ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿನ ಕಸದಿಂದ ರೈತರ ಮನೆಗೆ ಸಾವಯವ ಗೊಬ್ಬರ: ಕೃಷ್ಣಬೈರೇಗೌಡ

ಬೆಂಗಳೂರು ಮಹಾ ನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಹಸಿ ಕಸದಿಂದ ತಯಾರಿಸಲಾಗುವ ಗೊಬ್ಬರವನ್ನು ಸದುಪಯೋಗ ಪಡಿಸಿಕೊಳ್ಳಲು ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರು ಯೋಜನೆ ಹಾಕಿಕೊಂಡಿದ್ದಾರೆ.

By Mahesh
|
Google Oneindia Kannada News

ಬೆಂಗಳೂರು, ಫೆಬ್ರವರಿ 22: ಬೆಂಗಳೂರು ಮಹಾ ನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಹಸಿ ಕಸದಿಂದ ತಯಾರಿಸಲಾಗುವ ಗೊಬ್ಬರವನ್ನು ಸದುಪಯೋಗ ಪಡಿಸಿಕೊಳ್ಳಲು ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರು ಯೋಜನೆ ಹಾಕಿಕೊಂಡಿದ್ದಾರೆ.

ವನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ರೈತರಿಗೆ ಶೇ.50ರ ರಿಯಾಯಿತಿ ದರದಲ್ಲಿ ಒದಗಿಸುವ ಯೋಜನೆ ರೂಪಿಸಲಾಗಿದೆ, ಆಸಕ್ತ ರೈತರು ಮುಂಗಡ ಪಾವತಿಸಿ ರೈತ ಸಂಪರ್ಕ ಕೇಂದ್ರದಲ್ಲಿ ತಮ್ಮ ಬೇಡಿಕೆಯನ್ನು ನೋಂದಾಯಿಸಿಕೊಳ್ಳಬಹುದು ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸುಮಾರು 5 ಸಾವಿರ ಟನ್ ಸಾವಯವ ಗೊಬ್ಬರದ ದಾಸ್ತಾನು ಇದ್ದು ಇದನ್ನು ರೈತರ ಹೊಲಗಳಿಗೆ ನೇರವಾಗಿ ಪ್ರತಿ ಟನ್ನಿಗೆ ಶೇ 50 ರಷ್ಟು ಸಬ್ಸಿಡಿ ದರದಲ್ಲಿ ನೀಡಲಾಗುತ್ತದೆ. ಈ ಯೋಜನೆಯಡಿ ರೈತರು ಪ್ರತಿ ಟನ್ನಿಗೆ 800 ರೂ ಹಣವನ್ನು ಪಾವತಿ ಮಾಡಿದಲ್ಲಿ ಕೃಷಿ ಇಲಾಖೆಯೇ ರೈತರ ಹೊಲಕ್ಕೆ ಗೊಬ್ಬರ ಸರಬರಾಜು ಮಾಡುವುದು ಎಂದರು.

BBMP compost organic manure will be sold Farmers subsidy : Minister Krishna Byre Gowda

ಕೃಷಿ ಹೊಂಡ ನಿರ್ಮಾಣ: ರಾಜ್ಯ ಸರ್ಕಾರದ ಮಹಾತ್ವಾಂಕ್ಷಿ ಯೋಜನೆಯಾದ "ಕೃಷಿಭಾಗ್ಯ" ಯೋಜನೆಯಡಿ ಕೃಷಿ ಹೊಂಡಕ್ಕೆ ರೈತರಿಂದ ಬೇಡಿಕೆ ಹೆಚ್ಚಾಗಿ ಬರುತ್ತಿರುವ ಹಿನ್ನೆಲೆಯಲ್ಲಿ, ಈ ವರ್ಷದ ಮಳೆಗಾಲದ ಆರಂಭದ ಒಳಗಾಗಿ ಇನ್ನೂ 50 ಸಾವಿರ ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಲು ಮುಖ್ಯಮಂತ್ರಿ ಅವರು ಒಪ್ಪಿಗೆ ನೀಡಿದ್ದು, ಇದಕ್ಕೆ ತಗಲುವ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಲು ಸಮ್ಮತಿಸಿದ್ದಾರೆ ಎಂದು ಸಚಿವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಚಿವರು ಮಾರ್ಚ್ ಅಂತ್ಯದ ಒಳಗಾಗಿ ಇನ್ನೂ 30 ಸಾವಿರ ಕೃಷಿ ಹೊಂಡಗಳನ್ನು ರೈತರ ಜಮೀನಿನಲ್ಲಿ ನಿರ್ಮಾಣ ಮಾಡಲು ಅವಕಾಶ ಕಲ್ಪಿಸಿಕೊಡಲಾಗುವುದು ಎಂದರು.

ಆಸಕ್ತಿಯುಳ್ಳ ರೈತರು ಸ್ಥಳೀಯ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಿ ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ರೈತ ಸಮುದಾಯಕ್ಕೆ ಸಚಿವರು ಮನವಿ ಮಾಡಿದರು.

ರಾಜ್ಯದಲ್ಲಿ ಮಳೆ ಕೊರತೆಯಿಂದ ಅತಿಹೆಚ್ಚು ರೈತರು ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಿ ತಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಂಡಿರುವ ಬಗ್ಗೆ ಕೆಲವು ಕೃಷಿ ವಿಶ್ವವಿದ್ಯಾಲಯಗಳು ಸಮೀಕ್ಷೆ ಮಾಡಿ ವರದಿ ಮಾಡಿದೆ ಎಂದು ಕೃಷಿ ಸಚಿವ ಬೈರೇಗೌಡ ಹೇಳಿದರು.

English summary
BBMP is preparing compost organic manure from garbage collected from household. This manure will be sold farmers in subsidised rates said Agriculture minister Krishna Byre Gowda
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X