ಮೂಡಿಗೆರೆಯಲ್ಲಿ ತೋಟಗಾರಿಕೆ : ಯಾರಿಗೆ ಇಷ್ಟವಿದೆ?
ಮಂಗಳೂರು, ಮಾರ್ಚ್ 8 : ಬರುವ ಮೇ 2ರಿಂದ 28ರವರೆಗೆ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ ಮೂಡಿಗೆರೆಯ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದೆ. ಇದಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರು ಎಸ್. ಎಸ್. ಎಲ್. ಸಿ ಉತ್ತೀರ್ಣರಾಗಿರಬೇಕು. ಹಾಗೂ ಪೋಷಕರ ಹೆಸರಲ್ಲಿ ಕಡ್ಡಾಯವಾಗಿ ಜಮೀನು ಹೊಂದಿದ್ದು, ಸ್ವಂತ ಸಾಗುವಳಿ ಮಾಡುತ್ತಿರಬೇಕು.
ವಯೋಮಿತಿ ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರಿಗೆ ಕನಿಷ್ಟ 18 ವರ್ಷ, ಗರಿಷ್ಟ 33 ವರ್ಷ.

ಅರ್ಜಿ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 30. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ. 15 ಅನ್ನು ನಿಗದಿಪಡಿಸಲಾಗಿದೆ. ಏಪ್ರಿಲ್ 12ರಿಂದ 24ರವರೆಗೆ ಅರ್ಜಿ ವಿತರಿಸಲಾಗುವುದು. ಅರ್ಜಿ ಸ್ವೀಕರಿಸಲು ಕೊನೆಯ ದಿನ ಎಪ್ರಿಲ್ 24. ಎಪ್ರಿಲ್ 26 ಕ್ಕೆ ಸಂದರ್ಶನ ನಡೆಯಲಿದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು ತೋಟಗಾರಿಕೆ ತಾಲೂಕು ಕಛೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಹಾಗೂ ಅರ್ಜಿ ಶುಲ್ಕದ ಬಾಬ್ತನ್ನು ಇಂಡಿಯನ್ ಪೋಸ್ಟಲ್ ಆರ್ಡರ್ / ಡಿಮ್ಯಾಂಡ್ ಡ್ರಾಪ್ಟ್(ಡಿಡಿ)ನ್ನು ಆಯಾಯ ಜಿಲ್ಲೆಗಳ ತೋಟಗಾರಿಕೆ ಉಪ ನಿರ್ದೇಶಕರು (ಜಿ.ಪಂ) ರವರ ಹೆಸರಿನಲ್ಲಿ ಪಡೆದು, ಅರ್ಜಿಯನ್ನು ತೋಟಗಾರಿಕೆ ಉಪನಿರ್ದೇಶಕರ ಕಛೇರಿಯಲ್ಲಿ ಸಲ್ಲಿಸಬೇಕು.

ತರಬೇತಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 1,000 ಗಳ ಮಾಸಿಕ ಶಿಷ್ಯವೇತನ ನೀಡಲಾಗುವುದು. ಮಾಹಿತಿಗಳಿಗೆ ತೋಟಗಾರಿಕೆ ಉಪನಿರ್ದೇಶಕರ ಕಛೇರಿಯನ್ನು ದೂರವಾಣಿ ಸಂಖ್ಯೆ: 0824-2412628 / 0824-2444298 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು.












Click it and Unblock the Notifications