ಧಾರವಾಡ: ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ನೋಂದಣಿಗೆ ರೈತರಿಂದ ಅರ್ಜಿ ಆಹ್ವಾನ
ಧಾರವಾಡ, ಅಕ್ಟೋಬರ್ 19: ಕರ್ನಾಟಕ ಸರ್ಕಾರದಿಂದ 2024-25ರ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆಯನ್ನು ಧಾರವಾಡ ಜಿಲ್ಲೆಯ ಎಂಟು ತಾಲೂಕಿನ 14 ಹೋಬಳಿಗಳಲ್ಲಿ ಅನುಷ್ಠಾನಗೊಳಿಸಲು ಮಂಜೂರಾತಿ ನೀಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಧಾರವಾಡ ಕೃಷಿ ಇಲಾಖೆ, ಧಾರವಾಡ ಜಿಲ್ಲೆಯಲ್ಲಿ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರುವ ಹೋಬಳಿ ಮಟ್ಟದ 11 ಬೆಳೆಗಳಾದ ಹುರುಳಿ, ಕುಸುಮೆ, ಹೆಸರು ಬೆಳೆಗಳು ಮಳೆ ಆಶ್ರಿತ ಬೆಳೆಗಳಾಗಿವೆ. ಜೋಳ ಮತ್ತು ಮುಸಿಕಿನ ಜೋಳ ಬೆಳೆಗಳು ನೀರಾವರಿ ಆಶ್ರಿತ ಬೆಳೆಗಳಾಗಿವೆ. ಗೋಧಿ, ಸೂರ್ಯಕಾಂತಿ ಹಾಗೂ ಕಡಲೆ ಬೆಳೆಗಳು ನೀರಾವರಿ ಮತ್ತು ಮಳೆ ಆಶ್ರಿತ ಬೆಳೆಗಳಾಗಿವೆ.

ಗ್ರಾಮ ಪಂಚಾಯತಿ ಮಟ್ಟದ ಬೆಳೆಗಳಾದ ಧಾರವಾಡ, ಹುಬ್ಬಳ್ಳಿ, ಹುಬ್ಬಳ್ಳಿ ನಗರ, ಕುಂದೋಳ, ನವಲಗುಂದ, ಅಣ್ಣಿಗೇರಿ ತಾಲೂಕಿನಲ್ಲಿ ಜೋಳ ಮತ್ತು ಕಡಲೆ ಮಳೆ ಆಶ್ರಿತ ಬೆಳೆಗಳಾಗಿವೆ. ಕಲಘಟಗಿ ತಾಲೂಕಿನಲ್ಲಿ ಜೋಳ ಮಳೆ ಆಶ್ರಿತ ಬೆಳೆಯಾಗಿದೆ.
ಜೋಳ ಮತ್ತು ಕಡಲೆ ಬೆಳೆಗಳಿಗೆ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಲು ನವೆಂಬರ್ 30 ಕೊನೆಯ ದಿನವಾಗಿದೆ. ಹುರಳಿ, ಕುಸುಬಿ ಮಳೆ ಆಶ್ರಿತ ಬೆಳೆ ಹಾಗೂ ಸೂರ್ಯಕಾಂತಿ ನೀರಾವರಿ ಮತ್ತು ಮಳೆ ಆಶ್ರಿತ ಬೆಳೆಗೆ ನವೆಂಬರ್ 15 ರೊಳಗಾಗಿ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬೇಕು.

ಕಡಲೆ, ಹೆಸರು, ಗೋಧಿ ಮಳೆ ಆಶ್ರಿತ ಬೆಳೆ ಹಾಗೂ ಜೋಳ ಮತ್ತು ಮುಸಿಕಿನ ಜೋಳ ಬೆಳೆಗಳಿಗೆ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಲು ನವೆಂಬರ್ 30 ಕೊನೆಯ ದಿನವಾಗಿದೆ. ನೀರಾವರಿ ಆಶ್ರಿತ ಗೋಧಿ ಬೆಳೆಗೆ ಡಿಸೆಂಬರ್ 16ರೊಳಗಾಗಿ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಬೇಕು. ನೀರಾವರಿ ಆಶ್ರಿತ ಕಡಲೆ ಬೆಳೆಗೆ ಡಿಸೆಂಬರ್ 31 ರೊಳಗಾಗಿ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಬೇಕು.
