ತೋಟಗಾರಿಕೆ ಇಲಾಖೆಯಿಂದ ಈ ಬೆಳಗಳಿಗೆ ಸಹಾಯಧನ, ಅರ್ಜಿ ಹಾಕಿ
ಬೆಂಗಳೂರು, ಜುಲೈ 19; ತೋಟಗಾರಿಕೆ ಇಲಾಖೆಯು 2023-24ನೇ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯವನ್ನು ನೀಡುತ್ತಿದೆ. ಆಸಕ್ತ ರೈತರು ಅರ್ಜಿಗಳನ್ನು ಸಲ್ಲಿಕೆ ಮಾಡಿ ಈ ಸೌಲಭ್ಯಗಳನ್ನು ಪಡೆಯಬಹುದಾಗಿದೆ.
ರೈತರಿಗೆ ಕಾಳಮೆಣಸು, ಗೇರು, ಜಾಯಿಕಾಯಿ, ಅನಾನಸ್, ಅಂಗಾಂಶ ಬಾಳೆ, ರಾಗದ ಕಂದು ಬಾಳೆ, ಅಪ್ರಧಾನ ಹಣ್ಣುಗಳಾದ ರಾಂಟಾನ್ ಮಾಂಗೋಸಿನ್ ಮತ್ತು ಡ್ರಾಗನ್ ಫ್ರೂಟ್ ಹೊಸ ತೋಟಗಳ ಸ್ಥಾಪನೆಗೆ ಶೇ 40ರ ಸಹಾಯಧನ, ಸಣ್ಣ ಸಸ್ಯಾಗಾರಗಳ ನರ್ಸರಿ ಸ್ಥಾಪನೆಗೆ ಶೇ 50ರ ಸಹಾಯಧನ, ಅಂಗಾಂಶ ಕೃಷಿ ಘಟಕ ಸ್ಥಾಪನೆಗೆ ಶೇ 40ರಂತೆ ಸಹಾಯಧನ, ನೀರು ಸಂಗ್ರಹಣ ಘಟಕ (20*20*3 ಮೀ. ಅಳತೆ) ನಿರ್ಮಾಣಕ್ಕೆ ಗರಿಷ್ಠ 0.75 ಲಕ್ಷ ರೂ.ಗಳ ಸಹಾಯಧನ ಲಭ್ಯವಿದೆ.

ಎಷ್ಟು ಸಹಾಯಧನ ಸಿಗಲಿದೆ?; ವಿವಿಧ ತೋಟಗಾರಿಕೆ ಬೆಳೆಗಳಿಗೆ ಹಾನಿಯುಂಟು ಮಾಡುವ ರೋಗ/ ಕೀಟಗಳ ನಿಯಂತ್ರಣಕ್ಕಾಗಿ ಸಸ್ಯ ಸಂರಕ್ಷಣಾ ಔಷಧಿಗಳಿಗೆ ಶೇ 30 ರಿಂದ ಶೇ 75ರ ಸಹಾಯಧನ, ಅಡಿಕೆ ತೋಟ ಹೊಂದಿರುವ ರೈತರಿಗೆ ಅಡಿಕೆ ಸಂರಕ್ಷಣೆ ಒಣಗಿಸಲು ಸೋಲಾರ್ ಶೀಟ್ ಖರೀದಿಗೆ ಶೇ 40ರ ಸಹಾಯಧನ, ವಿವಿಧ ಜಾತಿಯ ಅಣಬೆ ಉತ್ಪಾದನೆಗಾಗಿ ಅಣಬೆ ಉತ್ಪಾದನಾ ಘಟಕ, ಸ್ಪಾನ್ ಉತ್ಪಾದನಾ ಘಟಕಗಳ ಸ್ಥಾಪನೆಗೆ ಶೇ 40ರ ಸಹಾಯಧನ ಸಿಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ರೈತರ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸುವ ಉದ್ದೇಶದಿಂದ ವಿವಿಧ ಸಂಸ್ಥೆಗಳು ಸ್ಥಾಪಿಸುವ ಗ್ರಾಮೀಣ ಮಾರುಕಟ್ಟೆ, ರೈತ ಸಂತೆ ಹಾಗೂ ನೇರ ಮಾರುಕಟ್ಟೆ ಸ್ಥಾಪಿಸಲು ಶೇ 40ರಂತೆ ಗರಿಷ್ಠ ರೂ. 10 ಲಕ್ಷಗಳ ಸಾಲ ಆಧಾರಿತ ಸಹಾಯಧನ ಪಡೆಯಲು ಅವಕಾಶವಿರುತ್ತದೆ.
