Bhadra Dam: ತುಂಬಿದ ಭದ್ರೆಯ ಒಡಲು: ರೈತರ ಬಾಳು ಹಸನಾಗಲಿ ಎಂದು ಸಂಸದರ ಪ್ರಾರ್ಥನೆ

ದಾವಣಗೆರೆ, ಜುಲೈ 29: ಮುಂಗಾರು ಮಳೆಯ ಅಬ್ಬರಕ್ಕೆ ಭದ್ರಾ ಜಲಾಶಯ ಭರ್ತಿಯಾಗುವ ಹಂತ ತಲುಪಿದೆ. ಲಕ್ಕವಳ್ಳಿಯಲ್ಲಿರುವ ಜಲಾಶಯಕ್ಕೆ ಒಳ ಹರಿವು ಹೆಚ್ಚಿದ್ದು, ಡ್ಯಾಂ ಗರಿಷ್ಟ ಮಟ್ಟ 186 ಅಡಿ ಆಗಿದ್ದು, ಇಂದಿನ ನೀರಿನ ಮಟ್ಟ 181.10 ಅಡಿಗಳು.

ಭದ್ರಾ ಜಲಾಶಯ ಭರ್ತಿಗೆ ಕೆಲವೇ ಅಡಿಗಳು ಬಾಕಿ ಇರುವುದರಿಂದ ಯಾವುದೇ ಕ್ಷಣದಲ್ಲಿ ನದಿಯಲ್ಲಿನ ನೀರಿನ ಪ್ರಮಾಣ ಏರಿಕೆಯಾಗಲಿದ್ದು, ನದಿ ಪಾತ್ರದಲ್ಲಿನ ಜನರು ಎಚ್ಚರಿಕೆಯಿಂದ ಇರಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿ ಜಿ. ಎಂ. ಗಂಗಾಧರಸ್ವಾಮಿ ತಿಳಿಸಿದ್ದಾರೆ.

Bhadra Dam Almost Full Davanagere MP Prabha Mallikarjun Post

ಸಂಸದರ ಪ್ರಾರ್ಥನೆ: ಭದ್ರಾ ಜಲಾಶಯ ದಾವಣಗೆರೆ ಜಿಲ್ಲೆಯ ಜನರ ಜೀವನಾಡಿಯಾಗಿದೆ. ಡ್ಯಾಂ ಭರ್ತಿಯಾದರೆ ಜಿಲ್ಲೆಯ ಜನರು, ರೈತರು ಸಂತಸಗೊಳ್ಳುತ್ತಾರೆ. ಈಗ ಜಲಾಶಯ ಭರ್ತಿಯಾಗುವ ಹಂತ ತಲುಪಿದ್ದು, ರೈತರ ಬಾಳು ಹಸನಾಗಲಿ ಎಂದು ಸಂಸದರು ಪ್ರಾರ್ಥಿಸಿದ್ದಾರೆ.

ಈ ಕುರಿತು ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಫೇಸ್‌ಬುಕ್ ಪೋಸ್ಟ್ ಹಾಕಿದ್ದಾರೆ. 'ಆತ್ಮೀಯ ರೈತ ಬಾಂಧವರೇ, ಇಂದು ಬೆಳಗ್ಗೆ 11 ಗಂಟೆಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮಧು ಬಂಗಾರಪ್ಪನವರ ಅಧ್ಯಕ್ಷತೆಯಲ್ಲಿ 85ನೇ ನೀರಾವರಿ ಸಲಹಾ ಸಮಿತಿ ಸಭೆ, ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಕಚೇರಿ ಸಭಾಂಗಣ ಮಲವಗೊಪ್ಪದಲ್ಲಿ ನಡೆಯುತ್ತಿದೆ' ಎಂದು ಹೇಳಿದ್ದಾರೆ.

'ಈ ಸಭೆಯಲ್ಲಿ ನನ್ನ ಕ್ಷೇತ್ರದ ರೈತರ ಧ್ವನಿಯಾಗಿ ನಾನು ಭಾಗವಹಿಸಲು ಬಯಸಿದ್ದೆ. ಆದರೆ ಲೋಕಸಭಾ ಅಧಿವೇಶನ ನಡೆಯುತ್ತಿದ್ದು, ನಾನು ಅದರಲ್ಲಿ ಭಾಗವಹಿಸಲು ತೆರಳುತ್ತಿರುವುದರಿಂದ ಇಂದಿನ ಈ ಮಹತ್ವವಾದ ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಅದಕ್ಕಾಗಿ ವಿಷಾದಿಸುತ್ತೇನೆ' ಎಂದು ತಿಳಿಸಿದ್ದಾರೆ.

'ದೇವರ ಕೃಪೆಯಿಂದ ಈ ಬಾರಿ ನಮ್ಮ ಜೀವನಾಡಿ ಭದ್ರಾ ಡ್ಯಾಮ್ ತುಂಬಿದ್ದು, ಇಂದಿನ ಸಭೆಯಲ್ಲಿ ರಾಜಕಾರಣಿಗಳು, ರೈತ ಮುಖಂಡರುಗಳು ಸೂಕ್ತ ರೀತಿಯ ನಿರ್ಧಾರ ತೆಗೆದುಕೊಳ್ಳುವ ಮೂಲಕ ಮಳೆಗಾಲದ ಹಾಗೂ ಬೇಸಿಗೆ ಕಾಲದ ಬೆಳೆಗಳಿಗೆ ಎಲ್ಲಾ ರೈತರಿಗೂ ಅನುಕೂಲವಾಗುವ ತೀರ್ಮಾನ ತೆಗೆದುಕೊಳ್ಳಲಿ ಹಾಗೂ ಕಡೆಯ ಭಾಗದ ರೈತರಿಗೂ ಸಕಾಲದಲ್ಲಿ ನೀರು ದೊರೆಯುವಂತಾಗಲಿ, ಶಾಂತಿ ಸಾಗರ ಸೇರಿದಂತೆ ಇತರ ಕೆರೆಗಳಿಗೂ ನೀರು ತುಂಬಿಸುವಂತಹಾಗಲಿ ಎಂದು ಆಶಿಸುತ್ತೇನೆ' ಎಂದು ಪೋಸ್ಟ್ ಹಾಕಿದ್ದಾರೆ.

