ತಾಳ್ಮೆವಹಿಸಲು ರೈತರಿಗೆ ಮನವಿ ಮಾಡಿದ ಕೃಷಿ ಸಚಿವ ಬಿಸಿ ಪಾಟೀಲ್
ಬೆಂಗಳೂರು, ಏಪ್ರೀಲ್ 1: ರೈತರು ತಮ್ಮ ಬೆಳೆಗಳನ್ನು ರಸ್ತೆಗೆ ಚೆಲ್ಲುವುದಾಗಲಿ, ನಾಶ ಮಾಡುವುದಾಗಲೀ ಮಾಡಬಾರದು. ಕೊರೊನಾ ಜಗತ್ತಿಗೆ ಎದುರಾದ ಸಮಸ್ಯೆ. ಇದನ್ನು ಯಾರೂ ನಿರೀಕ್ಷಿಸಿರಲಿಲ್ಲ. ಹೀಗಾಗಿ ರೈತರು ಆತುರಕ್ಕೊಳಗಾಗದೇ ಸ್ವಲ್ಪ ತಾಳ್ಮೆವಹಿಸಿ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ರೈತರಿಗೆ ಮನವಿ ಮಾಡಿದ್ದಾರೆ.
ಬುಧವಾರ ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಸಚಿವ ಬಿ ಸಿ ಪಾಟೀಲ್, ರಾಜ್ಯದ ಯಾವುದೇ ಭಾಗದಲ್ಲಿ ರೈತರ ಬೆಳೆ ಸಮೀಕ್ಷೆಯಾಗದೇ ಇದ್ದದ್ದು ಕಂಡುಬಂದಲ್ಲಿ ತಕ್ಷಣವೇ ಸಮೀಕ್ಷೆ ಕೈಗೊಳ್ಳಬೇಕು ಎಂದು ಕೃಷಿ ಅಧಿಕಾರಿಗಳಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಸೂಚನೆ ನೀಡಿದ್ದಾರೆ.
ಸುಳ್ಳು ಸುದ್ದಿಗೆ ರೈತರು ಕಿವಿಕೊಡಬಾರದು, ರೈತರು ಆತುರಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿರುವ ಬಿಸಿ ಪಾಟೀಲ್, ರೈತರಿಗೆ ಕೆಲವು ಸಲಹೆಗಳನ್ನು ನೀಡಿದ್ದಾರೆ. ಮುಂದೆ ಓದಿ...

ರೈತರು ಆತುರಕ್ಕೆ ಒಳಗಾಗಬಾರದು
ಆತುರಕ್ಕೆ ಒಳಪಟ್ಟಾಗಲಿ ಅಥವಾ ಅಪಪ್ರಚಾರಕ್ಕಾಗಲಿ ರೈತರು ಕಿವಿಕೊಡಬಾರದು. ಯಾರೂ ಆತುರಕ್ಕೆ ಬುದ್ಧಿಕೊಟ್ಟು ಬೆಳೆಗಳನ್ನು ನಾಶ ಮಾಡುವುದಾಗಲಿ ರಸ್ತೆಗೆ ಸುರಿಯುವುದಾಗಲೀ ಮಾಡಬಾರದು. ಶಿಥಲೀಕರಣ ಘಟಕ ಎಪಿಎಂಸಿ ವ್ಯವಸ್ಥೆ ಬಳಸಿಕೊಳ್ಳಬೇಕು ಎಂದು ಕೃಷಿ ಸಚಿವರು ಸ್ಪಷ್ಟಮಾಹಿತಿ ನೀಡಿದರು.
ಪೊಲೀಸರಾಗಲೀ ಬೇರೆ ಯಾರೇ ಆಗಲೀ ಗ್ರೀನ್ ಪಾಸ್ ಹೊಂದಿದ ರೈತರ ಪರಿಕರ ಫಸಲು ಮಾರಾಟ ಸಾಗಾಣಿಕೆಗೆ ತಡೆ ಮಾಡುವಂತಿಲ್ಲ ಎಂದು ಸಚಿವರು ಪುನರುಚ್ಚರಿಸಿದರು.

