• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಲಾಕ್‌ಡೌನ್: ರಾಜ್ಯದ ಕೃಷಿಕರ ಸಂಕಷ್ಟದ ಬಗ್ಗೆ ಶೀಘ್ರದಲ್ಲೇ ಸಿಎಂಗೆ ವರದಿ

|

ತುಮಕೂರು, ಏಪ್ರಿಲ್ 22: ಕೊರೊನಾ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಬಾಧಕವಾಗದಂತೆ ನಿಗಾವಹಿಸಲು ಕೃಷಿ ಚಟುವಟಿಕೆಗೆ ಪೂರಕವಾದ ಪರಿಕರಗಳು ಮತ್ತು ಬೋರ್‌ವೆಲ್, ಟ್ರ್ಯಾಕ್ಟರ್ ರಿಪೇರಿಗೆ ಅವಕಾಶ ಮಾಡಿ ಕೊಡಿ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತುಮಕೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಬೇಕಾದ ಬಿತ್ತನೆ ಬೀಜಗಳು, ಗೊಬ್ಬರ ಮತ್ತು ಇನ್ನಿತರ ಅವಶ್ಯಕ ಪರಿಕರಗಳ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ. ರೈತರು ನಿಶ್ಚಿಂತೆಯಿಂದ ಕೃಷಿ ಕಾಯಕ ಮುಂದುವರಿಸಲು ಮನವಿ ಮಾಡಿದರು.

ಇದುವರೆಗೂ ತಾವು ತುಮಕೂರು ಸೇರಿದಂತೆ 26 ಜಿಲ್ಲೆಗಳ ಕೃಷಿ ಪರಿಸ್ಥಿಗಳ ಬಗ್ಗೆ ಅಧ್ಯಯನ ಮಾಡಿದ್ದೇನೆ. ಸರಣಿ ಪರಿಶೀಲನಾ ಸಭೆಗಳನ್ನು ನಡೆಸಿದ್ದೇನೆ. 19 ಜಿಲ್ಲೆಗಳ ಕೃಷಿ ಸ್ಥಿತಿಗತಿ - ಪರಿಹಾರ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಅವರಿಗೆ ವರದಿ ಸಲ್ಲಿಸಿದ್ದೇನೆ. ಇನ್ನೂ 4 ಜಿಲ್ಲೆಗಳ ಪರಿಶೀಲನೆ ನಂತರ ಮತ್ತೊಮ್ಮೆ ಸಮಗ್ರ ವರದಿ ಸಲ್ಲಿಸುತ್ತೇನೆ ಎಂದು ವಿವರಿಸಿದರು.

ಎಪಿಎಂಸಿಗಳನ್ನು ಬಲಪಡಿಸಬೇಕಾಗಿದೆ

ಎಪಿಎಂಸಿಗಳನ್ನು ಬಲಪಡಿಸಬೇಕಾಗಿದೆ

ಹಣ್ಣು - ತರಕಾರಿಗಳನ್ನು ಹೆಚ್ಚಾಗಿ ಬೆಳೆಯುವ ಪ್ರದೇಶಗಳಲ್ಲಿ ಪ್ರತಿ ತಾಲ್ಲೂಕಿಗೆ ಒಂದರಂತೆ ಶೀತಲ ಶೇಖರಣ ಬೃಹತ್ ಘಟಕಗಳನ್ನು ನಿರ್ಮಾಣ ಮಾಡಬೇಕಾಗಿದೆ. ಎಪಿಎಂಸಿಗಳನ್ನು ಮತ್ತಷ್ಟು ಬಲಪಡಿಸಬೇಕಾಗಿದೆ ಎಂದು ಸಚಿವ ಬಿ.ಸಿ. ಪಾಟೀಲ್ ಅಭಿಪ್ರಾಯಪಟ್ಟರು.