'ಇಂದಿನ ಸಭೆ ಯಶಸ್ವಿಯಾಗಲಿ, ನಮ್ಮ ರೈತರ ಬಾಳು ಹಸನಾಗಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ'
ಡಾ. ಪ್ರಭಾ ಮಲ್ಲಿಕಾರ್ಜುನ್
ಲೋಕಸಭಾ ಸದಸ್ಯರು
ದಾವಣಗೆರೆ ಕ್ಷೇತ್ರ ಎಂದು ಸಂಸದರು ಪೋಸ್ಟ್ ಮಾಡಿದ್ದಾರೆ.

ಜನರು ಎಚ್ಚರಿಕೆಯಿಂದಿರಲು ಸೂಚನೆ: ಭದ್ರಾ ಜಲಾಶಯ ಭರ್ತಿಗೆ ಕೆಲವೇ ಅಡಿಗಳು ಬಾಕಿ ಇರುವುದರಿಂದ ಯಾವುದೇ ಕ್ಷಣದಲ್ಲಿ ನದಿಯಲ್ಲಿನ ನೀರಿನ ಪ್ರಮಾಣ ಏರಿಕೆಯಾಗಲಿದ್ದು ನದಿ ಪಾತ್ರದ ಜನರಿಗೆ ಎಚ್ಚರಿಕೆ ರವಾನೆ ಮಾಡಲಾಗಿದೆ.

ತುಂಗಾ ಜಲಾಶಯದಿಂದ 74,105 ಕ್ಯೂಸೆಕ್‌ ನೀರು ತುಂಗಭದ್ರಾ ನದಿಯಲ್ಲಿ ಹರಿಯುತ್ತಿದೆ. ಭದ್ರಾ ಜಲಾಶಯ ಭರ್ತಿಯಾಗಲು 5 ಅಡಿ ಬಾಕಿ ಇದ್ದು 35,557 ಕ್ಯೂಸೆಕ್ ಒಳಹರಿವು ಇದೆ. ಮತ್ತು ಮಲೆನಾಡಿನಲ್ಲಿ ಉತ್ತಮ ಮಳೆ ಬರುತ್ತಿರುವುದರಿಂದ ನೀರಿನ ಒಳಹರಿವು ಹೆಚ್ಚಲಿರುವುದರಿಂದ ಭದ್ರಾ ಜಲಾಶಯ ಭರ್ತಿಯಾಗಿ ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡಬಹುದಾಗಿದ್ದು ನದಿಪಾತ್ರದಲ್ಲಿನ ಜನರು ತಮ್ಮ ಆಸ್ತಿ, ಜಾನುವಾರುಗಳನ್ನು ರಕ್ಷಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಎಚ್ಚರ ವಹಿಸಬೇಕು ಎಂದು ಕರೆ ನೀಡಲಾಗಿದೆ.

ತುಂಗಾ ನದಿಯಿಂದ ನೀರು ಬರುತ್ತಿದ್ದು ಭದ್ರಾ ತುಂಬಿದ ನಂತರ ನದಿಯಲ್ಲಿನ ನೀರಿನ ಪ್ರಮಾಣ ಗಣನೀಯವಾಗಿ ಹೆಚ್ಚಲಿದ್ದು, ಇದರಿಂದ ನದಿಯಲ್ಲಿ ಅಪಾಯ ಮಟ್ಟದಲ್ಲಿ ನೀರಿದೆ. ಇದರಿಂದ ಹೊನ್ನಾಳಿ, ನ್ಯಾಮತಿ, ಹರಿಹರ ತಾಲ್ಲೂಕುಗಳಲ್ಲಿನ ನದಿಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ.

ಹೊನ್ನಾಳಿ ಪಟ್ಟಣದ ನದಿ ತೀರದ ಬಾಲರಾಜ್‌ಘಾಟ್ ಪ್ರದೇಶದ 11 ಕುಟುಂಬದ 64 ಜನರನ್ನು ಅಂಬೇಡ್ಕರ್ ಭವನದಲ್ಲಿನ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ದಾವಣಗೆರೆ ಜಿಲ್ಲಾಡಳಿತ ಮಾಹಿತಿ ನೀಡಿದೆ. ಮತ್ತು ನದಿ ಪಾತ್ರದಲ್ಲಿನ ಎಲ್ಲಾ ಗ್ರಾಮಗಳಲ್ಲಿ ಜನ, ಜಾನುವಾರುಗಳನ್ನು ನದಿಗೆ ಇಳಿಯದಂತೆ ಎಚ್ಚರ ವಹಿಸಲು ಜಾಗೃತಿ ಮೂಡಿಸಲಾಗುತ್ತಿದೆ.

ಪ್ರವಾಹ ಪರಿಸ್ಥಿತಿ ಎದುರಿಸಲು ಗ್ರಾಮ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ರಚಿಸಲಾಗಿದೆ ಮತ್ತು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ತುರ್ತು ನಿಗಾ ಘಟಕಗಳನ್ನು ಸನ್ನದ್ದವಾಗಿಡಲಾಗಿದೆ ಮತ್ತು ಅಧಿಕಾರಿಗಳು ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+