ರೈತರ ಸಹಾಯಕ್ಕಾಗಿ 'ರೈತ ಬೆಳೆ ಸಮೀಕ್ಷೆ ಅಪ್ಲಿಕೇಶನ್' ಬಿಡುಗಡೆ

ಬೆಂಗಳೂರು, ಆಗಸ್ಟ್ 12 : ರೈತರ ಸಹಾಯಕ್ಕಾಗಿ ಕರ್ನಾಟಕ ಸರ್ಕಾರ ವಿನೂತನವಾದ 'ರೈತ ಬೆಳೆ ಸಮೀಕ್ಷೆ ಅಪ್ಲಿಕೇಶನ್' ಬಿಡುಗಡೆ ಮಾಡಿದೆ. ರೈತರು ಗೂಗಲ್ ಪ್ಲೇ ಸ್ಟೋರ್‌ನಿಂದ ಅಪ್ಲಿಕೇಶನ್ ಉಚಿತವಾಗಿ ಡೌನ್‌ ಲೋಡ್ ಮಾಡಿಕೊಂಡು ತಮ್ಮ ಕೃಷಿ ಸಂಬಂಧಿತ ಮಾಹಿತಿಯನ್ನು ನಮೂದಿಸಬಹುದು.

ಬುಧವಾರ ಕೃಷಿ ಸಚಿವ ಬಿ. ಸಿ. ಪಾಟೀಲ್ 'ರೈತ ಬೆಳೆ ಸಮೀಕ್ಷೆ ಅಪ್ಲಿಕೇಶನ್' ಬಿಡುಗಡೆ ಮಾಡಿದರು. ಕೃಷಿ ಬೆಳೆ ಬಗ್ಗೆ ಸಂಪೂರ್ಣ ಮಾಹಿತಿ ನೀಡುವ ಇದನ್ನು ಇ-ಆಡಳಿತ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಗೂಗಲ್ ಪ್ಲೇ ಸ್ಟೋರ್‌ನಲ್ಲಿ 'ರೈತ ಬೆಳೆ ಸಮೀಕ್ಷೆ ಅಪ್ಲಿಕೇಶನ್' ಉಚಿತವಾಗಿ ಲಭ್ಯವಿದೆ. ರೈತರು ಡೌನ್‌ ಲೋಡ್ ಮಾಡಿಕೊಂಡು ತಮ್ಮ ಕೃಷಿ ಸಂಬಂಧಿತ ಮಾಹಿತಿಗಳನ್ನು ನಮೂದಿಸಬಹುದು. ಇದನ್ನು ರೈತರಿಗೆ ಸಂಬಂಧಿಸಿದ ವಿವಿಧ ಯೋಜನೆಗಳಿಗೂ ಬಳಸಬಹುದಾಗಿದೆ.

Agriculture Minister BC Patil Launches Farmers Crop Survey App

ರೈತ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಪ್ರಯೋಜನಗಳು

* ಬೆಳೆ‌ ನಷ್ಟ ಪರಿಹಾರ ವಿತರಣೆಗೆ ಮಾಹಿತಿ
* ಬೆಳೆ‌ ವಿಮೆ ಯೋಜನೆಯಡಿ ಬೆಳೆ ವಿವರ ಪರಿಶೀಲನೆ
* ಪಹಣಿಯಲ್ಲಿ ಬೆಳೆ ವಿವರ ದಾಖಲು
* ಕನಿಷ್ಠ ಬೆಂಬಲ ಬೆಲೆಗೆ ಫಲಾನುಭವಿ ಗುರುತಿಸುವುದು
* ಬೆಳೆ‌ ಕಟಾವು ಪ್ರಯೋಗಕ್ಕೆ ಮಾಹಿತಿ

ಅಪ್ಲಿಕೇಶನ್ ಡೌನ್ ಲೋಡ್ ಮಾಡಿಕೊಳ್ಳಲು ಕ್ಲಿಕ್ ಮಾಡಿ.

ಕಾಲಮಿತಿ ನಿಗದಿ : ರೈತರು ಬೆಳೆದ ವಿವರಗಳನ್ನು ಅಪ್‌ಲೋಡ್ ಮಾಡಲು ಮುಂಗಾರು ಹಂಗಾಮಿಗೆ ಆಗಸ್ಟ್ 24, ಹಿಂಗಾರು ಹಂಗಾಮಿಗೆ ಡಿಸೆಂಬರ್ 1 ರಿಂದ 15 ರವರೆಗೆ ಹಾಗೂ ಬೇಸಿಗೆ ಹಂಗಾಮಿಗೆ 2021ರ ಮಾರ್ಚ್ 1 ರಿಂದ 15 ರವರೆಗೆ ಕಾಲಾವಕಾಶ ಇದೆ.

ಒಂದು ವೇಳೆ ರೈತರು ನಿಗದಿತ ಸಮಯದೊಳಗೆ ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಅಪ್‌ಲೋಡ್ ಮಾಡದಿದ್ದಲ್ಲಿ. ಖಾಸಗಿ ನಿವಾಸಿಗಳ ಸಹಾಯದಿಂದ ತಮ್ಮ ಜಮೀನುಗಳ ಬೆಳೆ ಮಾಹಿತಿಯನ್ನು ಛಾಯಚಿತ್ರದೊಂದಿಗೆ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಅಪ್‌ಲೋಡ್ ಮಾಡಿಸಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+