ದುರಪಯೋಗ ಮಾಡಿಕೊಳ್ಳುವ ಕೆಲ ಶಕ್ತಿಗಳಿವೆ
ಪಾಸ್ ಹೊಂದಿದ ಬಾಡಿಗೆ ವಾಹನಗಳನ್ನು ಸಹ ರೈತರು ಸಾಗಾಣಿಕೆಗೆ ಬಳಸಬಹುದು. ಅವಕಾಶವನ್ನು ದುರಪಯೋಗ ಮಾಡಿಕೊಳ್ಳುವ ಕೆಲ ಶಕ್ತಿಗಳಿವೆ. ದುರುದ್ದೇಶಪೂರಕ ಕೊರೊನಾ ಪರಿಸ್ಥಿತಿ ಬಳಸಿಕೊಂಡು ದುಪ್ಪಟ್ಟು ಬೆಲೆಗೆ ವಸ್ತುಗಳನ್ನು ಯಾರಾದರೂ ಮಾರಾಟ ಮಾಡಿದ್ದು ಕಂಡುಬಂದಲ್ಲಿ ಅಂತವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಬಿ.ಸಿ. ಪಾಟೀಲ್ ಎಚ್ಚರಿಕೆ ಕೊಟ್ಟಿದ್ದಾರೆ.

ರೈತರಿಗೆ ಯಾವುದೇ ಅಡೆತಡೆಯಿಲ್ಲ
ರೈತರಿಗೆ ಬೇಕಾದ ಬೀಜ, ಗೊಬ್ಬರ ಔಷಧಿ ಮಾರಾಟಕ್ಕೆಮುಕ್ತ ಅವಕಾಶ ಪೈಪ್ ಅಂಗಡಿಗಳನ್ನುತೆರಯಲು ಮಾರಾಟ ಮಾಡಲು ಯಾವುದೇ ಅಡೆತಡೆಯಿಲ್ಲ. ಮುಂಗಾರು ಬಿತ್ತನೆಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲಾಗಿದೆಎಲ್ಲಾ ದಿನಸಿ ತರಕಾರಿ ಅಂಗಡಿ ತೆರೆದಿವೆ. ರೈತರ ಜೀವ ಕುಟುಂಬದ ಹೊಣೆ ಅವರ ಮೇಲೆ ಇರುವುದರಿಂದ ರೈತರು ಮುಗಿಬೀಳದೇ ಆರೋಗ್ಯದ ಮೇಲೆ ಕಾಳಜಿ ಹೊಂದಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲೇಬೇಕು ಎಂದು ಸಚಿವರು ಸ್ಪಷ್ಟಪಡಿಸಿದರು.

ಸಾಗಾಣಿಕೆ ಮಾಡಬಹುದು
ರೈಲ್ವೆ ಗೂಡ್ಸ್ ಮೂಲಕ ಸಾಗಾಣಿಕೆ ಮಾಡಬಹುದು. ಹಣ್ಣುಗಳನ್ನು ತಿನ್ನುವುದರಿಂದ ಖಾಯಿಲೆ ಬರುವುದಿಲ್ಲ. ಕಲ್ಲಂಗಡಿ ಹಣ್ಣಾಗಲೀ ಅನಾನಸ್ ಆಗಲಿ ತಿಂದರೆ ಕೊರೊನಾ ಬರುವುದಿಲ್ಲ. ತಪ್ಪು ಮಾಹಿತಿ ಅಪಪ್ರಚಾರಕ್ಕೆ ಬೆಲೆ ಕೊಡಬಾರದು. ನಿಂಬೆಹಣ್ಣು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಿದೆ. ಕಲ್ಲಂಗಡಿ ಅನಾನಸ್ ನಿಂಬೆಹಣ್ದು ಉಪಯೋಗಿಸುವುದು ಆರೋಗ್ಯಕ್ಕೆ ಒಳ್ಳೆಯದು. ಹಾಗಾಗಿ ಜನರು ಹೆಚ್ಚೆಚ್ಚು ಹಣ್ಣು ಬಳಸಿ ಎಂದು ಮಾಹಿತಿ ನೀಡಿದರು.












Click it and Unblock the Notifications