ತೋಟಗಾರಿಕೆ ಬೆಳೆಗಳ ಪ್ರಾಥಮಿಕ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಶೇ 40, ಪ್ಯಾಕ್ ಹೌಸ್‌ಗಳ ನಿರ್ಮಾಣಕ್ಕೆ ಗರಿಷ್ಠ 2 ಲಕ್ಷ ರೂ. ವರೆಗೆ ಶೇ 50ರ ಸಹಾಯಧನ ಹಾಗೂ ರೈತರ ಯಾಂತ್ರೀಕರಣ ಅವಶ್ಯಕತೆಗೆ 20 ಹೆಚ್‌ಪಿಗಿಂತ ಕಡಿಮೆ ಸಾಮರ್ಥ್ಯದ ಟ್ರ್ಯಾಕ್ಟರ್ ಖರೀದಿಗೆ ರೂ. 75,000 ದಿಂದ 1 ಲಕ್ಷ ರೂ. ವರೆಗೆ ಸಹಾಯಧನ ಲಭ್ಯವಿದೆ.
ಹಳೆ ತೆಂಗು ತೋಟಗಳಲ್ಲಿ ಶೇ 10ರಷ್ಟು ಹಳೆ ಮರಗಳನ್ನು ತೆಗೆದು ಹೊಸ ಗಿಡಗಳ ನಾಟಿ, ಬುಡ ಮಾಡಿ ಗೊಬ್ಬರ ಕೊಡುವುದು, ಸಸ್ಯ ಸಂರಕ್ಷಣೆ ಹಾಗೂ ನೀರಿನ ಸಂರಕ್ಷಣೆ ಕಾರ್ಯಕ್ರಮಗಳನ್ನು ಕೈಗೊಂಡು ಪುನಶ್ಚೇತನಗೊಳಿಸಲು, ಪ್ರಾತ್ಯಕ್ಷತೆ ತಾಕುಗಳ ನಿರ್ಮಾಣಕ್ಕಾಗಿ ಹಾಗೂ ತೆಂಗು ಬೆಳೆಗೆ ತಗಲುವ ರೋಗ ಮತ್ತು ಕೀಟಗಳ ನಿಯಂತ್ರಣಕ್ಕಾಗಿ ಕೀಟ ಮತ್ತು ರೋಗಗಳಿಗನುಗುಣವಾಗಿ ಒಟ್ಟು ಘಟಕ ವೆಚ್ಚದ ಶೇ 50ರಂತೆ ಹಾಗೂ ಹೊಸ ತೆಂಗು ತೋಟ ಮಾಡಲಿಚ್ಛಿಸುವ ರೈತರಿಗೆ ಕೂಡ ಸಹಾಯಧನ ಲಭ್ಯವಿದೆ.
ಕೃಷಿ ಯಾಂತ್ರೀಕರಣ ಉಪ ಅಭಿಯಾನ ಹಾಗೂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಗಳಡಿ ತೋಟಗಾರಿಕೆ ಯಾಂತ್ರೀಕರಣ ಕಾರ್ಯಕ್ರಮದಡಿ ಅನುಮೋದಿತ ವಿವಿಧ ಯಂತ್ರೋಪಕರಣಗಳಿಗೆ ಶೇ 40/ 50ರ ಸಹಾಯಧನ ಹಾಗೂ ದೊಡ್ಡ ಗಾತ್ರದ ನೀರು ಸಂಗ್ರಹಣಾ ಘಟಕ, ಪ್ಯಾಕಿಂಗ್ ಮತ್ತು ಸಂಗ್ರಹಣಾ ಘಟಕಗಳ ನಿರ್ಮಾಣಕ್ಕೆ ಮತ್ತು ನೀರಿನಲ್ಲಿ ಕರಗುವ ರಸಗೊಬ್ಬರ ಮತ್ತು ಲಘು ಪೋಷಕಾಂಶಗಳ ಖರೀದಿಗೆ ಸಹಾಯಧನ ಸಿಗಲಿದೆ.
