ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಸೆಂಬರ್‌ನಲ್ಲಿ ಹಿಂಗಾರು ಬೆಳೆ ಸಮೀಕ್ಷೆ ಆ್ಯಪ್ ಬಿಡುಗಡೆ

|
Google Oneindia Kannada News

ಬೆಂಗಳೂರು, ನ. 07: ಮುಂಗಾರು ಬೆಳೆ ಸಮೀಕ್ಷೆ ಶೇಕಡಾ ನೂರರಷ್ಟು ಯಶಸ್ವಿಯಾಗಿದ್ದು, ಕೃಷಿ ಇಲಾಖೆ ಮುಂಗಾರು ಬೆಳೆ ಸಮೀಕ್ಷೆ ನಡೆಸಿದ ಮಾದರಿಯಲ್ಲಿಯೇ ಹಿಂಗಾರು ಬೆಳೆ ಸಮೀಕ್ಷೆ ನಡೆಸಲು ತೀರ್ಮಾನಿಸಿದೆ. ಹಿಂಗಾರು ಬೆಳೆ ಸಮೀಕ್ಷೆ ಸಂಬಂಧ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಇಲಾಖೆ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.

ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ರೈತರೇ ತಮ್ಮ ಬೆಳೆ ಜಮೀನಿನ ಸಮೀಕ್ಷೆಯನ್ನು ತಾವೇ ಆ್ಯಪ್ ಮೂಲಕ ನಡೆಸಿದ್ದು, ಇದೇ ಮಾದರಿಯಲ್ಲಿಯೇ ಹಿಂಗಾರು ಬೆಳೆ ಸಮೀಕ್ಷೆಯನ್ನು ಕೂಡ ನಡೆಸುವ ಬಗ್ಗೆ ಸಚಿವರು ಇಲಾಖಾಧಿಕಾರಿಗಳ ಜೊತೆ ಚರ್ಚಿಸಿದರು. ಮಾಸ್ಟರ್ಸ್‌ಗಳಿಗೆ ಹಿಂಗಾರು ಬೆಳೆ ಸಮೀಕ್ಷೆ ಬಗ್ಗೆ ತರಬೇತಿ ನೀಡುವುದು, ಮಾಸ್ಟರ್ಸ್ ತರಬೇತುದಾರರಿಂದ ಖಾಸಗಿ ನಿವಾಸಿಗಳಿಗೆ (ಪಿಆರ್ಒ) ರೈತರ ಬೆಳೆ ಸಮೀಕ್ಷೆ ಆ್ಯಪ್ ಬಗ್ಗೆ ತರಬೇತಿ ನೀಡಿ ಬಳಿಕ ಆ್ಯಪ್ ಮೂಲಕ ರೈತರೇ ತಮ್ಮ ಬೆಳೆ ಸಮೀಕ್ಷೆಯನ್ನು ತಾವೇ ನಡೆಸಲು ಕ್ರಮಕೈಗೊಳ್ಳುವುದು ಸೇರಿದಂತೆ ಮತ್ತಿತ್ತರ ವಿಷಯಗಳ ಕುರಿತು ಸಭೆಯಲ್ಲಿ ಮಾಹಿತಿ ಪಡೆಯಲಾಯಿತು.

BC Patil said that farmers Crop Survey App will release in first week of December

ಡಿಸೆಂಬರ್ ಮೊದಲ ವಾರದಲ್ಲಿ ಹಿಂಗಾರು ಬೆಳೆ ಸಮೀಕ್ಷೆ ರೈತರ ಆ್ಯಪ್ ಬಿಡುಗಡೆಯಾಗಲಿದ್ದು, ಶೀಘ್ರದಲ್ಲಿಯೇ ದಿನಾಂಕ ಪ್ರಕಟಿಸುವುದಾಗಿ ಹಾಗೂ ಮುಂಗಾರು ಬೆಳೆ ಸಮೀಕ್ಷೆ ಯಶಸ್ವಿಯಾದಂತೆ ಹಿಂಗಾರು ಬೆಳೆ ಸಮೀಕ್ಷೆಯನ್ನು ಯಶಸ್ವಿಗೊಳಿಸಬೇಕೆಂದು ಬಿ.ಸಿ.ಪಾಟೀಲ್ ಅವರು ಮನವಿ ಮಾಡಿದ್ದಾರೆ. ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜಕುಮಾರ್ ಕತ್ರಿ, ನಿರ್ದೇಶಕ ಶ್ರೀನಿವಾಸ್,ಹೆಚ್ಚುವರಿ ನಿರ್ದೇಶಕ ಆ್ಯಂತೋನಿ ಎಂ. ಇಮ್ಯಾನುಲ್ ಸೇರಿದಂತೆ ಮತ್ತಿತ್ತರ ಅಧಿಕಾರಿಗಳು ಉಪಸ್ಥಿತರಿದ್ದರು.

English summary
BC Patil has said that farmer's Crop Survey App will release in the first week of December, to announce the date soon. And also he appealed that make the Monsoon crop survey also suc
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X