ಬಿಬಿಎಂಪಿ ಚುನಾವಣೆ, ಕೈ-ಜೆಡಿಎಸ್ ಮೈತ್ರಿ
ಬೆಂಗಳೂರು,
ಜ. 7 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ವಿಷಯಕ್ಕೆ ಸಂಬಂಧಿಸಿದಂತೆ ಅಂತಿಮ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕೈಗೊಳ್ಳಲಿದ್ದಾರೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಹೇಳಿದರು. id="toptextpromo">ಗುರುವಾರ
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಚುನಾವಣೆಗೆ ಪಕ್ಷ ಸಂಪೂರ್ಣ ಸಿದ್ಧವಾಗಿದೆ ಎಂದರು. ರಾಜ್ಯದಲ್ಲಿ ಆಡಳಿತದಲ್ಲಿರುವ ಸರಕಾರ ಅತ್ಯಂತ ಅನಾಗರಿಕ ಸರಕಾರವಾಗಿದೆ. ಎಂದೂ ಕಂಡು ಕೇಳಿರಿಯದ ರೀತಿಯಲ್ಲಿ ರೈತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಹಕ್ಕಿಗಾಗಿ ಪ್ರತಿಭಟನೆ ನಡೆಸುವ ರೈತನನ್ನು ಜೈಲಿಗೆ ಹಾಕುವುದಲ್ಲದೆ, ಅವರ ಕೈಗ ಕೊಳ ತೊಡಿಸುವುದು ಹೀನ ಕೃತ್ಯ ಎಂದು ದೇವೇಗೌಡ ಖಂಡಿಸಿದರು. id='are-slot-1' class='oiad oi-axt oiadv'> id='top-searched-articles'>ನೈಸ್
ವಿರುದ್ಧ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಕೆಂಗೇರಿ ಬಳಿ ಹೋರಾಟ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸಿದ ಗೌಡರು, ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ನ್ಯಾಯ ಸಿಗುವವವರೆಗೂ ಹೋರಾಟ ನಡೆಸುತ್ತೇನೆ. ಶನಿವಾರದಿಂದ ತಾವು ಕೂಡಾ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ರೈತರು ಶಾಂತ ರೀತಿಯಿಂದ ಪ್ರತಿಭಟನೆ ನಡೆಸಬೇಕು ಎಂದು ಅವರು ಮನವಿ ಮಾಡಿಕೊಂಡರು.











Click it and Unblock the Notifications