ಹನಿ ನೀರಾವರಿಗೆ ಸಹಾಯಧನ; ತೋಟಗಾರಿಕೆ ಬೆಳೆಗಳಲ್ಲಿ ನೀರಿನ ಸಮರ್ಪಕ ಬಳಕೆಗಾಗಿ ಹನಿ ನೀರಾವರಿ/ ತುಂತುರು ನೀರಾವರಿ ಅಳವಡಿಕೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ 90ರಷ್ಟು ಹಾಗೂ ಇತರೇ ವರ್ಗದ ರೈತರಿಗೆ ಶೇ 75ರಷ್ಟು ಸಹಾಯಧನ ಲಭ್ಯವಿದೆ. ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಕಾರ್ಯಾದೇಶ ಪಡೆದು ಇಲಾಖೆಯಿಂದ ಅನುಮೋದಿತ ಡೀಲರ್‌ಗಳ ಮೂಲಕ ರೈತರು ಹನಿ ನೀರಾವರಿ ಆಳವಡಿಸಿಕೊಂಡು ಸಹಾಯಧನ ಪಡೆಯಬಹುದಾಗಿದೆ.
ತಾಳೆಬೆಳೆ ಯೋಜನೆಯಡಿ ಹೊಸದಾಗಿ ತಾಳೆ ಬೆಳೆ ಪ್ರದೇಶ ವಿಸ್ತರಣೆಗೆ ಹಾಗೂ ತಾಳೆ ಬೆಳೆ ಬೆಳೆಯುವ ರೈತರಿಗೆ ಬೋರ್‌ವೆಲ್, ಬಾವಿ ನಿರ್ಮಿಸಿಕೊಳ್ಳಲು, ವಿದ್ಯುತ್, ಡೀಸೆಲ್ ಪಂಪ್ ಮತ್ತು ಯಂತ್ರೋಪಕರಣ ಖರೀದಿಗೆ ಹಾಗೂ ಜೇನು ಸಾಕಾಣಿಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ 2 ದಿನಗಳ ತರಬೇತಿಯೊಂದಿಗೆ ಜೇನು ಕುಟುಂಬ ಸಹಿತ ಗರಿಷ್ಠ 4 ಪೆಟ್ಟಿಗೆ ಖರೀದಿಗೆ ಶೇ 75 ರಿಂದ 90 ರ ಸಹಾಯಧನ ಲಭ್ಯವಿದೆ.
ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ, ಹಳೆ ತೋಟಗಳ ಪುನಶ್ಚೇತನ ಹಾಗೂ ಪೌಷ್ಟಿಕ ತೋಟಗಳ ನಿರ್ಮಾಣಕ್ಕೆ, ಗ್ರಾಮ ಪಂಚಾಯತಿಯಲ್ಲಿ ಅರ್ಜಿ ಸಲ್ಲಿಸಿ, ಈ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ.
ಈ ಎಲ್ಲಾ ಯೋಜನೆಗಳ ಪ್ರಯೋಜನ ಪಡೆಯಲು ಆಸಕ್ತ ರೈತರು ಪ್ರಥಮ ಹಂತದಲ್ಲಿ, ನೋಂದಣಿ ಅರ್ಜಿಯೊಂದಿಗೆ ಬೆಳೆ ನಮೂದಿಸಿರುವ ಇತ್ತೀಚಿನ ಪಹಣಿ ಪತ್ರ ಮತ್ತು ಅಗತ್ಯ ಪ್ರಮಾಣ ಪತ್ರಗಳೊಂದಿಗೆ ಇಲಾಖೆಯಲ್ಲಿ ನೋಂದಾಯಿಸಿಕೊಳ್ಳಬೇಕು. ಇಲಾಖಾ ಮಾರ್ಗಸೂಚಿ ಅನುಸಾರ ಅರ್ಜಿಗಳನ್ನು ಜೇಷ್ಠತೆಯ ಆಧಾರದಲ್ಲಿ, ಇಲಾಖೆ ನಿಗದಿಪಡಿಸಿದ ಗುರಿಗೆ ಅನುಗುಣವಾಗಿ ಸಹಾಯಧನಕ್ಕೆ ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications