Arecanut import: ದೇಶದ ಅಡಿಕೆ ಬೆಳೆಗಾರರಿಗೆ ಮುಳುವಾಗುತ್ತಾ ಕೆಂದ್ರ ಸರ್ಕಾರದ ಈ ನಿರ್ಧಾರ?
Arecanut: ಈಗಾಗಲೇ ದೇಶದಲ್ಲಿ ಅಡಿಕೆ ದರ ಕುಸಿದಿದೆ ಎಂದು ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಇದರ ನಡುವೆಯೂ ಕೇಂದ್ರ ಸರ್ಕಾರ ವಿದೇಶದಿಂದ ಕಡಿಮೆ ಬೆಲೆಗೆ 17,000 ಟನ್ ಆಮದು ಮಾಡಿಕೊಳ್ಳಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದರಿಂದ ದೇಶದ ಅಡಿಕೆ ಬೆಳೆಗಾರರಿಗೆ ಹೊಡೆತ ಬೀಳಲಿದೆ ಎನ್ನುವ ಆಕ್ರೋಶಗಳು ಭುಗಿಲೆದ್ದಿವೆ.
ಭೂತಾನ್‌ನಿಂದ ಕನಿಷ್ಠ ಆಮದು ಬೆಲೆ ಷರತ್ತಿಲ್ಲದೆ 17,000 ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಕೇಂದ್ರ ವಾಣಿಜ್ಯ ಸಚಿವಾಲಯ ವ್ಯಾಪ್ತಿಯ ವಿದೇಶಿ ವ್ಯಾಪಾರ ಮಹಾ ನಿರ್ದೇಶನಾಲಯ ಈ ಬಗ್ಗೆ ಮಾಹಿತಿ ನೀಡಿದ್ದು, ಒಡಿಶಾದ ಹತಿಸರ್ ಮತ್ತು ಅಸ್ಸಾಂನ ದರ್ರಂಗಾದ ಕಸ್ಟಮ್ಸ್ ಕೇಂದ್ರದ ಮೂಲಕ ಈ ಅಡಿಕೆ ಆಮದು ಮಾಡಿಕೊಳ್ಳಲು ಒಪ್ಪಿಗೆ ನೀಡಲಾಗಿದೆ.

2022ರ ಸೆಪ್ಟೆಂಬರ್‌ನಲ್ಲಿ ಪ್ರತಿ ವರ್ಷ ಭೂತಾನ್‌ನಿಂದ ಕನಿಷ್ಠ ಆಮದು ಬೆಲೆ ಇಲ್ಲದೆ, 17,000 ಟನ್ ಅಡಿಕೆ ಆಮದು ಮಾಡಿಕೊಳ್ಳಲು ಒಪ್ಪಿಗೆ ನೀಡಲಾಗಿತ್ತು. ಕೇಂದ್ರ ಸರ್ಕಾರ 2017ರಲ್ಲಿ ಪ್ರತಿ ಕೆ.ಜಿ. ಅಡಿಕೆಗೆ 251 ರೂಪಾಯಿ ಕನಿಷ್ಠ ಆಮದು ಬೆಲೆ ನಿಗದಿಪಡಿಸಿದ್ದು, ಕಳೆದ ವರ್ಷ ಈ ದರವನ್ನು ಕೆಜಿಗೆ 351 ರೂಪಾಯಿಗೆ ಹೆಚ್ಚಳ ಮಾಡಿದೆ.
ಭೂತಾನ್‌ನಿಂದ ಆಮದು ಮಾಡಿಕೊಳ್ಳುವ ಅಡಿಕೆ ಪ್ರಮಾಣ ದೇಶಿಯ ಅಡಿಕೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಆದರೆ ವರ್ತಕರು ಇದರ ಲಾಭ ಪಡೆದು ಸ್ಥಳೀಯವಾಗಿ ಬೆಲೆ ಕಡಿಮೆ ಮಾಡುವ ಆತಂಕ ಬೆಳೆಗಾರರಲ್ಲಿ ಇದೆ. ಇದನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ತಡೆದು ರೈತರಿಗೆ ಬೆಳೆಗೆ ತಕ್ಕ ನ್ಯಾಯಯುತ ಬೆಲೆ ಕೊಡಿಸಬೇಕು ಎಂಬುದು ರೈತರ ಆಗ್ರಹವಾಗಿದೆ. 2023ರಲ್ಲಿ ಭೂತಾನ್ ಅಡಿಕೆ ಭಾರತಕ್ಕೆ ಬಂದಾಗ ಕ್ವಿಂಟಾಲ್ ಅಡಿಕೆ ದರ 4,000 ರೂಪಾಯಿವರೆಗೆ ಕುಸಿದಿದ್ದು, ಇದೀಗ ಮತ್ತೆ ದರ ಕುಸಿತದ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.
ಈಗಾಗಲೇ ಅಡಿಕೆ ಬೆಲೆ ಕುಸಿತದಿಂದ ಕಂಗಾಲಾಗಿರು ದೇಶದಲ್ಲಿನ ಬೆಳೆಗಾರರ ಹೊಟ್ಟೆ ಮೇಲೆ ಮತ್ತೆ ಬರೆ ಎಳೆಯುವಂತಹ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಈ ಭಾರೀ ಮಳೆಯೇನೋ ಆಗಿದ್ದು, ಅಡಿಕೆ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿತ್ತು. ಆದರೆ ಇದೀಗ ಆದರೆ ಇದೀಗ ಕೇಂದ್ರ ಸರ್ಕಾರ ಬೇರೆ ದೇಶದದಿಂದ ಹಸಿ ಅಡಿಕೆ ಆಗಮದು ಮಾಡಿಕೊಳ್ಳಲು ನಿರ್ಧರಿಸಿದ್ದು, ಇದು ಬೆಲೆ ಹೆಚ್ಚಳದ ನಿರೀಕ್ಷೆಯಲ್ಲಿ ರೈತರಿಗೆ ಮಂದಹಾಸ ಮೂಡಿಸಿದಂತಾಗಿದೆ.












Click it and Unblock the Notifications