ರೈತರ ಸಾಲದಂತೆ ಮೀನುಗಾರರ ಸಾಲವನ್ನೂ ಮನ್ನಾ ಮಾಡಿ: ಸಿಎಂಗೆ ಮನವಿ

Recommended Video

      ರೈತರ ಸಲ ಮನ್ನಾ ಸಾಲದು ಅಂತ ಈಗ ಕುಮಾರಣ್ಣ ಮೀನುಗಾರರ ಸಲ ಕೂಡ ಮನ್ನಾ ಮಾಡಬೇಕು

      ಬೆಂಗಳೂರು, ಜುಲೈ ೦3: ರೈತರ ಸಾಲಮನ್ನಾ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರಕ್ಕೆ ಮೀನುಗಾರರ ಸಾಲವನ್ನೂ ಮನ್ನಾ ಮಾಡುವಂತೆ ಒತ್ತಾಯ ಬಂದಿದೆ.

      ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಉಡುಪಿ ಜಿಲ್ಲಾ ಮೀನುಗಾರರ ಸಂಘದ ನಿಯೋಗವು ಮೀನುಗಾರರ ಸಾಲಮನ್ನಾ ಮಾಡುವಂತೆ ಕುಮಾರಸ್ವಾಮಿ ಅವರಿಗೆ ಮನವಿ ಪತ್ರ ನೀಡಿತು.

      ಮೀನುಗಾರರ ಸಂಘದ ಮುಂದಾಳತ್ವ ವಹಿಸಿದ್ದ ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್ ಅವರು ಮೀನುಗಾರರ ಕಷ್ಟಗಳ ಬಗ್ಗೆ, ಆರ್ಥಿಕ ಸ್ಥಿತಿ ಬಗ್ಗೆ ಕುಮಾರಸ್ವಾಮಿ ಅವರಿಗೆ ಮನದಟ್ಟು ಮಾಡಿದರು. ಮಂಗಳೂರು, ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಶಾಸಕರುಗಳು ನಿಯೋಗದಲ್ಲಿದ್ದರು.

      As Farmers loan waive off fishermen loan also request to CM

      ಮನವಿ ಪತ್ರ ಸಲ್ಲಿಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರಘುಪತಿ ಭಟ್ ಅವರು, ಮೀನುಗಾರರ ಸಾಲಮನ್ನಾ ಮನವಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

      ಚುನಾವಣೆ ಪ್ರಣಾಳಿಕೆಯಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಬಗ್ಗೆ ಘೋಷಿಸಿದ್ದ ಕುಮಾರಸ್ವಾಮಿ ಅವರು ಈಗ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಜುಲೈ 5 ರಂದು ಬಜೆಟ್‌ನಲ್ಲಿ ರೈತರ ಸಾಲಮನ್ನಾ ಘೋಷಣೆ ಮಾಡಲಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+