ಯುವಕರಿಗೆ ಕೃಷಿ ಉದ್ಯಮ ಉಚಿತ ತರಬೇತಿ; ಅರ್ಜಿ ಹಾಕಿ

ಬೆಂಗಳೂರು, ಸೆಪ್ಟೆಂಬರ್ 01: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಮಣಿಪಾಲ ನಿರುದ್ಯೋಗಿ ಸ್ವ -ಉದ್ಯೋಗಾಕಾಂಕ್ಷಿಗಳಿಗಾಗಿ ತರಬೇತಿಯನ್ನು ನೀಡಲಿದೆ. ಒಟ್ಟು 30 ದಿನಗಳ ತರಬೇತಿಯನ್ನು ಯುವಕ/ಯುವತಿಯರಿಗೆ ನೀಡಲಾಗುತ್ತದೆ.

14 ಸಪ್ಟೆಂಬರ್ 2020 ರಿಂದ 30 ದಿನಗಳ ತರಬೇತಿಯನ್ನು 'ಮಹಿಳೆಯರ ಟೈಲರಿಂಗ್'ನಲ್ಲಿ ನೀಡಲಾಗುತ್ತದೆ. 21 ಸಪ್ಟೆಂಬರ್‌ನಿಂದ 13 ದಿನಗಳ 'ಕೃಷಿ ಉದ್ಯಮಿ' (ಹೈನುಗಾರಿಕೆ, ಎರೆಹುಳು ಗೊಬ್ಬರ ತಯಾರಿ ಹಾಗೂ ಕೋಳಿ ಸಾಕಾಣಿಕೆ) ಉಚಿತ ತರಬೇತಿಯನ್ನು ಮಣಿಪಾಲದಲ್ಲಿ ಆಯೋಜನೆ ಮಾಡಲಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿ ನೆಲೆಸಿರುವ 18 ರಿಂದ 45 ವಯೋಮಿತಿಯ ನಿರುದ್ಯೋಗಿ ಯುವಕ/ಯುವತಿಯರು ಈ ತರಬೇತಿಯನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Animal Husbandry And Chicken Farm Training For Youths

ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ಪೂರ್ಣವಿಳಾಸ, ಪಿನ್ ಕೋಡ್, ಸಂಪರ್ಕಕ್ಕೆ ಲಭ್ಯವಿರುವ ದೂರವಾಣಿ ಸಂಖ್ಯೆ, ವಯಸ್ಸು, ವಿದ್ಯಾರ್ಹತೆ, ಪಡೆಯಲಿಚ್ಚಿಸಿರುವ ತರಬೇತಿಯ ಹೆಸರು, ಮುಂತಾದ ಮಾಹಿತಿಯನ್ನು ಖಾಲಿ ಹಾಳೆಯಲ್ಲಿ ಬರೆದು ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ವಿಳಾಸ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕೆನರಾ ಬ್ಯಾಂಕ್ ಪ್ರ್ರಧಾನ ಕಛೇರಿ (ಅನೆಕ್ಸ್) ಸಂಕೀರ್ಣ, ಮಣಿಪಾಲ - 576104. ಕೊನೆಯ ದಿನಾಂಕ 10/9/2020.

ತರಬೇತಿ ಅವಧಿಯಲ್ಲಿ ಊಟ, ವಸತಿ ಸಂಪೂರ್ಣವಾಗಿ ಉಚಿತವಾಗಿದೆ. ಸಂಬಂಧಿಸಿದ ಕ್ಷೇತ್ರದ ಬಗ್ಗೆ ವಿಸ್ತಾರವಾಗಿ ತಿಳಿಸುವುದರ ಜೊತೆಗೆ ಉದ್ಯಮಶೀಲತೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ಮಾಹಿತಿ ನೀಡಲಾಗುತ್ತದೆ.

ಒಬ್ಬ ಅಭ್ಯರ್ಥಿಗೆ ಒಂದು ತರಬೇತಿಯನ್ನು ಪಡೆಯಲು ಮಾತ್ರ ಅವಕಾಶವಿದ್ದು ಮೊದಲು ಬಂದ ಅರ್ಜಿಗೆ ಪ್ರಾಶಸ್ತ್ಯ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0820-2570455.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+