ಕೊಪ್ಪಳ : ತೋಟಗಾರಿಕಾ ತರಬೇತಿಗೆ ಅರ್ಜಿ ಆಹ್ವಾನ
ಕೊಪ್ಪಳ, ಜೂ. 09 : ತೋಟಗಾರಿಕೆ ಇಲಾಖೆ ವತಿಯಿಂದ 2015ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಕೊಪ್ಪಳ ಜಿಲ್ಲೆಯ ರೈತರ ಮಕ್ಕಳಿಗೆ 1 ತಿಂಗಳ ಕಾಲ ತೋಟಗಾರಿಕೆಯಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಶಿಬಿರವನ್ನು ಜುಲೈ 2ರಂದು ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.
ತರಬೇತಿ ಶಿಬಿರದಲ್ಲಿ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಕೊಪ್ಪಳ ತೋಟಗಾರಿಕೆ ಉಪನಿರ್ದೇಶಕರ ಕಛೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜೂ.15 ರೊಳಗೆ ಸಲ್ಲಿಸಬೇಕು. [ಬ್ಯಾಂಕಿಂಗ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ]

ತರಬೇತಿ ಶಿಬಿರದಲ್ಲಿ ಭಾಗವಹಿಸುವವರು ಎಸ್.ಎಸ್.ಎಲ್.ಸಿ ಕನ್ನಡ ಮಾಧ್ಯಮದಲ್ಲಿ ಉತ್ತೀರ್ಣರಾಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳು 18 ರಿಂದ 33 ವರ್ಷ ಹಾಗೂ ಪ.ಜಾತಿ, ಪಂಗಡದ ಅಭ್ಯರ್ಥಿಗಳು 18 ರಿಂದ 35 ವರ್ಷದೊಳಗಿನ ವಯೋಮಿತಿ ಹೊಂದಿರಬೇಕು. [1,129 ಹುದ್ದೆಗೆ ಅರ್ಜಿ ಆಹ್ವಾನಿಸಿದ ಯುಪಿಎಸ್ ಸಿ]
ಅಭ್ಯರ್ಥಿಗಳು ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ ಮೂಲ ಅಂಕಪಟ್ಟಿ, ಜಮೀನು ಹೊಂದಿರುವ ಬಗ್ಗೆ ಪಹಣಿ ಮತ್ತು ಗ್ರಾಮ ಲೆಕ್ಕಾಧಿಕಾರಿಗಳಿಂದ ವಂಶವೃಕ್ಷ ಧೃಢೀಕರಣ ದಾಖಲಾತಿಗಳೊಂದಿಗೆ ಜೂ.16 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳದ ತೋಟಗಾರಿಕೆ ಉಪನಿರ್ದೇಶಕರ ಕಛೇರಿಯಲ್ಲಿ ನಡೆಯುವ ಸಂದರ್ಶದಲ್ಲಿ ಭಾಗವಹಿಸಬೇಕು.












Click it and Unblock the Notifications