ಬೇಸಿಗೆ ಹಂಗಾಮಿಗೆ ಹೋಬಳಿ ಮಟ್ಟದ ಬೆಳೆಗಳಾದ ಕಲಘಟಗಿ ತಾಲೂಕಿನ ದುಮ್ಮವಾಡ, ಹುಬ್ಬಳ್ಳಿ ತಾಲೂಕಿನ ಛಬ್ಬಿ ಮತ್ತು ಕುಂದಗೋಳ ತಾಲೂಕಿನ ಸಂಶಿ ನೆಲಗಡಲೆ (ಶೇಂಗಾ) ಬೆಳೆಗೆ ಫೆಬ್ರವರಿ 28ರೊಳಗಾಗಿ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಬೇಕು ಎಂದು ಧಾರವಾಡ ಕೃಷಿ ಇಲಾಖೆ ತಿಳಿಸಿದೆ.
ವಿಮೆ ಮಾಹಿತಿಗಾಗಿ ಅನುಷ್ಠಾನ ವಿಮಾ ಕಂಪನಿಯ ಪ್ರತಿನಿಧಿಗಳ ತಾಲೂಕು ಪ್ರತಿನಿಧಿಗಳ ವಿವರ ಇಲ್ಲಿದೆ
2024-25ನೇ ಸಾಲಿನ ಬೆಳೆ ವಿಮೆ ಯೋಜನೆಗೆ ಸಂಬಂಧಿಸಿದ ಮಾಹಿತಿಗಾಗಿ ಧಾರವಾಡ ತಾಲೂಕಿಗೆ ಸ್ಮಿತಾ ಸಿ. ಡಿ. (7019969942), ಚಂದನಾ ಬಿ. ಆರ್ (9481538869) ಹಾಗೂ ಧಾರವಾಡ ಮತ್ತು ಅಳ್ನಾವರ ತಾಲೂಕಿಗೆ ಜಯಂತ ಎಚ್. ಎನ್. (8088608975), ಅಣ್ಣಿಗೇರಿ ತಾಲೂಕಿಗೆ ರಾಜಾಭಕ್ಷಿ ದೊಡ್ಡಮನಿ (6362123480), ಹುಬ್ಬಳ್ಳಿ ನಗರ ಮತ್ತು ಹುಬ್ಬಳ್ಳಿ ತಾಲೂಕಿಗೆ ಬಿರೇಶ ವಡ್ಡರ (7975191577), ಕಲಘಟಗಿ ತಾಲೂಕಿಗೆ ರಾಹುಲ ಪಾಟೀಲ (7619317156), ಕುಂದಗೋಳ ತಾಲೂಕಿಗೆ ರಮೇಶ ಹಾವೇರಿ (7259182711) ಹಾಗೂ ನವಲಗುಂದ ತಾಲೂಕಿಗೆ ಅಭಿಷೇಕ ಕ್ಯಾಡದ (6361364459) ಅವರನ್ನು ಸಂಪರ್ಕಿಸಬಹುದು ಎಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಅಗ್ರಿಕಲ್ಚರಲ್ ಇನ್ಸೂರೆನ್ಸ್ ಕಂಪನಿ, ಸ್ಥಳಿಯ ಕೃಷಿ ಇಲಾಖೆ, ಕಂದಾಯ, ಗ್ರಾಮೀಣ ಅಭಿವೃದ್ಧಿ, ತೋಟಗಾರಿಕೆ ಇಲಾಖೆ ಸಿಬ್ಬಂದಿ ಮತ್ತು ಸ್ಥಳಿಯ ಹಣಕಾಸು ಸಂಸ್ಥೆಗಳಾದ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್, ಸೇವಾ ಬ್ಯಾಂಕುಗಳ ಸಿಬ್ಬಂದಿಯವರನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications