ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೋಟಗಾರಿಕಾ ಬೆಳೆಗಳಿಗೆ ಸಹಾಯಧನ; ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ನವೆಂಬರ್ 26 : ತೋಟಗಾರಿಕೆ ಇಲಾಖೆ ವತಿಯಿಂದ 2020-21ನೇ ಸಾಲಿನಲ್ಲಿ ತೋಟಗಾರಿಕಾ ಬೆಳೆಗಳಿಗೆ ಸಹಾಯಧನವನ್ನು ನೀಡಲಾಗುತ್ತದೆ. ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿರುವ ರೈತರು ಅರ್ಜಿಗಳನ್ನು ಸಲ್ಲಿಸಬಹುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲೂಕುಗಳಲ್ಲಿ ಈ ಯೋಜನೆಯನ್ನು ಇಲಾಖೆ ಅನುಷ್ಠಾನಗೊಳಿಸುತ್ತಿದೆ. ಆಸಕ್ತ ರೈತರು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.

ಫಸಲ್ ಭೀಮಾ ಯೋಜನೆ; ಆಲೂಗಡ್ಡೆ ಬೆಳೆ ನೋಂದಣಿಗೆ ಅವಕಾಶ ಫಸಲ್ ಭೀಮಾ ಯೋಜನೆ; ಆಲೂಗಡ್ಡೆ ಬೆಳೆ ನೋಂದಣಿಗೆ ಅವಕಾಶ

ಬೆಳೆಗಳಿಗೆ ಹನಿ ನೀರಾವರಿ ಅಳವಡಿಸುವ ರೈತರಿಗೆ ಆಯಾ ಬೆಳೆಗಳು ಮತ್ತು ಬೆಳೆಗಳ ಅಂತರಕ್ಕನುಗುಣವಾಗಿ ಮಾರ್ಗಸೂಚಿಗಳ ಅನ್ವಯ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಸಾಮಾನ್ಯ ರೈತರಿಗೆ ಪ್ರಥಮ 2 ಹೆಕ್ಟೇರ್‌ಗೆ ನಿಗದಿಪಡಿಸಿರುವ ವೆಚ್ಚದ ಶೇ.90ರಷ್ಟು ಸಹಾಯಧನವನ್ನು ನೀಡಲಾಗುತ್ತದೆ.

ಬೆಳೆ ಸಮೀಕ್ಷೆಗೆ ಡ್ರೋನ್: ನೂರು ಜಿಲ್ಲೆಗಳಲ್ಲಿ ಪ್ರಾಯೋಗಿಕ ಬಳಕೆಬೆಳೆ ಸಮೀಕ್ಷೆಗೆ ಡ್ರೋನ್: ನೂರು ಜಿಲ್ಲೆಗಳಲ್ಲಿ ಪ್ರಾಯೋಗಿಕ ಬಳಕೆ

Apply For Subsidy For Horticulture Crops

ಮೂರು ಹೆಕ್ಟೇರ್‌ಗೆ ಶೇ.45ರಷ್ಟು ಸಹಾಯಧನವನ್ನು ನೀಡಲಾಗುವುದು (ತರಕಾರಿ ಹಾಗೂ ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಟ 2 ಹೆಕ್ಟೇರ್ ವರೆಗೆ ಸಹಾಯಧನವನ್ನು ಪಡೆಯಬಹುದು) ಈ ಯೋಜನೆಯಡಿ ಸೌಲಭ್ಯವನ್ನು ಪ್ರತಿ ಫಲಾನುಭವಿ ಕುಟುಂಬಕ್ಕೆ 5 ಹೆಕ್ಟೇರ್ ಪ್ರದೇಶದವರೆಗೆ ಮಿತಿಗೊಳಿಸಲಾಗಿದೆ.

ಬಿತ್ತನೆ ಬಳಿಕ ಆಲೂಗಡ್ಡೆ ಬೆಳೆ ರಕ್ಷಣೆಗೆ ರೈತರಿಗೆ ಸಲಹೆಗಳು ಬಿತ್ತನೆ ಬಳಿಕ ಆಲೂಗಡ್ಡೆ ಬೆಳೆ ರಕ್ಷಣೆಗೆ ರೈತರಿಗೆ ಸಲಹೆಗಳು

ತೋಟಗಾರಿಕೆಯಲ್ಲಿ ಕೃಷಿ ಮಾಡುತ್ತಿರುವ ಹಾಗೂ ನೀರಾವರಿ ಮೂಲ ಹೊಂದಿರುವ ರೈತರು ತಮ್ಮ ಜಮೀನಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತರಾಗಿದ್ದಲ್ಲಿ, ತಮ್ಮ ಜಮೀನು ವ್ಯಾಪ್ತಿಯ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಕಚೇರಿಯ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು.

Recommended Video

ಶಾಲೆಗಳ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರ | Oneindia Kannada

ಹನಿ ನೀರಾವರಿ ಅಳವಡಿಸಲು ನಿಗದಿತ ಅರ್ಜಿಯನ್ನು ಪಡೆಯಬಹುದು, ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೊಡ್ಡಬಳ್ಳಾಪುರ, ದೇವನಹಳ್ಳಿ ಹೊಸಕೋಟೆ, ನೆಲಮಂಗಲ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಿ.

English summary
Horticulture department invited applications from farmers in Bengaluru rural district for subsidy for horticulture crops.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X