ಮೃತ ರೈತನ ಕುಟುಂಬಕ್ಕೆ ತನ್ನ ಸ್ವಂತ ಹಣ ಕೊಟ್ಟ ಸಿದ್ದರಾಮಯ್ಯ

ಬಾಗಲಕೋಟೆ, ಜೂನ್.11: ಬಾದಾಮಿ ತಾಲೂಕಿನ ಲಖಮಾಪೂರ ಗ್ರಾಮದಲ್ಲಿ ಹೊಲದಲ್ಲಿ ಕೆಲಸ‌ ಮಾಡುವಾಗ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ದಿಂದ ಮೃತಪಟ್ಟಿದ್ದ ರೈತನ ಕುಟುಂಬಕ್ಕೆ ಬಾದಾಮಿ ಶಾಸಕ ಸಿದ್ದರಾಮಯ್ಯ ಸಾಂತ್ವನ ಹೇಳಿದರು.

ರೈತ ಸಿದ್ದಪ್ಪ ಫಕ್ಕಿರಪ್ಪ ಆಲದಕಟ್ಟಿ ಕಬ್ಬಿನಹೊಲಕ್ಕೆ ನೀರು ಹಾಯಿಸಲು ಹೋಗಿ ಆಚಾತುರ್ಯವಾಗಿ ವಿದ್ಯುತ್ ಅವಘಡ ಸ್ಪರ್ಶದಿಂದ ಸಾವನ್ನಪ್ಪಿದ್ದರು. ರೈತನ ಮನೆಗೆ ಸೋಮವಾರ ಭೇಟಿ ನೀಡಿದ ಮಾಜಿ ಸಿಎಂ, ಶಾಸಕ ಸಿದ್ದರಾಮಯ್ಯ ತಮ್ಮ ಸ್ವಂತ ಹಣ 50 ಸಾವಿರ ರೂಪಾಯಿಗಳನ್ನು ನೀಡಿದರು.

ಸರ್ಕಾರದಿಂದ 5 ಲಕ್ಷ ರೂ.ಗಳನ್ನು ನೀಡುವುದಾಗಿಯೂ ಭರವಸೆ ನೀಡಿದರು. ಮೃತನ ಪತ್ನಿಗೆ ಸರ್ಕಾರದಿಂದ ಪಿಂಚಣಿ ವ್ಯವಸ್ಥೆ ಕಲ್ಪಿಸಲಾಗುವುದಾಗಿ ಭರವಸೆ ನೀಡಿದರು.

Badami MLA Siddaramaiah paid compensation to the deceased farmer family

ಮೃತ ರೈತನ ಮಕ್ಕಳಿಗೆ ಸರ್ಕಾರದಿಂದ ಉಚಿತ ಶಿಕ್ಷಣ ವ್ಯವಸ್ಥೆ ಕಲ್ಪಿಸಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚಿಸಿದರು.

ಬಾದಾಮಿಯಿಂದ ಶಾಸಕರಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಕಳೆದ ಗುರುವಾರದಿಂದ ಬಾದಾಮಿ ಪ್ರವಾಸ ಕೈಗೊಂಡಿದ್ದಾರೆ. ಕ್ಷೇತ್ರದ ಜನತೆಯ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಹಾಗೂ ಬಾಗಲಕೋಟೆಯ ಬಾದಾಮಿಯಿಂದ ಸಿದ್ದರಾಮಯ್ಯ ಸ್ಪರ್ಧಿಸಿದ್ದರು. ಚಾಮುಂಡೇಶ್ವರಿಯಲ್ಲಿ ಜೆಡಿಎಸ್ ನ ಜಿ.ಟಿ. ದೇವೇಗೌಡ ಮುಂದೆ ಪರಾಭವಗೊಂಡರೆ, ಬಾದಾಮಿಯಲ್ಲಿ ಬಿಜೆಪಿಯ ಶ್ರೀರಾಮುಲುರನ್ನು ಸೋಲಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+