ರೈತರ ಮಕ್ಕಳಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ; ಏನಿದರ ಲಾಭ?

ಹಾವೇರಿ, ಜನವರಿ 07: ರಾಜ್ಯ ಸರ್ಕಾರವು ರೈತರು ಹಾಗೂ ರೈತರ ಮಕ್ಕಳಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಅನ್ನದಾತರ ಶೈಕ್ಷಣಿಕ ಬೆಳವಣಿಗೆಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ರೈತರ ಮಕ್ಕಳಿಗೆ ಶಿಷ್ಯವೇತನ ನೀಡುವುದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಹಾವೇರಿ ಜಿಲ್ಲೆಯಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿಯಲ್ಲಿ ರೈತರ ಮಕ್ಕಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು https://ssp.postmatric.karnataka.gov.in/ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ತಮ್ಮ ತಂದೆ ಅಥವಾ ತಾಯಿಯ ರೈತರ ಗುರುತಿನ ಸಂಖ್ಯೆ (FID)ಯನ್ನು ಹೊಂದಿರಬೇಕು. (FID) ನೋಂದಣಿ ಮಾಡಲು ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬೇಕು. ಪುನರಾವರ್ತಿತ (Repeators) ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆಯಲು ಅರ್ಹರಾಗಿ ಇರುವುದಿಲ್ಲ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯಾವ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಎಷ್ಟು ಶಿಷ್ಯವೇತನವನ್ನು ನೀಡಲಾಗುತ್ತದೆ ಎಂಬುದರ ಕುರಿತು ಮಾಹಿತಿಯನ್ನು ಈ ವರದಿಯಲ್ಲಿ ನೀಡಲಾಗಿದೆ.

Applications Invited For Chief Minister Raitha Vidya Nidhi Scholarship 2022
ತರಗತಿ ವಿದ್ಯಾರ್ಥಿ ವಿದ್ಯಾರ್ಥಿನಿ
8 ರಿಂದ 10 2,000 2,000
ಪಿಯುಸಿ, ಐಟಿಐ, ಡಿಪ್ಲೋಮಾ 2,500 3,000
ಬಿಎ, ಬಿಎಸ್ಸಿ, ಬಿಕಾಂ, ಇನ್ನಿತರ ಪದವಿ ಕೋರ್ಸ್ 5,000 5,500
LLB, ಪ್ಯಾರಾಮೆಡಿಕಲ್, ಬಿ.ಫಾರ್ಮ್, ನರ್ಸಿಂಗ್ ಇತ್ಯಾದಿ ವೃತ್ತಿಪರ ಕೋರ್ಸ್ 7,500 8,000
ಎಂಬಿಬಿಎಸ್, ಬಿ.ಇ, ಬಿ.ಟೆಕ್ ಹಾಗೂ ಎಲ್ಲ ಸ್ನಾತಕೋತ್ತರ 10,000 11,000

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+