಾಯ ಸಂಘಗಳು ಭಾಗವಹಿಸಲಿವೆ. 12 ಲಕ್ಷ ಮಂದಿ ಭೇಟಿ ನೀಡುವ ನಿರೀಕ್ಷೆ ಇದೆ' ಎಂದು ಕುಲಪತಿಗಳು ಮಾಹಿತಿ ನೀಡಿದ್ದಾರೆ.
ಅನಾನುಕೂಲಗಳನ್ನು ತಪ್ಪಿಸಲು ಜಿಕೆವಿಕೆ ಪ್ರವೇಶ ದ್ವಾರದಿಂದ ಎರಡು ಉಚಿತ ಬಸ್ ವ್ಯವಸ್ಥೆ ಮಾಡಲಾಗಿದ್ದು, ವೇದಿಕೆ ಬಳಿಗೆ ಬರಲು ಇದು ಅನುಕೂಲಕರವಾಗಲಿದೆ. ರೈತರ ಸಂಚಾರಕ್ಕೆ ಬಗ್ಗೀಸ್ ಸೇವೆ, ರೈತರಿಗೆ ಉಚಿತ ಆರೋಗ್ಯ ತಪಾಸಣೆ, ಎರಡು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ.
ಕೃಷಿ ಮೇಳದ ಸಂಪೂರ್ಣ ಮಾಹಿತಿ ಪಡೆಯಲು ಜಿಪಿಎಸ್ ಆಧರಿತ 'krishimela2019' ಮೊಬೈಲ್ ಆ್ಯಪ್ ಸಿದ್ಧಪಡಿಸಲಾಗಿದೆ. ರೈತರು ಹಾಗೂ ಮೇಳಕ್ಕೆ ಭೇಟಿ ನೀಡುವವರು ತಮ್ಮ ಮೊಬೈಲ್ ಮೂಲಕವೇ ಕೃಷಿ ಮೇಳದಲ್ಲಿ ಎಲ್ಲೆಲ್ಲಿ ಏನೇನಿದೆ? ಎಂಬುದರ ಮಾಹಿತಿ ಪಡೆದುಕೊಳ್ಳಬಹುದು. ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಮಾಹಿತಿ ಲಭ್ಯ ಎಂದು ಕುಲಪತಿಗಳು ತಿಳಿಸಿದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications