ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೇನು ಕೃಷಿ ಸಹಾಯಧನಕ್ಕೆ ರೈತರಿಂದ ಅರ್ಜಿ ಆಹ್ವಾನ

|
Google Oneindia Kannada News

ಬೆಂಗಳೂರು, ಜುಲೈ 19 : ಜೇನು ಸಾಕಾಣಿಕೆಗೆ ಪ್ರೋತ್ಸಾಹ ನೀಡಲು ತೋಟಗಾರಿಕೆ ಇಲಾಖೆಯು ಸಹಾಯಧವನ್ನು ನೀಡಲಿದೆ. ಜೇನು ಸಾಕಣೆಯಲ್ಲಿ ತೊಡಗಿರುವ ರೈತರು ಸಹಾಯಧನಗಳನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಬಹುದು.

Recommended Video

ಕೊರೊನ ವಿರುದ್ಧದ ಯುದ್ಧದಲ್ಲಿ ಗೆದ್ದ Sharath Bacche Gowda | Oneindia Kannada

ಜೇನು ಸಾಕಣೆಯಲ್ಲಿ ರೈತರು ಹೆಚ್ಚು ಲಾಭ ಗಳಿಸಲು ಸಹಕಾರಿಯಾಗುವಂತೆ ಮಧುವನ ಮತ್ತು ಜೇನು ಸಾಕಾಣಿಗೆ ಅಭಿವೃದ್ಧಿ ಯೋಜನೆಯಡಿ ಎಲ್ಲ ವರ್ಗದ ರೈತರಿಗೆ ಜೇನು ಸಾಕಾಣಿಕೆಗೆ ಶೇ. 75 ರಂತೆ ರೂ. 3375 ಗಳ ಸಹಾಯಧನ ಸಿಗಲಿದೆ. ಚಾಮರಾಜನಗರದ ತೋಟಗಾರಿಕಾ ಇಲಾಖೆ ರೈತರಿಂದ ಅರ್ಜಿಯನ್ನು ಕರೆದಿದೆ.

ಜೇನು ಕೃಷಿ; ಕಡಿಮೆ ಬಂಡವಾಳ, ಅಧಿಕ ಲಾಭಜೇನು ಕೃಷಿ; ಕಡಿಮೆ ಬಂಡವಾಳ, ಅಧಿಕ ಲಾಭ

ಎಲ್ಲಾ ಪ್ರದೇಶಗಳ ರೈತರು ಉಪಕಸುಬಾಗಿ ಅಥವಾ ಮುಖ್ಯ ಕಸುಬಗಿ ಜೇನು ಕೃಷಿಯನ್ನು ಕೈಗೊಳ್ಳುತ್ತಾರೆ. ಕಡಿಮೆ ಬಂಡವಾಳದಿಂದ ನಿರ್ವಹಿಸಬಹುದಾದ ಲಾಭದಾಯಕವಾದ ಉದ್ದಿಮೆ ಇದಾಗಿದೆ. ಕೃಷಿ, ತೋಟಗಾರಿಕೆ, ಪಶುಪಾಲನೆ ಮುಂತಾದ ಯಾವುದೇ ಸಮ್ಮಿಶ್ರ ಕೃಷಿ ಪದ್ಧತಿಗಳ ಸಂಪನ್ಮೂಲಗಳಿಗೆ ಸ್ಪರ್ಧೆಯೊಡ್ಡದೆ ನಿಸರ್ಗದಲ್ಲಿ ವ್ಯರ್ಥವಾಗುವ ಉಪಸಂಪನ್ಮೂಲಗಳಾದ ಪರಾಗ ಮತ್ತು ಮಕರಂದವನ್ನು ಬಳಸಿಕೊಂಡು ಇದನ್ನು ಮಾಡಬಹುದು.

ಕರ್ನಾಟಕದ ಕಥೆ: ಲಾಕ್ ಡೌನ್ ವೇಳೆ ಪ್ರತಿನಿತ್ಯ ಒಬ್ಬ ರೈತ ಆತ್ಮಹತ್ಯೆ! ಕರ್ನಾಟಕದ ಕಥೆ: ಲಾಕ್ ಡೌನ್ ವೇಳೆ ಪ್ರತಿನಿತ್ಯ ಒಬ್ಬ ರೈತ ಆತ್ಮಹತ್ಯೆ!

Applications Invited From Farmers For Bee Keeping Subsidy

ಜೇನು ನೊಣಗಳು ಪರಾಗ ಸ್ಪರ್ಶದ ಮೂಲಕ ಹಲವಾರು ತೋಟಗಾರಿಕೆ ಬೆಳೆಗಳಲ್ಲಿ ಉತ್ಪಾದನೆಯ ಹೆಚ್ಚಳಕ್ಕೆ ಕಾರಣವಾಗಿ ಪರೋಕ್ಷವಾಗಿ ರೈತರ ಆದಾಯ ಹೆಚ್ಚಿಸಲಿವೆ. ಜೇನು ನೊಣಗಳ ಉಪಸ್ಥಿತಿಯಿಂದಾಗಿ ವಿವಿಧ ಇಳುವರಿಯು ಶೇಕಡಾವಾರು 20 ರಿಂದ 80ರವರೆಗೆ ಹೆಚ್ಚಾಗಲಿದೆ.

 ಕೋಲಾರದ ಈ ಸ್ವಾವಲಂಬಿ ಕೃಷಿಕನಿಗೆ ಬಲ ಕೊಟ್ಟ ಜೇನು ಸಾಕಣೆ ಕೋಲಾರದ ಈ ಸ್ವಾವಲಂಬಿ ಕೃಷಿಕನಿಗೆ ಬಲ ಕೊಟ್ಟ ಜೇನು ಸಾಕಣೆ

ಜೇನು ಸಾಕಣೆಯಿಂದಾಗಿ ತೋಟಗಾರಿಕೆ ಬೆಳೆಗಳಾದ ಸೌತೆ, ಕುಂಬಳ, ದ್ರಾಕ್ಷಿ, ಸೀಬೆ, ಟೊಮ್ಯಾಟೊ, ಕಲ್ಲಂಗಡಿ, ತೆಂಗು, ಮಾವು, ಅಡಿಕೆ ಬೆಳೆಯಲ್ಲಿ ಅಧಿಕ ಇಳುವರಿ ಪಡೆಯಬಹುದು. ತೋಟಗಾರಿಕೆ ಬೆಳೆಗಳಾದ ಏಲಕ್ಕಿ, ನಿಂಬೆ ಹಾಗೂ ತರಕಾರಿ ಬೆಳೆಗಳಾದ ಸೀಮೆಬದನೆ, ಹಾಗಲಕಾಯಿ, ಹೂವಿನ ಬೆಳೆಗಳು, ಔಷಧಿ ಹಾಗೂ ಸುಗಂಧ ದ್ರವ್ಯದ ಬೆಳೆಗಳು ಜೇನು ಸಾಕಣೆ ಪರಾಗ ಸ್ಪರ್ಶದಿಂದ ಪ್ರಯೋಜನ ಪಡೆಯುತ್ತವೆ.

ಜೇನು ಕೃಷಿ ಆರಂಭಿಸುವುದರಿಂದ ರೈತರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೆಚ್ಚು ಲಾಭ ಗಳಿಸಬಹುದು. ಉತ್ತಮ ಗುಣಮಟ್ಟದ ಹಾಗೂ ರೋಗರಹಿತ ಜೇನು ಕುಟುಂಬಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಉತ್ಪಾದನೆ ಹಾಗೂ ವಿತರಿಸುವ ಉದ್ದೇಶದಿಂದ ಖಾಸಗಿ ಮಧುವನಗಳ ಸ್ಥಾಪನೆಗೂ ಹೆಚ್ಚಿನ ಮಹತ್ವ ನೀಡಲಾಗಿದೆ.

ಸಹಾಯಧನ ಪಡೆಯಲು ಆಸಕ್ತಿ ಇರುವ ರೈತರು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲಾತಿಗಳಾದ ಭಾವಚಿತ್ರ, ಪ್ರಸಕ್ತ ಸಾಲಿನ ಪಹಣಿ, ಚೆಕ್ ಬಂದಿ, ಸ್ವಯಂ ಬೆಳೆ ದೃಢೀಕರಣ, ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಇತ್ಯಾದಿಗಳೊಂದಿಗೆ ಜುಲೈ 31ರೊಳಗೆ ಆಯಾ ತಾಲೂಕಿನ ತೋಟಗಾರಿಕೆ ಇಲಾಖೆಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು.

English summary
Applications invited from the farmers for bee keeping subsidy. Farmers will get 75 per cent of subsidy for support bee keeping.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X