Get Updates
Get notified of breaking news, exclusive insights, and must-see stories!

ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ, ರೈತರು ಹೆಸರು ನೋಂದಾಯಿಸಿ

ಬೆಂಗಳೂರು, ಮೇ 30: ರೈತರು 2024-25ನೇ ಸಾಲಿನಲ್ಲಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಗೆ ಹೆಸರು ನೋಂದಾಯಿಸಲು ಕರೆ ನೀಡಲಾಗಿದೆ. ಯೋಜನೆಗೆ ಹೆಸರು ನೋಂದಾಯಿಸಿದ ರೈತರಿಗೆ ಬೆಳೆ ನಷ್ಟವಾದರೆ ಪರಿಹಾರ ಸಿಗಲಿದೆ.

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು 2024-25ನೇ ಸಾಲಿನಲ್ಲಿಯೂ ಜಾರಿಯಲ್ಲಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಉದ್ದೇಶ.

Apply For Pradhan Mantri Fasal Bima Yojana For Year 2024-25

ಈ ಯೋಜನೆಯಡಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ. 2 ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗುವುದು. ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿರುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?; ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳೆವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಸಹ ಪರಿಗಣಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ವಿವಿಧ ಜಿಲ್ಲೆಗಳಿಗೆ ವಿವಿಧ ವಿಮಾ ಕಂಪನಿಯನ್ನು ಆಯ್ಕೆ ಮಾಡಲಾಗಿದೆ. ವಿಮಾ ಅರ್ಜಿಗಳು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಲಭ್ಯವಿದ್ದು, ಈ ಯೋಜನೆಯಡಿ ಅರ್ಜಿಯನ್ನು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಲ್ಲಿಸಿ ನೋೂಂದಾಯಿಸಿಕೊಳ್ಳಬಹುದಾಗಿದೆ.

ಪ್ರಸಕ್ತ (2024) ಸಾಲಿನ ಮುಂಗಾರು ಹಂಗಾಮಿನ ವಿಮಾ ಮೊತ್ತ ಮತ್ತು ರೈತರ ವಿಮಾ ಕಂತಿನ ವಿವರ. ಭತ್ತ (ನೀರಾವರಿ) ಸಾಮಾನ್ಯ ವಿಮಾ (ಪ್ರತಿ ಎಕರೆಗೆ) ವಿಮಾ ಮೊತ್ತ ರೂ. 37,738.28, ರೈತರ ವಿಮಾಕಂತು ಶೇ.2 ರಂತೆ 754.77, ಭತ್ತ (ಮಳೆಯಾಶ್ರಿತ) ವಿಮಾ ಮೊತ್ತ 25,799.63 ರೂ., ರೈತರ ವಿಮಾ ಕಂತು ಶೇ.2 ರಂತೆ ರೂ 515.99. ನೋಂದಾಯಿಸಿಕೊಳ್ಳಲು 2024 ರ ಆಗಸ್ಟ್, 16 ಕೊನೆಯ ದಿನವಾಗಿದೆ. ಮುಸುಕಿನ ಜೋಳ (ಮಳೆಯಾಶ್ರಿತ) ವಿಮಾ ಮೊತ್ತ ರೂ. 22,865.55, ರೈತರ ವಿಮಾ ಕಂತು ಶೇ.2 ರಂತೆ ರೂ. 457.31. ನೋಂದಣಿಗೆ ಜುಲೈ, 31 ಕೊನೆಯ ದಿನವಾಗಿದೆ.

ಈ ಯೋಜನೆಯಲ್ಲಿ ರೈತರು ಅರ್ಜಿಯೊಂದಿಗೆ ಪಹಣಿ, ಬ್ಯಾಂಕ್ ಪಾಸ್ ಪುಸ್ತಕ, ಮತ್ತು ಆಧಾರ್ ಸಂಖ್ಯೆಯನ್ನು ನೀಡಿ ನೋಂದಾಯಿಸಿಕೊಳ್ಳಬೇಕು. ಯೋಜನೆಯ ಮಾಹಿತಿಯನ್ನು ಸಂರಕ್ಷಣೆ ತಂತ್ರಾಂಶದಲ್ಲಿ ಪಡೆಯಬಹುದು. (http://www.samrakshane.karnataka.gov.in/).

ಆಸಕ್ತರು ಹೆಚ್ಚಿನ ಮಾಹಿತಿಗೆ ಹೋಬಳಿಯ ರೈತ ಸಂಪರ್ಕ ಕೇಂದ್ರ ಹಾಗೂ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದಾಗಿದೆ. ಈ ಯೋಜನೆಯನ್ನು ರೈತರು ಸದುಪಯೋಗ ಪಡಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ ಮಾಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+