ತೋಟಗಾರಿಕಾ ತರಬೇತಿಗೆ ಅರ್ಜಿ ಆಹ್ವಾನ

ಧಾರವಾಡ, ಏ. 26 : ಧಾರವಾಡದ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿ (ರಾಜ್ಯ ವಲಯ)2009-10ನೇ ಸಾಲಿಗೆ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಯ ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ ಅಭ್ಯರ್ಥಿಗಳಿಂದ ಮೇ 2009ರಿಂದ ಫೆಬ್ರವರಿ 2010ರ ವರೆಗೆ 10 ತಿಂಗಳ ಅವಧಿಯ ತೋಟಗಾರಿಕಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿ ಜಿಲ್ಲೆಗೆ 10ರಂತೆ ಗುರಿ ನಿಗದಿಪಡಿಸಲಾಗಿದ್ದು, ಧಾರವಾಡ ಜಿಲ್ಲೆಯ ಸಾಮಾನ್ಯ ವರ್ಗದ 7 ಅಭ್ಯರ್ಥಿಗಳಿಗೆ, ಪರಿಶಿಷ್ಟ ಜಾತಿ/ಪಂಗಡದ 03 ಅಭ್ಯರ್ಥಿಗಳಿಗೆ, ಗದಗ ಜಿಲ್ಲೆಯ ಸಾಮಾನ್ಯ ವರ್ಗದ 07 ಅಭ್ಯರ್ಥಿಗಳಿಗೆ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ 03 ಅಭ್ಯರ್ಥಿಗಳಿಗೆ ಹಾಗೂ ಹಾವೇರಿ ಜಿಲ್ಲೆಯ ಸಾಮಾನ್ಯ ವರ್ಗದ 08 ಅಭ್ಯರ್ಥಿಗಳಿಗೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ 02 ಅಭ್ಯರ್ಥಿಗಳಿಗೆ ತರಬೇತಿಗೆ ಆಯ್ಕೆ ಮಾಡಲಾಗುವುದು.

ತರಬೇತಿ ಪಡೆಯಲಿಚ್ಛಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷ ವಯೋಮಿತಿ ಹೊಂದಿದ್ದು, ಅಭ್ಯರ್ಥಿಯು ಕೃಷಿ ಭೂಮಿ ಹೊಂದಿದ್ದು, ಸಾಗುವಳಿ ಮಾಡುತ್ತಿರುವ ಬಗ್ಗೆ ಪಹಣಿ ದೃಢೀಕರಣ ಹೊಂದಿರಬೇಕು.

ಅಭ್ಯರ್ಥಿಗಳು ಅರ್ಜಿಗಳನ್ನು ಆಯಾ ಜಿಲ್ಲೆಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿಯಿಂದ ನಿಗಧಿತ ಶುಲ್ಕ ಪಾವತಿಸಿ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಏಪ್ರಿಲ್ 29 ರೊಳಗಾಗಿ ಸಲ್ಲಿಸಬೇಕು. ಮೇ 5 ರಂದು ಬೆಳಿಗ್ಗೆ 11 ಗಂಟೆಗೆ ಆಯಾ ಜಿಲ್ಲೆಗಳ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಧಾರವಾಡದ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು (ರಾಜ್ಯ ವಲಯ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+