ಕೃಷಿ ಕಾಯ್ದೆ ವಿರೋಧಿಸಿ ರೈತರಿಂದ ರಾಜಭವನ ಚಲೋ ಪ್ರತಿಭಟನೆ
ಬೆಂಗಳೂರು, ಜೂನ್ 26: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ವ್ಯಕ್ತಪಡಿಸಿ ಸಂಯುಕ್ತ ಕಿಸಾನ್ ಮೋರ್ಚಾವು ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿದೆ.
ಇಂದು ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ಶುರುವಾಗಲಿದೆ. ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಕಾಯ್ದೆಗಳು ರೈತರಿಗೆ ಮರಣ ಶಾಸನವಾಗಲಿದ್ದು, ಈ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ವಿದ್ಯುತ್ ಖಾಸಗೀಕರಣ ಮಾಡುವುದನ್ನು ವಿರೋಧಿಸಿ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ರೈತರುಪ್ರತಿಭಟನೆಗಿಳಿದು 7 ತಿಂಗಳು ಕಳೆಯುತ್ತಿವೆ. ರೈತರು ಎಲ್ಲಾ ಕೊರೋನಾ ನಿಯಮಗಳನ್ನು ಅನುಸರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆಂದು ಎಂದು ರೈತರು ಹೇಳಿದ್ದಾರೆ.
ದೆಹಲಿ ರೈತರು ಕಳೆದ 214 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯಲ್ಲಿ ಇಲ್ಲಿಯವರೆಗೆ 550 ಜನ ರೈತರು ಪ್ರಾಣವನ್ನು ಬಲಿದಾನ ಮಾಡಿದ್ದಾರೆ. ಇಷ್ಟಾದರೂ ಸರ್ಕಾರ ಸಮಸ್ಯೆ ಬಗೆಹರಿಸುತ್ತಿಲ್ಲ. ಹೀಗಾಗಿ, ರೈತರ ಒಗ್ಗಟ್ಟನ್ನು ಸಾಬೀತುಪಡಿಸಲು ಇಂದು ರಾಜಭವನ ಚಲೋ ನಡೆಸಲಾಗುವುದು ಎಂದು ರೈತ ಮುಖಂಡರು ತಿಳಿಸಿದ್ದಾರೆ.

ದೆಹಲಿ ರೈತರಿಗೆ ಬೆಂಬಲ ಸೂಚಿಸಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ. ಮೌರ್ಯ ವೃತ್ತದಲ್ಲಿ ರೈತರ ಸಂಘಟನೆಗಳು ಜೂನ್.26 ರಂದು ಪ್ರತಿಭಟನೆ ನಡೆಸಲಿದ್ದು, ಅಲ್ಲಿಂದ ರಾಜಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದ ರಾಜ್ಯಪಾಲರಿಗೆ ಮನವಿ ಸಲ್ಲಿಸಲಿದ್ದಾರೆ.
ಪ್ರತಿಭಟನೆ ಸಾಗುವ ಮಾರ್ಗ: ಮೌರ್ಯ ಸರ್ಕಲ್, ಫ್ರೀಡಂಪಾರ್ಕ್, ಮಹಾರಾಣಿ ಕಾಲೇಜು, ಚಾಲುಕ್ಯ ಸರ್ಕಲ್ ಮಾರ್ಗವಾಗಿ ರೈತರ ಪ್ರತಿಭಟನಾ ಮೆರವಣಿಗೆ ಸಾಗಲಿದ್ದು ನಂತರ ರಾಜಭವನ ತಲುಪಲಿದೆ. ಪ್ರತಿಭಟನೆಯಲ್ಲಿ ಹೆಚ್ಚು ಸಂಖ್ಯೆಯಲ್ಲಿ ರೈತರು ಭಾಗವಹಿಸುವ ಸಾಧ್ಯತೆ ಇರುವುದರಿಂದ ಸದರಿ ಮಾರ್ಗದಲ್ಲಿ ಸಂಚಾರ ವ್ಯವಸ್ಥೆಗೆ ಅಡಚಣೆಯಾಗಬಹುದು.












Click it and Unblock the Notifications