ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಡ್ಯ ರೈತರ ಜೀವನಾಡಿ ಮೈಶುಗರ್ ಕಾರ್ಖಾನೆ ಆ.15 ರಂದು ಪುನರಾರಂಭ: ಗೋಪಾಲಯ್ಯ

|
Google Oneindia Kannada News

ಮಂಡ್ಯ, ಜೂ.29: ಮಂಡ್ಯ ಜಿಲ್ಲೆಯ ರೈತರ ಜೀವನಾಡಿ ಮೈಶುಗರ್ ಕಾರ್ಖಾನೆ ಪುನಾರಂಭ ಸಂಬಂಧ ಆಗಸ್ಟ್ 15 ರೊಳಗೆ ಸಂಪೂರ್ಣ ಯಂತ್ರೋಪಕರಣಗಳ ದುರಸ್ತಿ ಮುಗಿಸುವಂತೆ ಗುತ್ತಿಗೆದಾರರಿಗೆ ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ತಾಕೀತು ಮಾಡಿದ್ದಾರೆ.

ಜಿಲ್ಲೆಯ ರೈತರ ಜೀವನಾಡಿ ಮೈಶುಗರ್ ಕಾರ್ಖಾನೆ ಪುನಾರಂಭ ವಿಷಯದಲ್ಲಿ ರಾಜ್ಯ ಸರ್ಕಾರ ನುಡಿದಂತೆ ನಡೆದುಕೊಳ್ಳಲಿದೆ ಎಂದು ಅವರು ಬುಧವಾರ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಮಂಡ್ಯ ಮೈಷುಗರ್ ಕಾರ್ಖಾನೆಗೆ ಮರು ಜೀವ: ಆಗಸ್ಟ್‌ನಿಂದ ಮತ್ತೆ ಆರಂಭಕ್ಕೆ ಸಿದ್ಧತೆಮಂಡ್ಯ ಮೈಷುಗರ್ ಕಾರ್ಖಾನೆಗೆ ಮರು ಜೀವ: ಆಗಸ್ಟ್‌ನಿಂದ ಮತ್ತೆ ಆರಂಭಕ್ಕೆ ಸಿದ್ಧತೆ

ಮೈ ಶುಗರ್ ಪುನಾರಂಭದಿಂದ ಜಿಲ್ಲೆಯ ಕಬ್ಬು ಬೆಳೆಗಾರರ ಬದುಕು ಬದಲಾಗಲಿದೆ. ಕಾರ್ಖಾನೆಯ ಯಂತ್ರೋಪಕರಣಗಳ‌ ದುರಸ್ತಿಗೆ ಈಗಾಗಲೇ 50 ಕೋಟಿ ರೂ ಬಿಡುಗಡೆ ಮಾಡಲಾಗಿದೆ. ದುರಸ್ತಿ ಕಾರ್ಯ ಕೂಡ ನಡೆಯುತ್ತಿದೆ. ಆಗಸ್ಟ್ 15 ರೊಳಗೆ ಸಂಪೂರ್ಣ ಯಂತ್ರೋಪಕರಣಗಳ ದುರಸ್ತಿ ಮುಗಿಸುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಲಾಗಿದೆ ಎಂದು ಅವರು ತಿಳಿಸಿದರು.

August 15 Deadline for Mandya My Sugar Factory Machines Repairing: K Gopalaiah

ಜು.21 ರಂದು ಕೆ.ಆರ್.ಪೇಟೆಯಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮ:
ಜುಲೈ 21 ರಂದು ಕೆ.ಆರ್‌.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಸಮಾರಂಭಕ್ಕೆ ಮುಖ್ಯಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಜನರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇಲಾಖಾ ಮುಖ್ಯಸ್ಥರು ಯಾವುದೇ ಲೋಪವಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಸಚಿವ ಕೆ.ಗೋಪಾಲಯ್ಯ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್‌ನ ಕಾವೇರಿ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮ ಕುರಿತು ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

August 15 Deadline for Mandya My Sugar Factory Machines Repairing: K Gopalaiah

ಜುಲೈ 21 ರಂದು ಮಾನ್ಯ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಅಧಿಕಾರಿಗಳು ತಮ್ಮ ಇಲಾಖೆ ವತಿಯಿಂದ ಕೈಗೊಳ್ಳಬೇಕಿರುವ ಶಂಕುಸ್ಥಾಪನೆ, ಉದ್ಘಾಟನೆ, ಸವಲತ್ತು ವಿತರಣೆಗಳ ವಿವರದ ಪಟ್ಟಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವಂತೆ ತಿಳಿಸಿದರು.

ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಹಂತದಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಿ ಕಾರ್ಯಕ್ರಮಕ್ಕೆ ಬೇಕಾದಂತಹ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದರು.

August 15 Deadline for Mandya My Sugar Factory Machines Repairing: K Gopalaiah

ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಜಿಲ್ಲೆಯ ರೈತರಿಗೆ, ಮಹಿಳೆಯರಿಗೆ ಸೇರಿದಂತೆ ಇತರರಿಗೆ ನೀಡಿರುವ ಸೌಲಭ್ಯಗಳ ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸಿ ಎಂದರು.

ಸಭೆಯಲ್ಲಿ ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ, ಜಿಲ್ಲಾಧಿಕಾರಿಗಳಾದ ಎಸ್.ಅಶ್ವತಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ದಿವ್ಯಪ್ರಭು, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

English summary
Mandya District In charge and Excise Minister K. Gopalaiah has instruct contractors to complete the repair of the entire machinery by August 15, when the My sugar factory reopens.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X