ಪ್ಯಾಕೇಟುಗಳ ಮೂಲಕ ಮಾರಾಟ ಮಾಡುವುದು ಸೂಕ್ತ

ಪ್ಯಾಕೇಟುಗಳ ಮೂಲಕ ಮಾರಾಟ ಮಾಡುವುದು ಸೂಕ್ತ

ರಾಜ್ಯದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಗುಣಮಟ್ಟದ ಅನಾನಸ್ - ಕಲ್ಲಂಗಡಿ ಹಣ್ಣುಗಳನ್ನು ಬೆಳೆಯುತ್ತಾರೆ. ಸಮರ್ಪಕ ಪ್ರಮಾಣದಲ್ಲಿ ಮಾರಾಟವಾಗದ ಕಾರಣ ಅವುಗಳು ಕೊಳೆತು ಹೋಗುತ್ತಿವೆ. ಈ ಹಿನ್ನೆಲೆಯಲ್ಲಿ ಕೃಷಿಕರ ಪರಿಶ್ರಮ ವ್ಯರ್ಥವಾಗದಂತೆ ಮೌಲ್ಯವರ್ಧನಾ ಘಟಕಗಳ ಸ್ಥಾಪನೆಗೆ ಉದ್ದೇಶಿಸಲಾಗಿದೆ. ಇದರಿಂದ ಹಣ್ಣುಗಳ ಜ್ಯೂಸ್ ಮಾಡಿ ಹೆಚ್ಚು ಅವಧಿ ಬಾಳಿಕೆ ಬರುವ ಪ್ಯಾಕೇಟುಗಳ ಮೂಲಕ ಮಾರಾಟ ಮಾಡುವುದು ಸೂಕ್ತ ಎಂದರು ಸಚಿವ ಬಿ.ಸಿ. ಪಾಟೀಲ್.

ಶಿಸ್ತುಕ್ರಮ ಕೈಗೊಳ್ಳಲಾಗುವುದು

ಶಿಸ್ತುಕ್ರಮ ಕೈಗೊಳ್ಳಲಾಗುವುದು

ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆಬೀಜ, ಗೊಬ್ಬರಗಳು, ಕೀಟನಾಶಕಗಳು ಇನ್ನಿತರ ಪರಿಕರಗಳನ್ನು ಪೂರೈಸಲು ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಎಲ್ಲಿಯಾದರೂ ಇವುಗಳ ಕಳಪೆ ಮಾರಾಟ ಕಂಡು ಬಂದು ರೈತರಿಗೆ ತೊಂದರೆಯಾದರೆ ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು, ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಅವರ ಮೇಲೆ ಕಠಿಣ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು.

ಕಟ್ಟೆಚ್ಚರದ ಸ್ಥಿತಿಯಲ್ಲಿಡಲಾಗಿದೆ

ಕಟ್ಟೆಚ್ಚರದ ಸ್ಥಿತಿಯಲ್ಲಿಡಲಾಗಿದೆ

ಕೃಷಿ ಇಲಾಖೆಯ ಜಾಗೃತ ದಳವನ್ನು ಕಟ್ಟೆಚ್ಚರದ ಸ್ಥಿತಿಯಲ್ಲಿಡಲಾಗಿದೆ. ಈಗಾಗಲೇ ರಾಜ್ಯದ ವಿವಿಧೆಡೆ ಸರಣಿ ದಾಳಿಗಳನ್ನು ನಡೆಸಿ ಕಳಪೆ ಬಿತ್ತನೆಬೀಜ, ಇನ್ನಿತರ ಪರಿಕರಗಳನ್ನು ಜಪ್ತಿ ಮಾಡಲಾಗಿದೆ. ಸಂಬಂಧಿಸಿದ ಅಂಗಡಿಗಳ ಲೈಸನ್ಸ್ ಗಳನ್ನು ಅಮಾನತ್ತಿನಲ್ಲಿಡಲಾಗಿದೆ. ಮಾಲೀಕರ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿದೆ ಎಂದು ವಿವರಿಸಿದರು. ಸಭೆ ಬಳಿಕ ನೇರ ಸಿದ್ದಗಂಗಾ ಮಠಕ್ಕೆ ತೆರಳಿದ ಸಚಿವ ಬಿ.ಸಿ. ಪಾಟೀಲ್, ಸಿದ್ದಗಂಗಾ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

English summary
Agriculture Problems Report Shortly Submitting To CM: Agriculture Minister BC Patil. He finished 18 District Toor about agriculture and farmers problems.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more